Air India A1-171 ವಿಮಾನ ಪತನದಲ್ಲಿ 117 ಮಂದಿ ಮೃತ : ದುರಂತಕ್ಕೆ ಟಾಟಾ ಗ್ರೂಪ್‌ ಸಂತಾಪ

Date:

Advertisements

ಗುಜರಾತಿನ ಅಹಮದಾಬಾದ್‌ನಿಂದ ಲಂಡನ್‌ಗೆ ಹೊರಟಿದ್ದ ಏರ್‌ ಇಂಡಿಯಾ A1- 171 ವಿಮಾನ ಪತನದಲ್ಲಿ 242 ಪ್ರಯಾಣಿಕರ ಪೈಕಿ 117ಮಂದಿ ಮೃತಪಟ್ಟಿದ್ದಾರೆ. 132 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಾತ್ಕಾಲಿಕವಾಗಿ ಏರ್ಪೋರ್ಟ್‌ ಬಂದ್‌ ಮಾಡಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ವಾಯುಯಾನ ತನಿಖಾ ಸಂಸ್ಥೆಯಿಂದ ತನಿಖೆ ಆರಂಭವಾಗಿದೆ. ಘಟನಾ ಸ್ಥಳಕ್ಕೆ ಗೃಹಸಚಿವ ಅಮಿತ್‌ ಶಾ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಧಾನಿ ಮೋದಿ ಸಂತಾಪ ವ್ಯಕ್ತಪಡಿಸಿದ್ದಾರೆ. ರಕ್ಷಣಾ ಕಾರ್ಯ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ವಿಮಾನ ಟೇಕ್‌ ಆಫ್‌ ಆದ ಕೇವಲ ಐದು ನಿಮಿಷದಲ್ಲಿ, ವಿಮಾನದಲ್ಲಿ ಕಾಣಿಸಿಕೊಂಡ ತಾಂತ್ರಿಕ ದೋಷದಿಂದ ಪತನಗೊಂಡಿದೆ ಎಂದು ವರದಿಯಾಗಿದೆ. ಎರಡು ನವಜಾತ ಶಿಶುಗಳು, ಹನ್ನೊಂದು ಮಕ್ಕಳು ಮೃತರಲ್ಲಿ ಸೇರಿದ್ದಾರೆ ಎಂದು ಗೊತ್ತಾಗಿದೆ. ದುರಂತಕ್ಕೆ ಏರ್‌ ಇಂಡಿಯಾ ವ್ಯವಸ್ಥಾಪಕ ಚಂದ್ರಶೇಖರನ್‌ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

Advertisements

ಮಧ್ಯಾಹ್ನ ಒಂದೂವರೆಯ ವೇಳೆಗೆ ಟೇಕ್‌ ಆಫ್‌ ಆದ ವಿಮಾನ ಕೇವಲ ಎಂಟುನೂರು ಅಡಿ ಎತ್ತರದಿಂದ ವಸತಿ ಪ್ರದೇಶದಲ್ಲಿ ಪತನಗೊಂಡಿದೆ. ಪಾರ್ಕಿಂಗ್‌ ಮಾಡಿದ್ದ ಕಾರುಗಳು ಸುಟ್ಟು ಕರಕಲಾಗಿದೆ. ನಗರದ ಖಾಸಗಿ ಆಸ್ಪತ್ರೆಗಳಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X