ಶಿವಮೊಗ್ಗ | ಉತ್ತಮ ಗುಣ, ನಡತೆ, ಆಧಾರ 353 ರೌಡಿ ಶೀಟರ್ಸ್ ಗೆ ಬಿಗ್ ರಿಲೀಫ್

Date:

Advertisements

ಶಿವಮೊಗ್ಗ ಜಿಲ್ಲೆಯಲ್ಲಿ ಇತ್ತೀಚಿನ 10 ವರ್ಷಗಳಲ್ಲಿ ಯಾವುದೇ ಪ್ರಕರಣ ದಾಖಲಾಗದೇ ಇರುವಂತಹ ಹಾಗೂ ಉತ್ತಮ ಗುಣ, ನಡತೆ ಹೊಂದಿರುವ ಹಾಗೂ ಮೃತ ಪಟ್ಟಂತಹ ಹಾಗೂ ವಯಸ್ಸಿನ ಆಧಾರದ ಮೇಲೆ ಶಿವಮೊಗ್ಗ – ಎ ಉಪ ವಿಭಾಗದ – 17, ಶಿವಮೊಗ್ಗ – ಬಿ ಉಪ ವಿಭಾಗದ – 60, ಭದ್ರಾವತಿ ಉಪ ವಿಭಾಗದ – 72, ಸಾಗರ ಉಪ ವಿಭಾಗದ – 55, ಶಿಕಾರಿಪುರ ಉಪ ವಿಭಾಗದ – 124 ಹಾಗೂ ತೀರ್ಥಹಳ್ಳಿ ಉಪ ವಿಭಾಗದ – 25 ಜನ ರೌಡಿ ಆಸಾಮಿಗಳು ಸೇರಿ ಒಟ್ಟು 353 ಜನ ರೌಡಿಗಳಿಗೆ ರಿಲೀಫ್ ಸಿಕ್ಕಿದೆ.

ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮುಕ್ತಾಯ ಮಾಡುವ ಸಂಬಂಧ ಇಂದು ಮಧ್ಯಾಹ್ನ ಪೊಲೀಸ್ ವರಿಷ್ಠಾಧಿಕಾರಿಗಳಾದ ಮಿಥುನ್ ಕುಮಾರ್ ಜಿ. ಕೆ, ನೇತೃತ್ವದಲ್ಲಿ, ಶಿವಮೊಗ್ಗ ಡಿಎಆರ್ ಪೊಲೀಸ್ ಕವಾಯತು ಮೈಧಾನದಲ್ಲಿ ರೌಡಿಗಳ ಪರೇಡ್ ಕರೆಯಲಾಗಿತ್ತು, ಪರೇಡ್ ನಲ್ಲಿ ಹಾಜರಿದ್ದ ರೌಡಿಶೀಟರ್ ಕೆಲವೊಂದು ಸೂಚನೆಗಳನ್ನು ನೀಡಲಾಗಿದೆ.

1001742632

ಯಾವುದೋ ಕೆಟ್ಟ ಸಂದರ್ಭ ಹಾಗೂ ನಿಮ್ಮ ನಡೆತೆಯಿಂದ ನಿಮ್ಮಗಳ ವಿರುದ್ಧ ಈ ಹಿಂದೆ ರೌಡಿ ಹಾಳೆಯನ್ನು ತೆರೆದಿದ್ದು, ಆದರೆ ಇತ್ತೀಚಿನ ದಿನಗಳಲ್ಲಿ ನಿಮ್ಮ ವಿರುದ್ಧ ಯಾವುದೇ ಪ್ರಕರಣಗಳು ದಾಖಲಾಗದೇ ಇರುವುದರಿಂದ ಹಾಗೂ ಸಮಾಜದಲ್ಲಿ ನಿಮ್ಮ ನಡತೆಯನ್ನು ಗಮನದಲ್ಲಿಟ್ಟುಕೊಂಡು ಕೆಲವು ಮಾನದಂಡಗಳ ಆಧಾರದಲ್ಲಿ ನಿಮ್ಮ ವಿರುದ್ಧ ಈ ಹಿಂದೆ ತೆರೆಯಲಾಗಿದ್ದ ರೌಡಿ ಹಾಳೆಗಳನ್ನು ತಾತ್ಕಾಲಿಕವಾಗಿ ಮಾಡುತ್ತಿದ್ದೇವೆ.

Advertisements

ಸಮಾಜದಲ್ಲಿ ಎಲ್ಲ ನಾಗರೀಕರ ರೀತಿ ನೀವು ಸಹಾ ಉತ್ತಮ ಜೀವನ ನಡೆಸಲು ಇದು ಒಂದು ಸದಾವಕಾಶವಾಗಿರುತ್ತದೆ.ಇನ್ನು ಮುಂದೆ ಸಮಾಜದಲ್ಲಿ ಉತ್ತಮ ಪ್ರಜೆಗಳ ರೀತಿ ಜೀವನ ನಡೆಸಿ.

ನಿಮ್ಮೆಲ್ಲರ ವಿರುದ್ಧ ಪೊಲೀಸ್ ಇಲಾಖೆಯು ಸೂಕ್ಷ್ಮವಾಗಿ ಗಮನ ಹರಿಸಲಿದ್ದು, ನೀವು ಯಾವುದೇ ಸಣ್ಣ ಪುಟ್ಟ ಕಾನೂನು ಬಾಹೀರ ಕೃತ್ಯಗಳಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಬಂದರೂ ಸಹಾ ತಾತ್ಕಾಲಿಕವಾಗಿ ಮುಕ್ತಾಯ ಮಾಡಲಾದ ರೌಡಿ ಹಾಳೆಯನ್ನು ಪುನಾಃ ತೆರೆಯಲಾಗುತ್ತದೆ ಹಾಗೂ ಕಾನೂನು ರೀತ್ಯಾ ಕ್ರಮ ಜರುಗಿಸಲಾಗುತ್ತದೆ.

1001742262

ನಿಮ್ಮ ಕುಟುಂಬ,ಸಮಾಜ ಹಾಗೂ ಪೊಲೀಸ್ ಇಲಾಖೆಯೊಂದಿಗೆ ನಿಷ್ಠೆಯಿಂದಿರಿ, ಜೀವನೋಪಾಯಕ್ಕಾಗಿ ನಿರ್ವಹಿಸುವ ಕರ್ತವ್ಯಗಳನ್ನು ಶಿಸ್ತಿನಿಂದ ಮಾಡಿ, ಸಮಾಜದಲ್ಲಿ ಒಬ್ಬ ಉತ್ತಮ ನಾಗರೀಕನಾಗಿ ರೂಪುಗೊಳ್ಳಿ. ಸಮಾಜದಲ್ಲಿ ಒಳ್ಳೆಯ ಸ್ಥಾನ ಮಾನ ಗಳಿಸಲು ನಿಮಗೆ ಒದಗಿ ಬಂದ ಸದಾವಕಾಶ ಸಿಕ್ಕಿದ್ದು, ಇದರ ಉಪಯೋಗ ಪಡೆಯಿರಿ ಎಂದು ತಿಳಿಸಲಾಗಿದೆ.

ತಾತ್ಕಾಲಿಕವಾಗಿ ಮುಕ್ತಾಯ ಮಾಡಲಾದ ರೌಡಿ ಹಾಳೆಯು ಯಾವುದೇ ಕಾರಣಕ್ಕೆ, ಪುನಃ ತೆರೆಯುವ ಸಂದರ್ಭ ಬಂದರೇ ನಿಮ್ಮ ಜೀವನ ಪರ್ಯಂತ ನಿಮ್ಮ ವಿರುದ್ಧ ತೆರೆಯಲಾದ ರೌಡಿ ಹಾಳೆಯು ಪ್ರಚಲಿತದಲ್ಲಿರುತ್ತದೆ ಹಾಗೂ ನೀವು ಪೊಲೀಸ್ ಇಲಾಖೆಯ ನೇರ ಕಣ್ಗಾವಲಿನಲ್ಲಿರುತ್ತೀರಿ ಹಾಗೂ ಕಾನೂನು ರೀತ್ಯಾ ಕ್ರಮ ಎದುರಿಸಬೇಕಾಗುತ್ತದೆ ಎಂದು ತಿಳಿಸಲಾಗಿದೆ.

ಎಲ್ಲರು ಸನ್ನಡತೆಯಿಂದ ಜೀವನ ನಡೆಸಿ, ನಿಮ್ಮ ಸುತ್ತ ಮುತ್ತಲು ನಡೆಯುವ ಯಾವುದೇ ಘಟನೆಗಳ ಬಗ್ಗೆ ನಿಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ತಿಳಿಸಲಾಗಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X