ಬೆಂಗಳೂರು | ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​ ಗಾರ್ಡನ್ ಆರು ತಿಂಗಳು ಗಡಿಪಾರು

Date:

Advertisements
  • ಮಾಗಡಿ ರೋಡ್ ಪೊಲೀಸ್‌ ಠಾಣೆಯಲ್ಲಿ ಗಡಿಪಾರು ಪ್ರಕ್ರಿಯೆ
  • ಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿ

ಚುನಾವಣಾ ನೀತಿ ಸಂಹಿತೆ ಜಾರಿಯಾದ ಬೆನ್ನಲ್ಲೇ, ಅಪರಾಧಿ ಚಟುವಟಿಕೆಗಳಲ್ಲಿ ಸಕ್ರಿಯನಾಗಿದ್ದ ಕುಖ್ಯಾತ ರೌಡಿ ನಾಗರಾಜ್​ ಆಲಿಯಾಸ್​​ ವಿಲ್ಸನ್​ ಗಾರ್ಡನ್​ ಅವನನ್ನು ಬೆಂಗಳೂರು ಸೇರಿದಂತೆ ಆರು ನಗರಗಳಿಂದ ಗಡಿಪಾರು ಮಾಡಲಾಗಿದೆ. ಗಡಿಪಾರು ಅವಧಿ ಮುಗಿಯುವವರೆಗೂ ನಗರಕ್ಕೆ ಬರದಂತೆ ಪಶ್ಚಿಮ ವಿಭಾಗ ಡಿಸಿಪಿ ಲಕ್ಷ್ಮಣ ನಿಂಬರಗಿ ಎಚ್ಚರಿಕೆ ನೀಡಿದ್ದಾರೆ.

​ವಿಲ್ಸನ್​ ಗಾರ್ಡನ್‌ನ್ನು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರದಿಂದ ಗಡಿಪಾರು ಮಾಡಲಾಗಿದೆ.

ಸೆಕ್ಷನ್​ 110ನಡಿ ಬಾಂಡ್​ ಬರೆಸಿಕೊಂಡು ಗಡಿಪಾರಿನ ಪ್ರಕ್ರಿಯೆಯನ್ನು ಮಾಗಡಿ ರೋಡ್ ಪೊಲೀಸ್‌ ಠಾಣೆಯಲ್ಲಿ ಮುಗಿಸಲಾಗಿದೆ. ಈತ ಆರು ತಿಂಗಳವರೆಗೆ ಬೆಂಗಳೂರಿಗೆ ಬರುವ ಹಾಗಿಲ್ಲ ಹಾಗೂ ಇನ್ನಿತರ ಯಾವುದೇ ಚಟುವಟಿಕೆಗಳಲ್ಲಿ ತೊಡಗುವಂತಿಲ್ಲ ಎಂದು ಸೂಚನೆ ನೀಡಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

ವಿಲ್ಸನ್​ ಗಾರ್ಡನ್ ಕೊಲೆ, ಕೊಲೆ ಪ್ರಯತ್ನ ಸೇರಿದಂತೆ ಹಲವಾರು ಕೃತಗಳಲ್ಲಿ ಆರೋಪಿಯಾಗಿದ್ದಾನೆ. ನಗರದಲ್ಲಿ ಸಕ್ರಿಯ ಆಗಿರುವ ಇತರ ರೌಡಿಗಳಿಗೂ ಸಿಸಿಬಿ ಹಾಗು ನಗರ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X