ಮಧ್ಯಪ್ರದೇಶ ಬಾಲಾಘಾಟ್ ಜಿಲ್ಲೆಯ ದಟ್ಟ ಅರಣ್ಯದಲ್ಲಿ ಶನಿವಾರ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಮಹಿಳೆಯರು ಸೇರಿದಂತೆ ನಾಲ್ವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಹಾಕ್‌ಫೋರ್ಸ್, ಜಿಲ್ಲಾ ಪೊಲೀಸ್ ಮತ್ತು ಕೇಂದ್ರ ಮೀಸಲು ಪೊಲೀಸ್ ಪಡೆ(CRPF) ಜಂಟಿ ಕಾರ್ಯಾಚರಣೆ ನಡೆಸಿವೆ.
ಕಾರ್ಯಾಚರಣೆ ಯಶಸ್ವಿಯಾಗಿದೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಮೋಹನ್ ಯಾದವ್ ಅವರು ಹೇಳಿಕೊಂಡಿದ್ದಾರೆ. ಗ್ರೆನೇಡ್ ಲಾಂಚರ್, ಎಸ್‌ಎಲ್‌ಆರ್, ಎರಡು 315 ಬೋರ್ ರೈಫಲ್‌ಗಳು ಸೇರಿದಂತೆ ಹಲವು ಉಪಕರಣಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಇದನ್ನು ಓದಿದ್ದೀರಾ? ಛತ್ತೀಸ್‌ಗಢ | ಎನ್‌ಕೌಂಟರ್‌ಗಳಲ್ಲಿ ಐವರು ಮಾವೋವಾದಿಗಳು ಹತ
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮಧ್ಯಪ್ರದೇಶ ಸಿಎಂ ಮೋಹನ್ ಯಾದವ್, “2026ರ ಮಾರ್ಚ್ ವೇಳೆಗೆ ನಕ್ಸಲಿಗರನ್ನು ನಿರ್ಮೂಲನೆ ಮಾಡುವ ಕಾರ್ಯಾಚರಣೆಯಲ್ಲಿ ಮಧ್ಯಪ್ರದೇಶವು ಪ್ರಮುಖ ಮೈಲಿಗಲ್ಲು ಸಾಧಿಸಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಕಾರ್ಯತಂತ್ರದ ನಾಯಕತ್ವ ಈ ಯಶಸ್ಸು ಸಲ್ಲುತ್ತದೆ” ಎಂದು ಹೇಳಿದ್ದಾರೆ.
ಪಚಮದಾರ ಮತ್ತು ಕಟೇಜಿರಿಯಾ ಅರಣ್ಯ ಪ್ರದೇಶಗಳಲ್ಲಿ ಈ ಎನ್‌ಕೌಂಟರ್ ನಡೆದಿದೆ. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ಮುಂದುವರೆಸಿವೆ.
