ಅಹಮದಾಬಾದ್ನಲ್ಲಿ ಸಂಭವಿಸಿದ ವಿಮಾನ ದುರಂತ ಘಟನೆಯ ಶೋಕದ ನಡುವೆಯೇ ಮತ್ತೊಂದು ಅಪಘಾತ ಸಂಭವಿಸಿದೆ. ಉತ್ತರಾಖಂಡದ ಡೆಹ್ರಾಡೂನ್‌ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಪತನಗೊಂಡಿದೆ. ಹೆಲಿಕಾಪ್ಟರ್‍ನಲ್ಲಿದ್ದ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.
ಉತ್ತರಾಖಂಡದ ಗೌರಿಕುಂಡ್ ಪ್ರದೇಶದ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿದೆ. ಹೆಲಿಕಾಪ್ಟರ್‍ನಲ್ಲಿ ಪೈಲಟ್ ಸೇರಿದಂತೆ ಆರು ಮಂದಿ ಪ್ರಯಾಣಿಸುತ್ತಿದ್ದರು. ಎಲ್ಲರೂ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಸ್ಥಳಕ್ಕೆ ಎನ್ಡಿಆರ್ಎಫ್ ತಂಡಗಳು ತೆರಳಿದ್ದು, ಮೃತದೇಹಗಳನ್ನು ಹೊರತೆಗೆಯುವ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಅಪಘಾತಕ್ಕೀಡಾದ ಹೆಲಿಕಾಪ್ಟರ್ ‘ಆರ್ಯನ್ ಏವಿಯೇಷನ್’ ಸಂಸ್ಥೆಗೆ ಸೇರಿದ್ದು ಎಂದು ತಿಳಿದುಬಂದಿದೆ.