ಮಂಡ್ಯ | ಸಕ್ಕರೆ ನಾಡಿನಲ್ಲಿ ಒಣಗುತ್ತಿದೆ 43,495 ಹೆಕ್ಟೇರ್‌ ಕಬ್ಬು

Date:

Advertisements

ಕಾವೇರಿ ಜಲಾನಯನ ಪ್ರದೇಶದಲ್ಲಿ ನಿರೀಕ್ಷಿತ ಪ್ರಮಾಣದ ಮಳೆಯಾಗದೆ ಕೆಆರ್‌ಎಸ್ ಜಲಾಶಯದಲ್ಲಿ ನೀರಿನ ಮಟ್ಟ ಕಡಿಮೆಯಾಗಿದೆ. ಪರಿಣಾಮ, ಮಂಡ್ಯ ಜಿಲ್ಲೆಗೆ ನೀರೊದಗಿಸುವ ವಿಶ್ವೇಶ್ವರಯ್ಯ ಕಾಲುವೆಗೆ (ವಿಸಿ) ನೀರು ಹರಿಸುವುದನ್ನು ಕಾವೇರಿ ನೀರಾವರಿ ನಿಗಮ ನಿಯಮಿತ (ಸಿಎನ್‌ಎನ್‌ಎಲ್) ನಿಲ್ಲಿಸಿದೆ. ನೀರು ಹರಿಸುವಂತೆ ಒತ್ತಾಯಿಸಿ ಮಂಡ್ಯದ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರಸ್ತುತ ಜಿಲ್ಲೆಯಲ್ಲಿ 43,495 ಹೆಕ್ಟೇರ್‌ನಲ್ಲಿ ಕಬ್ಬು ಬೆಳೆಯಲಾಗಿದ್ದು, ನೀರಿನ ಕೊರತೆಯಿಂದ ಒಣಗುತ್ತಿದೆ. ವಿಶ್ವೇಶ್ವರಯ್ಯ ಕಾಲುವೆಗೆ ನೀರು ಹರಿಸಲು ಸರ್ಕಾರ ಹಿಂದೇಟು ಹಾಕುತ್ತಿದೆ. ನಗರ ಪ್ರದೇಶಗಳಿಗೆ ಕುಡಿಯುವ ನೀರಿನ ಅಗತ್ಯತೆ ಪೂರೈಸಲು ನೀರನ್ನು ಉಳಿಸಿಕೊಳ್ಳುವ ಉದ್ದೇಶದಿಂದ ಕಾಲುವೆಗೆ ನೀರು ನಿಲ್ಲಿಸಲಾಗಿದೆ. ರೈತರು ತಾವು ಬೆಳೆದ ಬೆಳೆ ಉಳಿಸಿಕೊಳ್ಳಲು ಮತ್ತು ನಷ್ಟದಿಂದ ತಪ್ಪಿಸಿಕೊಳ್ಳಲು ಪಂಪ್‌ಸೆಟ್‌ಗಳ ಮೂಲಕ ನೀರು ಹಾಯಿಸುತ್ತಿದ್ದಾರೆ.

ಕುಡಿಯಲು ಮತ್ತು ಕೃಷಿಗೆ ನೀರು ಅತ್ಯಗತ್ಯ. ರೈತರು ಹಾಗೂ ಅಧಿಕಾರಿಗಳೊಂದಿಗೆ ಚರ್ಚಿಸಿ ರೈತ ಸಮುದಾಯ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವ ರೀತಿಯಲ್ಲಿ ನೀರನ್ನು ಹಂಚಿಕೆ ಮಾಡಲು ಕ್ರಮ ಕೈಗೊಳ್ಳಬೇಕೆಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್ ಒತ್ತಾಯಿಸಿದ್ದಾರೆ.

Advertisements

“ನಮ್ಮ ಬೆಳೆ ಉಳಿಸಲು ಸರ್ಕಾರ ನೀರು ಹರಿಸಲು ಮುಂದಾಗಬೇಕು. ಅಧಿಕಾರಿಗಳಿಗೆ ಮನವಿ ಮಾಡಿದರೂ ನಮ್ಮ ಬೇಡಿಕೆಗಳಿಗೆ ಸ್ಪಂದಿಸುತ್ತಿಲ್ಲ” ಎಂದು ರೈತ ಸಂಘದ ಮುಖಂಡರು ಆರೋಪಿಸಿದ್ದಾರೆ.

ಮಂಡ್ಯ ಜಿಲ್ಲೆಯಲ್ಲಿ 43,495 ಹೆಕ್ಟೇರ್ ಕಬ್ಬು ಬೆಳೆಯಲಾಗಿದೆ. ಮಂಡ್ಯ ತಾಲೂಕಿನಲ್ಲಿ 11,627 ಹೆಕ್ಟೇರ್, ಕೆಆರ್ ಪೇಟೆ (10,660 ಹೆಕ್ಟೇರ್), ಮದ್ದೂರು (9,525 ಹೆಕ್ಟೇರ್), ಪಾಂಡವಪುರ (5,325 ಹೆಕ್ಟೇರ್) ಮತ್ತು ಶ್ರೀರಂಗಪಟ್ಟಣದಲ್ಲಿ 4,225 ಹೆಕ್ಟೇರ್ ಪ್ರದೇಶದಲ್ಲಿ ಕಬ್ಬು ಬೆಳೆಯಿದೆ. ಆದರೆ, ನೀರಿನ ಸಮಸ್ಯೆಯಿಂದ ರೈತರು ಕಂಗಾಲಾಗಿದ್ದಾರೆ.

124.8 ಅಡಿ ಗರಿಷ್ಠ ಮಟ್ಟವಿರುವ ಕೆಆರ್‌ಎಸ್‌ನಲ್ಲಿ 90.1 ಅಡಿ ನೀರು ತುಂಬಿದೆ. ಜಲಾಶಯವು 49.452 ಟಿಎಂಸಿ ನೀರು ಸಂಗ್ರಹಿಸುವ ಸಾಮರ್ಥ್ಯ ಹೊಂದಿದ್ದು, ಪ್ರಸ್ತುತ 15.997 ಟಿಎಂಸಿ ಮಾತ್ರ ತುಂಬಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ‘ವೇಮಗಲ್ – ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ದಲಿತರನ್ನು ಕಡೆಗಣಿಸಿಲ್ಲ’

ಇತ್ತೀಚೆಗೆ ಕೋಲಾರ ಜಿಲ್ಲೆಯ ವೇಮಗಲ್- ಕುರುಗಲ್ ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ 6...

ಧಾರವಾಡ | ಬೆಣ್ಣೆಹಳ್ಳ ಸೇತುವೆ ದುರಸ್ತಿಗೆ ಮುಂದಾಗಲು ಸಚಿವ ಸಂತೋಷ್ ಲಾಡ್ ಸೂಚನೆ

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ತಡಹಾಳ ಹತ್ತಿರದ ದೊಡ್ಡಹಳ್ಳ ಹಾಗೂ ಬೆಣ್ಣೆಹಳ್ಳ...

ಧರ್ಮಸ್ಥಳ ಪ್ರಕರಣ | ನನ್ನ ಬಂಧನ ರಾಜಕೀಯ ಪಿತೂರಿಯ ಭಾಗ: ಮಹೇಶ್ ಶೆಟ್ಟಿ ತಿಮರೋಡಿ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಧಾರವಾಡ | ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೂರಕ ವಾತಾವರಣ ನಿರ್ಮಿಸುವುದು ಎಲ್ಲರ ಕರ್ತವ್ಯ: ಕೆ. ನಾಗಣ್ಣಗೌಡ

ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ನಿರ್ಮಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ....

Download Eedina App Android / iOS

X