ಕೋಲಾರ | ವೇಮಗಲ್‌ನಲ್ಲಿ ಇಂದಿರಾ ಕ್ಯಾಂಟಿನ್ ಆರಂಭ

Date:

Advertisements

ಕೋಲಾರ ತಾಲೂಕಿನ ವೇಮಗಲ್‌ನಲ್ಲಿ ನಿರ್ಮಾಣವಾಗಿರುವ ಇಂದಿರಾ ಕ್ಯಾಂಟಿನ್ ಅನ್ನು ಶಾಸಕ ಕೊತ್ತೂರು ಮಂಜುನಾಥ್ ಉದ್ಘಾಟನೆ ಮಾಡಿದರು.

ಬಳಿಕ ಮಾತನಾಡಿದ ಅವರು, “ಮಾಜಿ ಸಚಿವ ವರ್ತೂರ್ ಪ್ರಕಾಶ್‌ಗೆ ತಿಂಗಳು ಮಾಮೂಲಿ ಇಲ್ಲದೇ ಹೋಗಿದ್ದರಿಂದ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಅವರ ನಾಲಿಗೆಗೂ ಮತ್ತು ಮೆದುಳಿಗೂ ಸಂಪರ್ಕ ಇಲ್ಲದಂತಾಗಿದೆ. ಅಧಿಕಾರದಲ್ಲಿ ಇದ್ದಷ್ಟು ದಿನ ಅಧಿಕಾರಿಗಳು ನೀಡುವ ಕಮಿಷನ್ ವರ್ತೂರು ಪ್ರಕಾಶ್ ಅವರಿಗೆ ಜೀವನವಾಗಿತ್ತು. ನನಗೆ ಅಂತಹ ಪರಿಸ್ಥಿತಿ ಬೇಕಾಗಿಲ್ಲ. ನನಗೆ ಕೋಟ್ಯಂತರ ರೂಪಾಯಿ ಬಾಡಿಗೆ ಬರುತ್ತದೆ. ನಿನ್ನ ಅವಧಿಯಲ್ಲಿನ ಕಾಮಗಾರಿಗಳು ಮಾಡುವುದಕ್ಕೆ ಗುತ್ತಿಗೆದಾರರಿಂದ ಲಂಚ ಪಡೆದಿದ್ದನ್ನು ಅವರೇ ಹೇಳಿದ್ದಾರೆ. ನಾನು ಯಾರದೇ ಬಳಿ ಲಂಚ ಪಡೆದಿದ್ದರೆ ಸಾಬೀತು ಮಾಡಲಿ” ಎಂದು ಸಾವಾಲು ಹಾಕಿದರು.

“ವರ್ತೂರು ಪ್ರಕಾಶ್ ಅವರು ಏನಾದರೂ  ಮಾತಾಡಬೇಕು ಅಂತ ಕಾಂಗ್ರೆಸ್ ನಾಯಕರ ವಿರುದ್ದ ಇಲ್ಲಸಲ್ಲದ ಆರೋಪ ಮಾಡಿಕೊಳ್ಳುವುದೇ ಜೀವನವಾಗಿದೆ. ಹಿಂದೆ ಸಿದ್ದರಾಮಯ್ಯನವರ ವಿರುದ್ದ ಮಾತಾಡಿ ಮಾತಾಡಿ ಏನಾಗಿದೆಯೆಂದು ಇಡೀ ರಾಜ್ಯದ ಜನಕ್ಕೆ ಗೊತ್ತಿದೆ. ಇನ್ನಾದರೂ ಅವರಿಗೆ ಒಳ್ಳೆಯ ಬುದ್ದಿ ಕೊಟ್ಟು ಒಳ್ಳೆಯದು ಮಾತನಾಡಲಿ. ಇಲ್ಲ ಯಾರು ತಪ್ಪು ಮಾಡಿದ್ದಾರೆ ಅಂತ  ಕೋಲಾರಮ್ಮ ದೇವರು ನೋಡಿಕೊಳ್ಳಲಿ” ಎಂದರು.

Advertisements

“ಕಾಂಗ್ರೆಸ್ ಸರ್ಕಾರ ಬರೀ ಅಭಿವೃದ್ಧಿಗೆ ಒತ್ತು ನೀಡುತ್ತದೆ. ಇಂದಿರಾಗಾಂಧಿ ಅವರ ಕಾಲದಲ್ಲಿಯೇ ಬಡವರಿಗೆ ಮನೆಗಳನ್ನು ಕೊಟ್ಟರು, ಪಿಂಚಣಿ ಜಾರಿ ಮಾಡಿದರು, ಸಿದ್ದರಾಮಯ್ಯ ಅಕ್ಕಿ ಕೊಟ್ಟಿದ್ದಾರೆ. ಕಾಂಗ್ರೆಸ್ ಸರ್ಕಾರವು ಹಸಿವು ಮುಕ್ತ ಕರ್ನಾಟಕ ಮಾಡಬೇಕೆಂಬ ಮುಖ್ಯ ಉದ್ದೇಶದಿಂದಲೇ ಇಂದಿರಾ ಕ್ಯಾಟೀನ್ ಕೂಡ ಜಾರಿ ಮಾಡಿದ್ದಾರೆ. ಕಾಂಗ್ರೆಸ್ ಸರ್ಕಾರ ಇಲ್ಲದಾಗ ಮುಚ್ಚಿದ್ದರು. ಈಗ ಕಾಂಗ್ರೆಸ್ ಬಂದ ಮೇಲೆ ಮತ್ತೆ ಪ್ರಾರಂಭ ಮಾಡಿದ್ದಾರೆ. ವೇಮಗಲ್‌ನಲ್ಲಿ ಉಪ ನೋಂದಣಿ ಕೇಂದ್ರವನ್ನು ಮಾಡಲು ಈಗಾಗಲೇ ಅಧಿಕಾರಿಗಳು ಬಂದು ಹೋಗಿದ್ದಾರೆ. ಮುಂದೆ ತಾಲೂಕು ಕೇಂದ್ರ ಮಾಡಲೂ ಕೂಡ ಅನುಮೋದನೆ ನೀಡಿದ್ದು, ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ಬರುತ್ತದೆ. ನಮಗೆ ಅಭಿವೃದ್ಧಿ ಮುಖ್ಯವಾಗಿದೆ” ಎಂದರು.

ಮಾಜಿ ಸಭಾಪತಿ ವಿ ಆರ್ ಸುದರ್ಶನ್ ಮಾತನಾಡಿ, “ಕಾಂಗ್ರೆಸ್ ಸರ್ಕಾರವು ಅಧಿಕಾರಕ್ಕೆ ಬಂದ ಮೇಲೆ ತಾಲೂಕು ಮತ್ತು ಪಟ್ಟಣ ಪ್ರದೇಶದಲ್ಲಿ ಇಂದಿರಾ ಕ್ಯಾಂಟೀನ್ ಪ್ರಾರಂಭ ಮಾಡಲಾಗಿದೆ. ಜಿಲ್ಲೆಯ ನಾಲ್ಕು ಕೇಂದ್ರಗಳಲ್ಲಿ ಹೊಸದಾಗಿ ಪ್ರಾರಂಭ ಮಾಡಿದ್ದಾರೆ. ಕೋಲಾರ ಕೇಂದ್ರದಲ್ಲಿರುವ ಕ್ಯಾಂಟೀನ್‌ನಲ್ಲಿ ಅವ್ಯವಸ್ಥೆ ಇದೆ, ಸರಿ ಪಡಿಸಬೇಕು. ಇಂದಿರಾಗಾಂಧಿಯವರ ಹೆಸರು, ನೆನಪು, ಸಾಧನೆಗಳಿಗೆ ಗೌರವ ಕೊಡಬೇಕು. ಬಡವರಿಗೆ ಅನುಕೂಲ ಮಾಡಬೇಕೆಂದು ಸಿದ್ದರಾಮಯ್ಯನವರು ರಾಜ್ಯದ ಎಲ್ಲ ವರ್ಗಗಳಿಗೆ ಅನುಕೂಲ ಮಾಡಿದ್ದಾರೆ. ಇಲ್ಲಿ ಸ್ವಚ್ಛತೆ ಕಾಪಾಡಿ ಹಸಿವು ಮುಕ್ತದ ಜತೆಗೆ ಗುಡಿಸಲು ಮುಕ್ತ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಆ. 9, 10ರಂದು ರೈತ ಕಲ್ಯಾಣೋತ್ಸವ ಸಮಾವೇಶ

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ತಾಲೂಕು ಅಧ್ಯಕ್ಷ ವಿ ಎಂ ಮುನಿಯಪ್ಪ, ಜಿ ಪಂ ಮಾಜಿ ಸದಸ್ಯ ನಾಗನಾಳ ಸೋಮಣ್ಣ, ವೇಮಗಲ್ ಕುರುಗಲ್, ಪಟ್ಟಣ ಪಂಚಾಯತಿ ಮುಖ್ಯಾಧಿಕಾರಿ ವೆಂಕಟೇಶ್, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಚಂಜಿಮಲೆ ರಮೇಶ್, ಮುಖಂಡ ಉದಯಶಂಕರ್, ಮುನಿಅಂಜಿನಪ್ಪ, ಫಯಾಜ್, ಉರಟ ಅಗ್ರಹಾರ ಚೌಡರೆಡ್ಡಿ, ಶ್ರೀನಿವಾಸ್, ಶ್ರೀರಾಮ್, ಈರಣ್ಣ, ಮೈಲಾಂಡಹಳ್ಳಿ ಮುರಳಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X