ಸರ್ಕಾರದ ಶಕ್ತಿ ಯೋಜನೆಯ ಪರಿಣಾಮ 42 ದಿನದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರದ ಘಾಟಿ ಸುಬ್ರಹ್ಮಣ್ಯ ದೇವಾಲಯದ ಹುಂಡಿ ಕಾಣಿಕೆಗಳಿಂದ ಭರ್ತಿಯಾಗಿದೆ.
ಮಂಗಳವಾರ ಹುಂಡಿ ಎಣಿಕೆ ಮಾಡಲಾಗಿದ್ದು, ₹55 ಲಕ್ಷ ಸಂಗ್ರಹವಾಗಿದೆ. ಜೊತೆಗೆ, ಒಂದೂವರೆ ಕೆಜಿ ಬೆಳ್ಳಿಯನ್ನು ಭಕ್ತರು ಹುಂಡಿಯಲ್ಲಿ ಹಾಕಿದ್ದಾರೆ.
ಮುಜರಾಯಿ ಇಲಾಖೆ ಜಿಲ್ಲಾ ಸಹಾಯಕ ಆಯುಕ್ತೆ ಜಿ ಜೆ ಹೇಮಾವತಿ, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಎನ್ ಕೃಷ್ಣಪ್ಪ, ದೇವಾಲಯದ ಅಧೀಕ್ಷಕ ರಘು ಹುಚ್ಚಪ್ಪ ಸಮ್ಮುಖದಲ್ಲಿ ಹುಂಡಿ ಹಣ ಎಣಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಶಾಲೆಯಲ್ಲಿ ಕಳಪೆ ಗುಣಮಟ್ಟದ ಬಿಸಿಯೂಟ; ಅಧಿಕಾರಿಗಳ ನಿರ್ಲಕ್ಷ್ಯ
ರಾಜ್ಯ ಸರ್ಕಾರ ಜಾರಿಗೆ ತರಂದಿರುವ ಮಹಿಳೆಯರಿಗೆ ಉಚಿತ ಪ್ರಯಾಣದ ಶಕ್ತಿ ಯೋಜನೆಯಂದಾಗಿ ದೇವಾಲಯಕ್ಕೆ ಮಹಿಳಾ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವುದು ಹುಂಡಿಯಲ್ಲಿನ ಕಾಣಿಕೆ ಮೊತ್ತ ಹೆಚ್ಚಳವಾಗಿದೆ.