ದಾವಣಗೆರೆ | ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಮರಣದಂಡನೆ ವಿಧಿಸಲು ಅವಕಾಶವಿದೆ: ನ್ಯಾ. ರಾಜೇಶ್ವರಿ

Date:

Advertisements

ಹನ್ನೆರೆಡು ವರ್ಷದ ಒಳಗಿನ ಯಾವುದೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುವುದನ್ನು ಘೋರ ಅಪರಾಧವೆಂದು ಪರಿಗಣಿಸಿ ಮರಣ ದಂಡನೆ ವಿಧಿಸಲು ಕಾನೂನಿನಲ್ಲಿ ಅವಕಾಶ ಇದೆ ಎಂದು ದಾವಣಗೆರೆ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷೆ ರಾಜೇಶ್ವರಿ ಎನ್ ಹೆಗಡೆ ತಿಳಿಸಿದರು.

ದಾವಣಗೆರೆ ಜಿಲ್ಲಾ ಕಾನೂನು ಸೇವಾಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಉತ್ತರ ಕಚೇರಿ ಹಾಗೂ ವಲಯ ಶಾಲಾ ಶಿಕ್ಷಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ಪೋಕ್ಸೊ ಕಾನೂನಿನ ಅರಿವು ಹಾಗೂ ಮಕ್ಕಳ ಹಕ್ಕುಗಳ ಕಾರ್ಯಗಾರದಲ್ಲಿ ಮಾತನಾಡಿದರು.

“ಲಿಂಗ ಬೇಧವಿಲ್ಲದೆ 18 ವರ್ಷದೊಳಗಿನ ಯಾವುದೇ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ, ಶೋಷಣೆ ಮಾಡುವುದು ಕಂಡುಬಂದರೆ ಕೂಡಲೇ ದೌರ್ಜನ್ಯ ಪ್ರಕರಣಗಳನ್ನು ನಡೆಸಲೆಂದೇ ಲೈಂಗಿಕ ವಿಶೇಷ ನ್ಯಾಯಾಲಯಗಳನ್ನು ರಚಿಸಲಾಗಿದೆ. ಸಂಬಂಧಿಸಿದ ಪ್ರಾಧಿಕಾರ ಮಕ್ಕಳ ಸ್ನೇಹಿ ಪೊಲೀಸರ ನ್ಯಾಯಾಲಯಗಳ ಗಮನಕ್ಕೆ ತರಬೇಕು. ಯಾವುದೇ ಪ್ರಭಾವಿ ವ್ಯಕ್ತಿಯಾಗಲಿ ಇಂತಹ ಪ್ರಕರಣಗಳಲ್ಲಿ ಭಾಗಿಯಾದರೆ ಎಲ್ಲರಿಗೂ ಶಿಕ್ಷೆ ಆಗುವುದು ಖಚಿತ. ಅಲ್ಲದೇ ಇದಕ್ಕೆ ಪ್ರೋತ್ಸಾಹ ನೀಡುವವರಿಗೂ ಶಿಕ್ಷೆ ಆಗಲಿದೆ” ಎಂದು ಎಚ್ಚರಿಕೆ ನೀಡಿದರು.

Advertisements

“ಮಕ್ಕಳನ್ನು ಕಾಪಾಡುವುದು ಕೇವಲ ಅಧಿಕಾರಿಗಳ ಕೆಲಸ ಅಲ್ಲ. ಸಾರ್ವಜನಿಕರ ಜವಾಬ್ದಾರಿಯೂ ಇದೆ. ಇಂದಿನ ಮಕ್ಕಳು ನಾಳಿನ ಪ್ರಜೆಗಳು. ಮಕ್ಕಳು ಬೌದ್ಧಿಕ, ಸಾಮಾಜಿಕವಾಗಿ ಬೆಳೆದು ನಾಳಿನ ಉತ್ತಮ ಸಮಾಜದ ನಿರ್ಮಾಣಕ್ಕಾಗಿ ಮಕ್ಕಳನ್ನು ಸಂರಕ್ಷಣೆ ಮಾಡಬೇಕು. ಯೂ ಟ್ಯೂಬ್, ಸೋಷಿಯಲ್‌ ಮೀಡಿಯಾಗಳಲ್ಲಿ ಲೈಂಗಿಕ ದೌರ್ಜನ್ಯ ಪ್ರಚೋದನೆ ಕಂಡು ಬರುತ್ತಿವೆ. ಇಂತಹ ವೇಳೆ ಪೋಷಕರು ಜಾಗೃತರಾಗಿ ಮಕ್ಕಳ ರಕ್ಷಣೆಗೆ ಮುಂದಾಗಬೇಕು” ಎಂದು ಕಿವಿಮಾತು ಹೇಳಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಕೌಟುಂಬಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯ ರಕ್ಷಣೆಗೆ ಕ್ರಮವಹಿಸಿ: ಶಿವಾನಂದ ಕಾಪಶಿ

ಹಿರಿಯ ಸಿವಿಲ್ ನ್ಯಾಯಾಧೀಶ ಮತ್ತು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಮ.ಕರೆಣ್ಣವರ ಮಾತನಾಡಿ, “ಅಲ್ಪ ವಯಸ್ಸಿನ ಯಾವುದೇ ಮಕ್ಕಳ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯ ತಡೆಯಲು ಕಾಯಿದೆ ಜಾರಿಗೆ ತರಲಾಗಿದೆ. ಎಲ್ಲಿಯೇ ಇಂತಹ ಪ್ರಕರಣಗಳು ನಡೆದರೆ ಯಾವುದೇ ನಾಚಿಕೆ, ಹಿಂಜರಿಕೆ, ಸಂಕೋಚ, ಹೆದರಿಕೆ ಇಲ್ಲದೆ ಇವುಗಳ ವಿರುದ್ಧ ದನಿ ಎತ್ತಬೇಕು. ಯಾವುದೇ ರಾಜಕೀಯ ಧಾರ್ಮಿಕ ಗುರುಗಳಾಲೀ ಯಾರೇ ವ್ಯಕ್ತಿಯಾಗಲೀ, ಭಾಗಿಯಾದರೆ ಅವರಿಗೆ ಶಿಕ್ಷೆ ಖಚಿತ” ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ತಿಪ್ಪೇಶಪ್ಪ ಜಿ ಆರ್, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಅರುಣ್ ಕುಮಾರ್, ಕಾರ್ಯದರ್ಶಿ ಎಸ್‌ ಬಸವರಾಜ್, ಉತ್ತರ ವಲಯದ ಶಿಕ್ಷಣಾಧಿಕಾರಿ ಟಿ ಅಂಬಣ್ಣ, ಮುಖ್ಯ ಶಿಕ್ಷಕ ನಿರಂಜನ್, ರೆಹನಾಬಾನು, ಶಾಂತ ವೀರಣ್ಣ, ಡಿ ನಾಗರಾಜ್‌, ರವಿಕುಮಾರ್ ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Download Eedina App Android / iOS

X