ಬೀದರ್‌ | ಜುಲೈ 12 ರಂದು ಬೃಹತ್‌ ರಾಷ್ಟ್ರೀಯ ಲೋಕ ಅದಾಲತ್‌ : ನ್ಯಾ.ಪ್ರಕಾಶ ಬಸಸೋಡೆ

Date:

Advertisements

ರಾಷ್ಟ್ರೀಯ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ಜುಲೈ 12ರಂದು ಜಿಲ್ಲೆಯ ಎಲ್ಲ ನ್ಯಾಯಾಲಯಗಳಲ್ಲಿ ಬೃಹತ್ ಲೋಕ ಅದಾಲತ್‌ನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.

ಶುಕ್ರವಾರದಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸಭಾಂಗಣದಲ್ಲಿ ಜುಲೈ 12 ರಂದು ನಡೆಯುವ ಬೃಹತ್ ಲೋಕ ಅದಾಲತ್‌ನ ಪೂರ್ವಸಿದ್ಧತೆ ಕುರಿತು ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿದರು.

ʼಪ್ರಸ್ತುತ ಚಾಲ್ತಿಯಲ್ಲಿರುವ ಆಸ್ತಿಪಾಲು ವಿಭಾಗ ಜೀವನಾಂಶ, ಚೆಕ್ ಬೌನ್ಸ್, ವಿದ್ಯುತ್ ಪ್ರಕರಣಗಳು ಕಂದಾಯ ಅಪರಾಧಿಕ ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವಂತಹ ಪ್ರಕರಣಗಳು,‌ ಕಾರ್ಮಿಕರ ಪ್ರಕರಣಗಳು, ಬ್ಯಾಂಕ್ ಪ್ರಕರಣಗಳು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥ ಮಾಡಲು ಅವಕಾಶ ಇರುತ್ತದೆʼ ಎಂದು ತಿಳಿಸಿದರು.

Advertisements

ʼ2025ರ ಮಾರ್ಚ್‌ 3ರಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಜಿಲ್ಲಾದ್ಯಂತ ಒಟ್ಟು 52,812 ಪ್ರಕರಣಗಳನ್ನು ಲೋಕ ಆದಲಾತ್‌ನಲ್ಲಿ ಇತ್ಯರ್ಥಗೊಳಿಸಲಾಗಿದ್ದು, ಇದರಲ್ಲಿ 10,044 ನ್ಯಾಯಾಲಯದಲ್ಲಿನ ಪೆಂಡಿಂಗ್ ಪ್ರಕರಣಗಳು, 42,768 ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಈ ಬಾರಿ ಲೋಕ‌ ಅದಾಲತ್‌ನಲ್ಲಿ ನ್ಯಾಯಾಲಯದಲ್ಲಿ ಬಾಕಿ ಪೇಂಡಿಂಗ್ ಇರುವ ಪ್ರಕರಣಗಳನ್ನು ಇನ್ನಷ್ಟು ಇತ್ಯಾರ್ಥಗೊಳಿಸಲು ಯೋಜನೆ ರೂಪಿಸಲಾಗಿದೆʼ ಎಂದು ಮಾಹಿತಿ ನೀಡಿದರು.‌

ಇದನ್ನೂ ಓದಿ : ಯಾದಗಿರಿ | ₹440 ಕೋಟಿ ವೆಚ್ಚದ ಆರೋಗ್ಯ ಆವಿಷ್ಕಾರ ಯೋಜನೆಗೆ ನಾಳೆ ಸಿಎಂ ಸಿದ್ದರಾಮಯ್ಯ ಚಾಲನೆ

ʼಜಿಲ್ಲೆಯಲ್ಲಿ ಒಟ್ಟು 29,122 ಪ್ರಕರಣಗಳು ಪೆಂಡಿಂಗ್ ಇದ್ದು, ಹೆಚ್ಚು ಪ್ರಕರಣಗಳನ್ನು ರಾಜಿ ಮಾಡುವ ಗುರಿ ಹೊಂದಿದ್ದೇವೆ. ಎಲ್ಲ ಪೂರ್ವತಯಾರಿ ಮಾಡಿಕೊಂಡಿದ್ದೇವೆ. ಪ್ರಕರಣಗಳಲ್ಲಿ ರಾಜಿ ಮಾಡಿಕೊಳ್ಳುವುದರಿಂದ ಕಕ್ಷಿದಾರನಿಗೆ ನ್ಯಾಯಾಲಯ ಶುಲ್ಕ ವಾಪಸ್ ಸಿಗಲಿದೆ, ಮೇಲ್ಮನವಿ ಮಾಡಲು ಅವಕಾಶ ಇರುವುದಿಲ್ಲ. ಇಬ್ಬರೂ ಪಕ್ಷಗಾರರು ತಮ್ಮ ದ್ವೇಷ ಮರೆತು ಸುಮಧುರ ಬಾಂಧವ್ಯ ಹೊಂದುವ ಅವಕಾಶ ಇರುತ್ತದೆ. ಯಾವುದೇ ಖರ್ಚು ವೆಚ್ಚ ಇಲ್ಲದೆ ಶೀಘ್ರವಾಗಿ ಪ್ರಕರಣಗಳು ಇತ್ಯರ್ಥವಾಗುತ್ತವೆʼ ಎಂದು ವಿವರಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

Download Eedina App Android / iOS

X