ಥಗ್ ಲೈಫ್ ಸಿನಿಮಾ ನಿಷೇಧ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

Date:

Advertisements

ಕರ್ನಾಟಕದಲ್ಲಿ ಥಗ್ ಲೈಫ್ ಸಿನಿಮಾ ನಿಷೇಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿದ್ದು, ಪ್ರತಿಕ್ರಿಯೆ ನೀಡುವಂತೆ ಸೂಚಿಸಿದೆ.

ಸಿನಿಮಾಕ್ಕೆ ಕರ್ನಾಟಕದಲ್ಲಿ ಅನಧಿಕೃತ ನಿಷೇಧ ಹೇರಿರುವ ಕುರಿತಂತೆ ಕಮಲ್ ಹಾಸನ್ ಅವರ ಚಿತ್ರ ನಿರ್ಮಾಣ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದೆ. ರಾಜ್ಯ ಹೈಕೋರ್ಟ್​ನಲ್ಲಿ ಅವರಿಗೆ ಅನುಕೂಲವಲ್ಲದ ಆದೇಶ ಬಂದ ಬೆನ್ನಲ್ಲೆ ಸುಪ್ರೀಂ ಕೋರ್ಟ್​​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿರುವ ಕಮಲ್ ಪರ ವಕೀಲರು, ರಾಜ್ಯದಲ್ಲಿ ಕೆಲವು ಧಮನಕಾರಿ ಸಂಘಟನೆಗಳು ಭಾಷೆಯ ಹೆಸರಿನಲ್ಲಿ ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿ ಸಿನಿಮಾದ ವಿರುದ್ಧ ನಿಷೇಧ ಹೇರಿವೆ ಎಂದು ವಾದಿಸಿದ್ದಾರೆ.

ಈ ಮೊದಲು ಇದೇ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್​ನಲ್ಲಿ ವಿಚಾರಣೆ ನಡೆದಾಗ, ಪ್ರಕರಣವನ್ನು ರಾಜ್ಯ ಹೈಕೋರ್ಟ್​​ನಲ್ಲಿಯೇ ಇತ್ಯರ್ಥ ಪಡಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಸೂಚಿಸಿತ್ತು. ಆದರೆ ಕಮಲ್ ಪರ ವಕೀಲರು, ‘ಸಿನಿಮಾದ ಬಿಡುಗಡೆಗೆ ತಡೆ ಒಡ್ಡುತ್ತಿರುವವರ ಜೊತೆ ಸಂಧಾನ ಮಾಡಿಕೊಳ್ಳುವಂತೆ ಹೈಕೋರ್ಟ್ ಸೂಚಿಸಿದೆ’ ಎಂದು ಉತ್ತರಿಸಿದ್ದರು. ಇದೇ ಕಾರಣಕ್ಕೆ ಅರ್ಜಿಯನ್ನು ಸುಪ್ರೀಂಕೋರ್ಟ್ ವಿಚಾರಣೆಗೆ ಸ್ವೀಕರಿಸಿತ್ತು.

Advertisements

ಥಗ್ ಲೈಫ್ ಸಿನಿಮಾ ಪರವಾಗಿ ವಾದ ಮಂಡಿಸಿದ ವಕೀಲ ನವಪ್ರೀತ್ ಕೌರ್, ಕೆಲವು ಧಮನಕಾರಿ ಗುಣವೊಂದಿರುವ ಸಂಘಟನೆಗಳು ಭಾಷಾ ಅಲ್ಪಸಂಖ್ಯಾತರನ್ನು ಬೆದರಿಸುತ್ತಿದ್ದು, ಭಾಷೆಯ ಕಾರಣಕ್ಕೆ ತಮಿಳು ಸಿನಿಮಾದ ಬಿಡುಗಡೆಗೆ ತಡೆಯೊಡ್ಡಿವೆ. ಹಾಗಾಗಿ ನಾವು ಸಿನಿಮಾ ಹಾಗೂ ಚಿತ್ರಮಂದಿರಗಳ ಭದ್ರತೆಯನ್ನು ಕೋರುತ್ತಿದ್ದೇವೆ ಎಂದು ಕೋರ್ಟ್‌ಗೆ ಮನವರಿಕೆ ಮಾಡಿದರು.

ಇದನ್ನು ಓದಿದ್ದೀರಾ? ಸೆನ್ಸಾರ್ ಮಂಡಳಿ ಅದುಮಿಟ್ಟಿರುವ ವೆಟ್ರಿಮಾರನ್ ‘ಮಾನುಷಿ’ ಚಿತ್ರದಲ್ಲೇನಿದೆ, ಏನಿದು ವಿವಾದ?

ವಾದ ಆಲಿಸಿದ ಸುಪ್ರೀಂಕೋರ್ಟ್, ಸಿಬಿಎಫ್​ಸಿ ಪ್ರಮಾಣ ಪತ್ರ ಪಡೆದಿರುವ ತಮಿಳು ಚಲನಚಿತ್ರ ಥಗ್ ಲೈಫ್ ಅನ್ನು ಕರ್ನಾಟಕ ರಾಜ್ಯದ ಚಿತ್ರಮಂದಿರಗಳಲ್ಲಿ ಅನಧಿಕೃತವಾಗಿ ನಿಷೇಧ ಹೇರಲಾಗಿದೆ. ಹಿಂಸಾಚಾರದ ಬೆದರಿಕೆಯಡಿಯಲ್ಲಿ ಈ ನಿಷೇಧವನ್ನು ಜಾರಿ ಮಾಡಿಲಾಗಿದೆಯೇ ವಿನಃ ಯಾವುದೇ ಕಾನೂನು ಪ್ರಕ್ರಿಯೆಯಿಂದ ನಿಷೇಧ ಹೇರಲಾಗಿಲ್ಲ. ಸಿನಿಮಾ ಮಂದಿರಗಳಿಗೆ ಬೆಂಕಿ ಹಚ್ಚುವ ಸ್ಪಷ್ಟ ಬೆದರಿಕೆ ಹಾಕಲಾಗಿದೆ. ಭಾಷಾ ಅಲ್ಪಸಂಖ್ಯಾತರನ್ನು ಗುರಿಯಾಗಿಸಿಕೊಂಡು ದೊಡ್ಡ ಪ್ರಮಾಣದ ಹಿಂಸಾಚಾರದ ಪ್ರಚೋದನೆ ಮಾಡಲಾಗಿದೆ. ಭಯದ ವಾತಾವರಣ ನಿರ್ಮಿಸುವ ಪ್ರಯತ್ನ ಕಾಣುತ್ತಿದೆ. ಅರ್ಜಿಯ ತುರ್ತು ಮತ್ತು ನ್ಯಾಯಾಲಯದ ಮುಂದೆ ಹಾಜರುಪಡಿಸಲಾದ ವಿಷಯಗಳನ್ನು ಪರಿಗಣಿಸಿ ಪ್ರತಿವಾದಿಗಳಿಗೆ ಪ್ರತಿಕ್ರಿಯೆ ನೀಡಲು ನೋಟಿಸ್ ನೀಡಲಾಗಿದೆ’ ಎಂದು ತಿಳಿಸಿದೆ.

‘ಥಗ್ ಲೈಫ್’ ಸಿನಿಮಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕಮಲ್ ಹಾಸನ್ ಅವರು, ಕನ್ನಡ ಭಾಷೆಯು ತಮಿಳು ಭಾಷೆಯಿಂದ ಉಗಮವಾಗಿದೆ ಎಂದಿದ್ದರು. ಕಮಲ್​ರ ಈ ಹೇಳಿಕೆ ವಿರುದ್ಧ ರಾಜ್ಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಕನ್ನಡ ಪರ ಸಂಘಟನೆಗಳು ‘ಥಗ್ ಲೈಫ್’ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಿದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದವು. ‘ಥಗ್ ಲೈಫ್’ ಸಿನಿಮಾ ಕಳೆದ ವಾರ ಕರ್ನಾಟಕದ ಹೊರತಾಗಿ ಬೇರೆ ರಾಜ್ಯಗಳಲ್ಲಿ ಬಿಡುಗಡೆ ಆಗಿದ್ದು, ಸಿನಿಮಾಕ್ಕೆ ದೊಡ್ಡ ಪ್ರಮಾಣದ ಯಶಸ್ಸು ದೊರಕಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X