ಮುಖ್ಯಮಂತ್ರಿ ಸಿದ್ದರಾಮಯ್ಯನವರು ಧಾರವಾಡದ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಾರಾಯಣ ಭರಮನಿ ಅವರನ್ನು ಹೊಡೆಯಲು ಕೈ ಎತ್ತಿದ ಘಟನೆಗೆ ಸಂಬಂಧಿಸಿದಂತೆ ಆರ್‌ಟಿಐ ಕಾರ್ಯಕರ್ತ ಭೀಮಪ್ಪ ಗಡಾದ ಅವರು ಕ್ಯಾಂಪ್ ಪೊಲೀಸ್ ಠಾಣೆ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ಗುರುವಾರ ದೂರು ನೀಡಿದರು.
“ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಏಪ್ರಿಲ್ 28ರಂದು ಬೆಳಗಾವಿ ನಗರದಲ್ಲಿ ಕಾಂಗ್ರೆಸ್ ಸಮಾವೇಶ ನಡೆದಿತ್ತು. ಭದ್ರತೆಗೆ ಧಾರವಾಡದ ಎಎಸ್‌ಪಿ ನಾರಾಯಣ ಭರಮನಿ ನೇತೃತ್ವದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು. ವೇದಿಕೆ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡುವಾಗ, ಬಿಜೆಪಿ ಕಾರ್ಯಕರ್ತೆಯರು ನುಗ್ಗಿ ಪ್ರತಿಭಟಿಸಿ, ಗದ್ದಲ ಎಬ್ಬಿಸಿದ್ದರು. ಇದರಿಂದ ಕೋಪಗೊಂಡ ಸಿಎಂ ಸ್ಥಳದಲ್ಲಿದ್ದ ನಾರಾಯಣ ಭರಮನಿ ಅವರ ಮೇಲೆ ಕೋಪಗೊಂಡು ಹೊಡೆಯಲು ಮುಂದಾಗಿದ್ದರು.
ಈ ಸುದ್ದಿ ಓದಿದ್ದೀರಾ? ಉಡುಪಿ | ಕೇಂದ್ರ ಸರ್ಕಾರ ವಿಮಾನ ಯಾನ ಸುರಕ್ಷತೆಯ ಬಗ್ಗೆ ಸಮರ್ಪಕ ಕ್ರಮ ಕೈಗೊಳ್ಳಲಿ – ರಮೇಶ್ ಕಾಂಚನ್
ಮುಖ್ಯಮಂತ್ರಿಯಾಗಿ ಜವಾಬ್ದಾರಿಯುತ ವ್ಯಕ್ತಿಯಾಗಿ ನಾಡಿನ ಸಮಸ್ತ ಚಿಂತನೆ- ಮಂಥನೆಗಳಿಗೆ ಧ್ವನಿಯಾಗುವುದರ ಮೂಲಕ ಕಾರ್ಯಾಂಗದ ಅಧಿಕಾರಿಗಳನ್ನು ಉತ್ತೇಜಿಸುವುದನ್ನು ಮರೆತು, ಕರ್ತವ್ಯನಿರತ ಅಧಿಕಾರಿಗೆ ಕೀಳು ಪದಗಳನ್ನು ಬಳಕೆ ಮಾಡಿದ್ದಲ್ಲದೇ ಗದರಿಸುವ ಧ್ವನಿಯಲ್ಲಿ ‘ಪೋಲಿಸ್ ಸಮವಸ್ತ್ರದ ಮೇಲಿರುವ ಅವರನ್ನು ಹೊಡೆಯಲು ಹೋಗಿ ಅವರ ಆತ್ಮಸ್ಥೆರ್ಯವನ್ನು ಕುಗ್ಗಿಸುವಂಥ ಕೆಲಸ ಮಾಡಿದ್ದಾರೆ. ಶಾಸಕಾಂಗದ ಮುಖ್ಯಸ್ಥರಾಗಿರುವ ಸಿದ್ದರಾಮಯ್ಯ ಅವರ ಈ ನಡೆಯು ಸಂಪೂರ್ಣವಾಗಿ ಸಂವಿಧಾನದ ಆಶಯಕ್ಕೆ ವಿರೋಧವಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.