ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದ ಯಾವುದೇ ಸಾವು ಸಂಭವಿಸಿಲ್ಲ:‌ ಸಿಎಂಗೆ ಆರೋಗ್ಯ ಇಲಾಖೆ ಮಾಹಿತಿ

Date:

Advertisements

ಕಳೆದ 10 ದಿನಗಳಲ್ಲಿ 5 ಸಾವಿರ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, 862‌ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಆದರೆ ರಾಜ್ಯದಲ್ಲಿ ಕೋವಿಡ್ ಸೋಂಕಿನಿಂದಾಗಿ ಯಾವುದೇ ಸಾವು ಸಂಭವಿಸಿಲ್ಲ ಎಂದು ಆರೋಗ್ಯ ಇಲಾಖೆಯ ಅಧಿಕಾರಿಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಮನಕ್ಕೆ ತಂದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬುಧವಾರ ಸಂಜೆ ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ಕುರಿತು ನಡೆಸಿದ ಆರೋಗ್ಯ ಇಲಾಖೆ ಸಚಿವ ದಿನೇಶ್‌ ಗುಂಡೂರಾವ್‌ ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

“ಇದುವರೆಗೆ 11ಸಾವು ಸಂಭವಿಸಿದೆ. ಆದರೂ ಇದರಲ್ಲಿ 10 ಪ್ರಕರಣಗಳಲ್ಲಿ ಕೋವಿಡ್ ಕಾರಣದಿಂದ ಸಾವು ಸಂಭವಿಸಿಲ್ಲ. ವಿವಿಧ ರೀತಿಯ ಅನಾರೋಗ್ಯಕ್ಕೆ ತುತ್ತಾಗಿದ್ದ ರೋಗಿಗಳು ಈ ಪ್ರಕರಣಗಳಲ್ಲಿ ಸಾವನ್ನಪ್ಪಿದ್ದಾರೆ. ಒಂದು ಪ್ರಕರಣದ ಆಡಿಟ್ ವರದಿ ಬರಬೇಕಾಗಿದೆ” ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

Advertisements

“ರಾಜ್ಯದಲ್ಲಿ ಮೇ ತಿಂಗಳ ಬಳಿಕ ಕೋವಿಡ್ ಪರೀಕ್ಷೆ ಹೆಚ್ಚಿಸಲಾಗಿದೆ. ಈ ತಿಂಗಳು ಪ್ರತಿ ದಿನ ಸರಾಸರಿ 500 ಪರೀಕ್ಷೆ ನಡೆಸುತ್ತಿದ್ದೇವೆ” ಎಂದು ಸಿಎಂಗೆ ತಿಳಿಸಿದರು.

“ಕೋವಿಡ್ ಬಗ್ಗೆ ಯಾರೂ ಅನಗತ್ಯ ಗೊಂದಲ ಮೂಡಿಸಬಾರದು. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಎಲ್ಲ ಆಸ್ಪತ್ರೆಗಳಲ್ಲಿ ಕೋವಿಡ್ ಪ್ರಕರಣಗಳನ್ನು ನಿಭಾಯಿಸಲು ಸೂಕ್ತ ವ್ಯವಸ್ಥೆಯನ್ನು ಕೈಗೊಳ್ಳಬೇಕು. ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಖಾಸಗಿ ಆಸ್ಪತ್ರೆಗಳಲ್ಲಿ ಅನಗತ್ಯವಾಗಿ ಕೋವಿಡ್ ಪರೀಕ್ಷೆ ಹೆಸರಿನಲ್ಲಿ ದುಬಾರಿ ಶುಲ್ಕ ವಿಧಿಸುತ್ತಿರುವ ದೂರುಗಳ ಬಗ್ಗೆ ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಆತಂಕದ ಸ್ಥಿತಿ ಇಲ್ಲ: ಗುಂಡೂರಾವ್

“ಕೋವಿಡ್ ಸೋಂಕು ಹತೋಟಿಯಲ್ಲಿದ್ದು ಜನರು ಆತಂಕಕ್ಕೆ ಒಳಗಾಗುವ ಸ್ಥಿತಿ ಇಲ್ಲ. ರಾಜ್ಯದಲ್ಲಿ ಕೋವಿಡ್ ಪಾಸಿಟಿವ್ ಬಂದವರಲ್ಲಿ ಸಾವಿಗೀಡಾಗಿರುವ 11 ಜನರಲ್ಲಿ 10 ಜನರ ಡೆತ್ ಆಡಿಟ್ ರಿಪೋರ್ಟ್ ಬಂದಿದೆ. ಡೆತ್ ಆಡಿಟ್ ರಿಪೋರ್ಟ್ ಪ್ರಕಾರ 10 ಜನರು ಇತರ ಮಾರಕ ಕಾಯಿಲೆಗಳಾದ ಹೃದಯಸಂಬಂಧಿ, ಕಿಡ್ನಿ, ಅಂಗಾಂಗ ವೈಫಲ್ಯದಂತಹ ಕಾರಣಗಳಿಂದ ಸಾವನ್ನಪ್ಪಿದ್ದು, ಕೋವಿಡ್ ಕಾರಣವಲ್ಲ ಎಂಬುದು ಸ್ಪಷ್ಟವಾಗಿದೆ. ಇನ್ನು ಒಬ್ಬರ ಡೆತ್ ಆಡಿಟ್ ರಿಪೋರ್ಟ್ ಬರುವುದು ಬಾಕಿ ಇದೆ” ಎಂದು ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದರು.‌

“ಕೋವಿಡ್ ಡೆತ್ ಎಂದಾಕ್ಷಣ ಅನಗತ್ಯವಾಗಿ ಜನರು ಆತಂಕಕ್ಕೆ ಒಳಗಾಗುವುದು ಸಹಜ.. ಆದರೆ ವಾಸ್ತವ ಚಿತ್ರಣ ಬೇರೆಯೇ ಆಗಿರುತ್ತದೆ. ಈಗಿರುವ ಕೋವಿಡ್ ರೂಪಾಂತರಿ ವೈರಸ್ ಸೌಮ್ಯ ಸ್ವಭಾವದ್ದಾಗಿದೆ. 500 ಕ್ಕೂ ಹೆಚ್ಚು ಕೋವಿಡ್ ಪಾಸಿಟಿವ್ ಪ್ರಕರಣಗಳಲ್ಲಿ ಕೇವಲ ಇಬ್ಬರು ಮಾತ್ರ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಆತಂಕದ ಸ್ಥಿತಿ ಇಲ್ಲ” ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

Download Eedina App Android / iOS

X