ಗುಜರಾತನ ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ಕರ್ನಾಟಕ ಮೂಲದ ಸಹ ಪೈಲಟ್ ಕ್ಲೈವ್ ಕುಂದರ್ ಮೃತಪಟ್ಟಿದ್ದಾರೆ.
ಕರ್ನಾಟಕದ ಮಂಗಳೂರು ಮೂಲದವಾರದ ಕ್ಲೈವ್ ಕುಂದರ್ ಅವರು ಮುಂಬೈನಲ್ಲಿ ವಾಸವಾಗಿದ್ದರು. ಕ್ಲೈವ್ ಕುಂದರ್ ಫಸ್ಟ್ ಆಫೀಸರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಕ್ಲೈವ್ ಕುಂದರ್ ಅವರಿಗೆ 1100 ಗಂಟೆ ವಿಮಾನ ಹಾರಾಟ ನಡೆಸಿದ ಅನುಭವವಿತ್ತು. ಕ್ಲೈವ್ ಕುಂದರ್ ಅವರು ಪತನಗೊಂಡ ಏರ್ ಇಂಡಿಯಾದ AI-171 ವಿಮಾನದ ಕೋ ಪೈಲಟ್ ಆಗಿದ್ದರು.
ಈ ದುರಂತದಲ್ಲಿ ಗುಜರಾತನ ಬಿಜೆಪಿ ನಾಯಕ, ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಸೇರಿದಂತೆ 242 ಜನರು ಮೃತಪಟ್ಟಿದ್ದಾರೆ ಎಂದು ಅಹಮದಾಬಾದ್ ನಗರ ಪೊಲೀಸ್ ಕಮಿಷನರ್ ಮಾಹಿತಿ ನೀಡಿದ್ದಾರೆ. ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಏರ್ ಇಂಡಿಯಾ ವಿಮಾನ ಟೇಕ್ ಆಫ್ ಆದ ಐದೇ ನಿಮಿಷಕ್ಕೆ ಅಪಘತಕ್ಕೀಡಾಗಿದೆ.
ಇದನ್ನು ಓದಿದ್ದೀರಾ? ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಪತನ; Photo and Video gallery
ಗುಜರಾತ್‌ನ ಅಹಮದಾಬಾದ್‌ನಲ್ಲಿ ಸಂಭವಿಸಿದ ಏರ್ ಇಂಡಿಯಾ ಬೋಯಿಂಗ್ 787-8 ವಿಮಾನ ದುರಂತದಲ್ಲಿ ಪ್ರಯಾಣಿಸುತ್ತಿದ್ದ 242 ಪ್ರಯಾಣಿಕರಲ್ಲಿ ಓರ್ವ ಮಾತ್ರ ಬದುಕಿದ್ದಾನೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ವಿಮಾನದಲ್ಲಿ 232 ಪ್ರಯಾಣಿಕರು ಹಾಗೂ 10 ವಿಮಾನಯನ ಸಿಬ್ಬಂದಿ ಇದ್ದ ವಿಮಾನ ಲಂಡನ್‌ಗೆ ತೆರಳುತ್ತಿದ್ದ ಸಂದರ್ಭದಲ್ಲಿ ತಾಂತ್ರಿಕ ದೋಷದಿಂದ ಅಹಮದಾಬಾದ್‌ನ ಮೇಘಾನಿ ಪ್ರದೇಶದ ಬಿಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್‌ನ ಮೇಲೆ ಬಿದ್ದಿದೆ.