ಕಳೆದ ವಾರದಿಂದ ಕಾಫಿ ಮಲೆನಾಡಿನಲ್ಲಿ ಮಳೆಯಿಂದ ಜನ ನಿಟ್ಟಿಸಿರು ಬಿಟ್ಟಿದ್ದರು. ಮತ್ತೆ ವರುಣ ಅಬ್ಬರ ಶುರುವಾಗಿರುವುದರಿಂದ ಮಲೆನಾಡಿನಲ್ಲಿ ಜಿಲ್ಲಾಧಿಕಾರಿ ರೆಡ್ ಅಲರ್ಟ್ ಘೋಷಿಸಿದ್ದಾರೆ.
ಜಿಲ್ಲೆಯ ನರಸಿಂಹರಾಜಪುರ, ಕೊಪ್ಪ, ಶೃಂಗೇರಿ, ಹಾಗೂ ಚಿಕ್ಕಮಗಳೂರು ತಾಲೂಕಿನ ಹಲವೆಡೆ ಹೆಚ್ಚಿನ ಮಳೆಯಾಗಿದೆ. ಈ ತಿಂಗಳಲ್ಲಿ ಮುಂಗಾರು ಮಳೆ ಹೆಚ್ಚಿದ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜೂನ್ 12 ರಂದು ಆರೆಂಜ್ ಅಲರ್ಟ್, ಜೂನ್ 13, 14 ರಂದು ರೆಡ್ ಅಲರ್ಟ್ ಘೋಷಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಸಾರ್ವಜನಿಕರು, ಪ್ರವಾಸಿಗರು ಮಳೆ ಕಡಿಮೆಯಾಗುವವರೆಗೆ ನದಿಗಳಿಗೆ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಕಟ್ಟೆಚ್ಚರ ವಹಿಸಬೇಕಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಸಂಚಾರಿ ನಿಯಮ ಉಲ್ಲಂಘನೆ:14 ಸಾವಿರ ದಂಡ ವಿಧಿಸಿದ ನ್ಯಾಯಾಲಯ
ಈ ಕುರಿತು ಪ್ರವಾಸಿಗರು ಯಾವುದೇ ಅಪಾಯಕಾರಿ ಘಟನೆಗಳಿಗೆ ಅವಕಾಶ ಕೊಡದೆ ಜಿಲ್ಲಾಡಳಿತಕ್ಕೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ವಿಪತ್ತು ನಿರ್ವಹಣೆ ಪ್ರಾಧಿಕಾರದ ಅಧ್ಯಕ್ಷರಾದ ಮೀನಾ ನಾಗರಾಜ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.