ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು, ಬಣಕಲ್ ರಾಷ್ಟ್ರೀಯ ಹೆದ್ದಾರಿ ರಾಮಣ್ಣನ ಗಂಡಿ ಬಳಿ ನಡೆದಿದೆ.
ಎರಡು ಕಾರುಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ವಾಟರ್ ಹೀಟರ್ ಸ್ಪರ್ಶ: ವ್ಯಕ್ತಿ ಸಾವು
ಸ್ಥಳೀಯರು ಗಮನಿಸಿ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಸೇರಿಸಿದ್ದಾರೆ. ಈ ಘಟನೆ ಬಣಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.