ಸಿಂಧನೂರು ನಗರದ ಖದರೀಯಾ ಕಾಲೋನಿಯೊಂದರಲ್ಲಿ 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.
ವಿಶ್ವನಾಥ ಗುಂಡಪ್ಪ ಅತ್ಯಾಚಾರ ಎಸಗಿದ ಆರೋಪಿ ಎನ್ನಲಾಗಿದೆ.ಕಳೆದ ರಾತ್ರಿ 9 ಗಂಟೆ ಸುಮಾರು ಆರೋಪಿ ವಿಶ್ವನಾಥ ಅಪ್ರಾಪ್ತೆ ಬಾಲಕಿಯನ್ನು ಮನೆಯ ಮೇಲಿನ ಮಹಡಿಯಲ್ಲಿ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ಬಾಲಕಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ? ರಾಯಚೂರು | ಕಿರಾಣಿ ಅಂಗಡಿಯಲ್ಲಿ ಕಳ್ಳತನ ; ಇಬ್ಬರ ಬಂಧನ
ಅಸ್ವಸ್ಥಗೊಂಡ ಬಾಲಕಿಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.ಈ ಅತ್ಯಾಚಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಪೊಲೀಸ್ ಇಲಾಖೆ ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಕಾನೂನು ಕ್ರಮ ಜರುಗಿಸಬೇಕು ಎಂದು ಹೋರಾಟಗಾರರು ಒತ್ತಾಯಿಸಿದರು.
