ಕೊಪ್ಪಳ | 2025ನೇ ಸಾಲಿನ ನಾಗರಿಕ ಬಂದೂಕು ತರಬೇತಿಗೆ ಅರ್ಜಿ ಆಹ್ವಾನ

Date:

Advertisements

ಕೊಪ್ಪಳ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲೆಯ ನಾಗರಿಕರಿಗೆ ಪ್ರಸಕ್ತ 2025ನೇ ಸಾಲಿನ ಅವಧಿಗಾಗಿ ನಾಗರಿಕ ಬಂದೂಕು ತರಬೇತಿಯನ್ನು ಹಮ್ಮಿಕೊಳ್ಳಲಾಗಿದ್ದು, ಆಸಕ್ತ ನಾಗರಿಕರಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಜೂನ್ 26 ರಿಂದ 29 ರವರೆಗೆ ನಾಲ್ಕು ದಿನಗಳ ಕಾಲ ಬೆಳಗ್ಗೆ 7 ಗಂಟೆಯಿಂದ 9 ಗಂಟೆಯವರೆಗೆ ನಾಗರಿಕ ಬಂದೂಕು ತರಬೇತಿಯನ್ನು ನೀಡಲಾಗುತ್ತದೆ. ಜೂನ್ 26 ರಿಂದ 28 ರವರೆಗೆ 3 ದಿನಗಳು ಬಂದೂಕು ತರಬೇತಿಯನ್ನು ನೀಡಿ, ಜೂನ್ 29 ರಂದು ಗುರಿ ಅಭ್ಯಾಸ ಮಾಡಿಸಲಾಗುವುದು.

ನಾಗರಿಕ ಬಂದೂಕು ತರಬೇತಿಯನ್ನು ಪಡೆಯಲು ಇಚ್ಛಿಸುವ ಜಿಲ್ಲೆಯ ಆಸಕ್ತ ನಾಗರಿಕರು ಜೂನ್ 12 ರಿಂದ 22 ರವರೆಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ಅರ್ಜಿಗಳನ್ನು ಪಡೆದು, ಭರ್ತಿ ಮಾಡಿ ಆಧಾರ್ ಕಾರ್ಡ್, ಮತದಾರರ ಗುರುತಿನ ಚೀಟಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳ ಜೆರಾಕ್ಸ್ ಪ್ರತಿಗಳು, ವೈದ್ಯಕೀಯ ಸದೃಢ ಪ್ರಮಾಣ ಪತ್ರ, ವಾಸಸ್ಥಳ ಪ್ರಮಾಣ ಪತ್ರ ಹಾಗೂ 3 ಭಾವಚಿತ್ರಗಳೊಂದಿಗೆ ಸಲ್ಲಿಸಬೇಕು.

Advertisements

21 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮಾತ್ರ ತರಬೇತಿ ನೀಡಲಾಗುವುದು. ತರಬೇತಿಯಲ್ಲಿ ಭಾಗವಹಿಸುವ ನಾಗರಿಕರು ನಿಯಮಿತವಾಗಿ ತರಬೇತಿಗೆ ಹಾಜರಾಗಬೇಕು ಹಾಗೂ ಶಿಸ್ತು ಪಾಲನೆ ಮಾಡಬೇಕು. ತರಬೇತಿಯಲ್ಲಿ ಅಶಿಸ್ತು ಕಂಡುಬಂದಲ್ಲಿ ಅಂತವರನ್ನು ತರಬೇತಿಯಿಂದ ವಜಾ ಮಾಡಲಾಗುವುದು.

ಇದನ್ನೂ ಓದಿ: ಕೊಪ್ಪಳ | ಸಾವಯವ ಕೃಷಿ ಪದ್ಧತಿ ಲಾಭದಾಯಕ: ಜಿಲ್ಲಾಧಿಕಾರಿ ನಳಿನ್ ಅತುಲ್

ತರಬೇತಿಗೆ ಹಾಜರಾಗುವ ಮಹಿಳಾ ಅಭ್ಯರ್ಥಿಗಳು ಕಡ್ಡಾಯವಾಗಿ ಬಿಳಿ ಚೂಡಿದಾರ/ಪ್ಯಾಂಟ್ ಹಾಗೂ ಪುರುಷ ಅಭ್ಯರ್ಥಿಗಳು ಬಿಳಿ ಟೀ ಶರ್ಟ್, ಬಿಳಿ ಟ್ರ್ಯಾಕ್‌ಪ್ಯಾಂಟ್, ಶೂ ಧರಿಸತಕ್ಕದ್ದು. ತರಬೇತಿಯ ಅಭ್ಯರ್ಥಿಗಳು ನಿಗದಿತ ಅರ್ಜಿ ಶುಲ್ಕ ಮತ್ತು ಮದ್ದು ಗುಂಡುಗಳ ಶುಲ್ಕವನ್ನು ಭರಿಸಬೇಕು. ತರಬೇತಿ ಅಭ್ಯರ್ಥಿಗಳು ದೃಷ್ಟಿದೋಷ ಹೊಂದಿರಬಾರದು ಹಾಗೂ ಮಾನಸಿಕ ಮತ್ತು ದೈಹಿಕವಾಗಿ ಸದೃಢವಾಗಿರುವ ಬಗ್ಗೆ ವೈದ್ಯಕೀಯ ಪ್ರಮಾಣ ಪತ್ರ ಸಲ್ಲಿಸಬೇಕು.

ಅಭ್ಯರ್ಥಿಗಳು ತರಬೇತಿ ವೇಳೆ ನೋಟ್‌ಬುಕ್ ಮತ್ತು ಪೆನ್ ತರತಕ್ಕದ್ದು. ಯಶಸ್ವಿಯಾಗಿ ತರಬೇತಿಯನ್ನು ಪೂರ್ಣಗೊಳಿಸಿದ ಹಾಗೂ ಪರೀಕ್ಷೆಯಲ್ಲಿ ಉತ್ತೀರ್ಣರಾದವರಿಗೆ ಮಾತ್ರ ಪ್ರಮಾಣ ಪತ್ರ ನೀಡಲಾಗುವುದು. ತರಬೇತಿಯ ಅವಧಿಯಲ್ಲಿ ಏನಾದರೂ ಅಹಿತಕರ ಘಟನೆ ಸಂಭವಿಸಿದಲ್ಲಿ ಅದಕ್ಕೆ ಅಭ್ಯರ್ಥಿಯೇ ಸಂಪೂರ್ಣ ಜವಾಬ್ದಾರರಾಗಿರುತ್ತಾರೆ. ಅರ್ಜಿ ಸಲ್ಲಿಸುವ ನಾಗರಿಕರು ಯಾವುದೇ ಅಪರಾಧಿಕ ಹಿನ್ನೆಲೆಯನ್ನು ಹೊಂದಿರದೇ ಇರುವ ಕುರಿತು ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಯಿಂದ ನಿರಾಕ್ಷೇಪಣಾ ಪ್ರಮಾಣ ಪತ್ರ ಸಲ್ಲಿಸಬೇಕು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X