ಬೆಂಗಳೂರು | 10 ಕೋಟಿ ಮೌಲ್ಯದ ಮಾದಕವಸ್ತು ಸಾಗಾಟ; ನೈಜೀರಿಯಾ ಮಹಿಳೆ ಬಂಧನ

Date:

Advertisements

ಹತ್ತು ಕೋಟಿ ರೂ. ಮೌಲ್ಯದ ಮಾದಕವಸ್ತು ಸಾಗಾಟ ಮಾಡುತ್ತಿದ್ದ ವಿದೇಶಿ ಮಹಿಳೆಯನ್ನು ಸಿಸಿಬಿ ಮತ್ತು ಚಿಕ್ಕಜಾಲ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 10 ಕೋಟಿ ರೂ. ಮೌಲ್ಯದ ಎಂಡಿಎಂಎ ಮಾದಕ ವಸ್ತು ವಶಕ್ಕೆ ಪಡೆದಿದ್ದಾರೆ.

ಬಂಧಿತ ಮಹಿಳೆ ಕಳೆದ 3 ವರ್ಷದ ಹಿಂದೆ ಬ್ಯುಸಿನೆಸ್ ವೀಸಾದಲ್ಲಿ ನೈಕೀರಿಯಾದಿಂದ ಭಾರತಕ್ಕೆ ಆಗಮಿಸಿದ್ದರು ಎನ್ನಲಾಗಿದೆ. ಆರಂಭದಲ್ಲಿ ನವದೆಹಲಿಯಲ್ಲಿ ವಾಸವಾಗಿದ್ದು, ನಂತರ ತೆಲಂಗಾಣ ವಿವಿಯಲ್ಲಿ ವ್ಯಾಸಂಗ ಮಾಡುವುದಾಗಿ ವಿದ್ಯಾರ್ಥಿ ವೀಸಾ ಪಡೆದಿದ್ದರು. ನಂತರ ಕಾಲೇಜಿಗೆ ದಾಖಲಾಗದೆ ಡ್ರಗ್ಸ್ ಪೆಡ್ಲಿಂಗ್‍ಗೆ ಇಳಿದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಪೋಕ್ಸೊ’ ಶಿಕ್ಷೆಯಿಂದ ನುಣುಚಿಕೊಳ್ಳುವ ದಾಳವಾಗದಿರಲಿ ‘ಮದುವೆ’

Advertisements

ಮಹಿಳೆಯು ದೆಹಲಿಯಿಂದ ಬೆಂಗಳೂರಿಗೆ ಬಸ್ ಮೂಲಕ ಮಾದಕವಸ್ತು ಸಾಗಾಟ ಮಾಡಿದ್ದರು. ಚಿಕ್ಕಜಾಲ ಠಾಣಾ ವ್ಯಾಪ್ತಿಯ ರಾಜಾನುಕುಂಟೆ ಬಳಿ ಮಾದಕವಸ್ತು ವ್ಯಾಪಾರ ಮಾಡುವಾಗ ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಬಂಧಿತ ಮಹಿಳೆಯಿಂದ 5 ಕೆಜಿ 325 ಗ್ರಾಂ ಎಂಡಿಎಂಎ ಹಾಗೂ ಆ್ಯಪಲ್ ಮೊಬೈಲ್ ಫೋನ್ ವಶಕ್ಕೆ ಪಡೆಯಲಾಗಿದೆ.

ಬಂಧಿತ ಮಹಿಳೆ ಬಟ್ಟೆಗಳ ಮಧ್ಯೆ ಮಾದಕವಸ್ತು ಅಡಗಿಸಿಕೊಂಡು ದೆಹಲಿಯಿಂದ ಬೆಂಗಳೂರಿಗೆ ತರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಚಿಕ್ಕಜಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X