ಧಾರಾಕಾರವಾಗಿ ಸುರಿದ ಮಳೆಗೆ ವ್ಯಕ್ತಿಯೋರ್ವ ಚರಂಡಿ ನೀರಿನಲ್ಲಿ ಕೊಚ್ಚಿಹೋದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಹುಸೇನ್ ಕಳಸ (55) ಚರಂಡಿಯಲ್ಲಿ ಕೊಚ್ಚಿಹೋದ ವ್ಯಕ್ತಿಯೆಂದು ಗುರುತಿಸಲಾಗಿದ್ದು, ಬೈಕ್‌ನ ಹಿಂಬದಿಯಲ್ಲಿ ಕುಳಿತು ಬೆಳಗಲಿ ರಸ್ತೆಯ ಸೇತುವೆ ಹತ್ತಿರ ಹೊರಟಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಚರಂಡಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎನ್ನಲಾಗುತ್ತಿದೆ.
ಹುಬ್ಬಳ್ಳಿಯ ಬೀರಬಂದ ಓಣಿಯ ನಿವಾಸಿಯಾಗಿದ್ದ ಹುಸೇನ್ ಹುಡುಕಾಟದಲ್ಲಿ ಅಗ್ನಿಶಾಮಕ ದಳ, ಪೊಲೀಸ್ ಸಿಬ್ಬಂದಿ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳು ನಿರತರಾಗಿದ್ದಾರೆ. ಕಸಬಾ ಪೇಠ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಹುಸೇನ್ ಇನ್ನೂ ಪತ್ತೆಯಾಗಿಲ್ಲ ಎನ್ನಲಾಗಿದೆ.
ಇದನ್ನೂ ಓದಿ: ಹುಬ್ಬಳ್ಳಿ | ಗಾಂಜಾ ಮಾರಾಟ; ಮೂವರ ಬಂಧನ