ಶಿವಮೊಗ್ಗ ಜಿಲ್ಲಾ ಮಟ್ಟದ ‘ಸಂವಿಧಾನ ಓದು ಅಧ್ಯಯನ ಶಿಬಿರ’ವನ್ನು ‘ಸಂವಿಧಾನ ಓದು ಅಭಿಯಾನ-ಕರ್ನಾಟಕ’ ಮತ್ತು ಶಿವಮೊಗ್ಗ ಜಿಲ್ಲೆಯ ಸಮಾನ ಮನಸ್ಕ ಸಂಘಟನೆಗಳು ಜಂಟಿಯಾಗಿ ಆಯೋಜಿಸಲಾಗಿದ್ದು, ಜೂನ್ 21 ಮತ್ತು 22, 2025 ರಂದು ಶನಿವಾರ ಮತ್ತು ಭಾನುವಾರ ಎರಡು ದಿವಸ ನಡೆಸಲು ತೀರ್ಮಾನಿಸಲಾಗಿದೆ.ಜಿಲ್ಲೆಯ ಎಲ್ಲಾ ತಾಲ್ಲೂಕುಗಳನ್ನು ಪ್ರತಿನಿಧಿಸಿ ಸ್ನಾತ್ತಕೋತ್ತರ ವಿದ್ಯಾರ್ಥಿಗಳು, ಸಾಮಾಜಿಕ-ಸಾಂಸ್ಕೃತಿಕ ಹಾಗೂ ಪ್ರಗತಿಪರ ಆಶಯಉಳ್ಳ 250 ಪ್ರತಿನಿಧಿಗಳು ಪಾಲ್ಗೊಳ್ಳಲಿದ್ದಾರೆ.
ಈ ಶಿಬಿರವನ್ನು ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನದಾಸ್ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಪ್ರಾಥಮಿಕ ಮತ್ತು ಪ್ರೌಡಶಿಕ್ಷಣ ಸಚಿವ, ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ, ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಶರತ್ ಅನಂತಮೂರ್ತಿ, ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ ಹಗಡೆ , ಸನ್ನಿಧಿ, ಪಾಲನಾ ನವೀಕರಣ ಕೇಂದ್ರದ ನಿರ್ದೇಶಕ ಫಾದರ್ ಕ್ಲಿಫರ್ಡ್ ರೋಶನ್ ಪಿಂಟೋ, ಹಿರಿಯ ವಕೀಲ ಜಿ. ಎಸ್. ನಾಗರಾಜ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಎರಡು ದಿನಗಳ ಕಾಲ ನಡೆಯಲಿರುವ ‘ಸಂವಿಧಾನ ಓದು ಅಧ್ಯಯನ ಶಿಬಿರ’ದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮೊದಲನೆಯ ದಿನ ಸಂವಿಧಾನದ ರಚನೆ ಮತ್ತು ಮೂಲತತ್ವಗಳ ಕುರಿತು – ಗೌ. ನ್ಯಾಯಮೂರ್ತಿ ಹೆಚ್. ಎನ್. ನಾಗಮೋಹನದಾಸ್, ಸಂವಿಧಾನ ಮತ್ತು ಸಾಮಾಜಿಕನ್ಯಾಯ – ಬಿ. ರಾಜಶೇಖರಮೂರ್ತಿ, ಸಂವಿಧಾನ ಮತ್ತು ಜಾತ್ಯಾತೀತತೆ – ಆರ್. ರಾಮಕೃಷ್ಣ, ಎರಡನೇ ದಿನ ಸಂವಿಧಾನ ಮತ್ತು ಮಹಿಳೆ – ಶಾಂತಿ ನಾಗಲಾಪುರ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ಕಿಗ್ಗ “ರಾಜಶೇಖರ ಅವರು ಗೋಷ್ಠಿಗಳನ್ನು ನಡೆಸಿಕೊಡಲಿದ್ದಾರೆ.

ಎರಡನೆಯ ದಿನ ಮಧ್ಯಾಹ್ನ 1ಕ್ಕೆ ಸಮಾರೋಪ ಮತ್ತು ಪ್ರಶಸ್ತಿ ಪತ್ರ ವಿತರಣೆ ಕಾರ್ಯಕ್ರಮ ನಡೆಯಲಿದೆ. ಈ ಸಮಾರೋಪ ಸಮಾರಂಭದ ಅತಿಥಿಗಳಾಗಿ ವಿಧಾನ ಪರಿಷತ್ ಸದಸ್ಯೆ ಬಲ್ಕಿಶ್ ಬಾನು , ರಾಜ್ಯ ರೈತ ಸಂಘದ ಅಧ್ಯಕ್ಷ ಹೆಚ್ .ಆರ್ ಬಸವರಾಜಪ್ಪ , ದಲಿತ ಸಂಘರ್ಷ ಸಮಿತಿ, ಶಿವಮೊಗ್ಗ ರಾಜ್ಯ ಸಂಚಾಲಕರ ಎಂ. ಗುರುಮೂರ್ತಿ, ಜನಶಕ್ತಿ ಸಂಘಟನೆಯ ಕೆ. ಎಲ್ ಅಶೋಕ್, ಜನಪರ ಹೋರಾಟಗಾರ ಅನಂತ ರಾಮು ಭಾಗವಹಿಸಲಿದ್ದಾರೆ. ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹೆಚ್.ಎನ್.ನಾಗಮೋಹನದಾಸ್ ನಿರ್ವಹಿಸಲಿದ್ದಾರೆ. ಉಪಸ್ಥಿತರಾಗಿ ಎಲ್ಲಾ ಪ್ರಮುಖ ಸಂಘಟಕರು ಇರಲಿದ್ದಾರೆ.
ಶಿಬಿರದಲ್ಲಿ ಭಾಗವಹಿಸಲು ಆಸಕ್ತಿ ಹೊಂದಿದ ಆಸಕ್ತರು ನೊಂದಣಿ ಮಾಡಿಕೊಂಡು ಭಾಗವಹಿಸಲು ಈ ಫೋನ್ ನಂಬರ್‌ಗಳಿಗೆ .7483950580, 9448329757. ಸಂಪರ್ಕಿಸಬಹುದು.
