ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕನ ಮೇಲೆ ಯುವತಿಯೊಬ್ಬಳು ಹಲ್ಲೆ ನಡೆಸಿದ್ದು, ಕೋಪಗೊಂಡ ಸವಾರ ಯುವತಿಗೆ ಹಲ್ಲೆ ತಿರುಗಿಸಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ಮೂರು ದಿನಗಳ ಹಿಂದೆ ನಡೆದಿದೆ. ಘಟನೆಯ ಎರಡೂ ವಿಡಿಯೋಗಳು ವೈರಲ್ ಆಗಿವೆ.
ಮೊದಲು ಶ್ರೇಯಾ ಎಂಬ ಯುವತಿ ಹಲ್ಲೆ ನಡೆಸಿದ್ದು ಸಿಸಿ ಟಿವಿಯಲ್ಲಿ ಸೆರೆಯಾದರೆ, ಆನಂತರ ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ಯುವತಿ ಮೇಲೆ ಹಲ್ಲೆ ನಡೆಸಿರುವುದು ಎಲ್ಲಡೆ ವೈರಲ್ ಆಗಿದೆ. ಜೂನ್ 13ರಂದು ಈ ಘಟನೆ ನಡೆದಿದೆ. ಇಂದು (ಜೂನ್ 16) ಈ ಪ್ರಕರಣ ಬೆಳಕಿಗೆ ಬಂದ ಕಾರಣ ಜಯನಗರ ಪೊಲೀಸರು ಎನ್‌ಸಿಆರ್ ದಾಖಲಿಸಿಕೊಂಡಿದ್ದಾರೆ.
ಶ್ರೇಯಾ ಅವರು ಆ ದಿನದಂದು ರ‍್ಯಾಪಿಡೋ ಸೇವೆ ಬಳಸಿಕೊಂಡು ಪ್ರಯಾಣಿಸುತ್ತಿದ್ದರು. ಈ ವೇಳೆ ಚಾಲಕನು ಅತಿ ವೇಗವಾಗಿ ವಾಹನ ಚಲಾಯಿಸುತ್ತಿದ್ದುದರಿಂದ, ಶ್ರೇಯಾ ಚಾಲಕನನ್ನು ಪ್ರಶ್ನಿಸಿ ಎರಡು ಮೂರು ಬಾರಿ ಹಲ್ಲೆ ನಡೆಸಿದ್ದಾರೆ. ಇದೇ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆಯಾಗಿದ್ದು, ಮಾತಿಗೆ ಮಾತು ಬೆಳೆದಿದೆ. ಈ ವೇಳೆ ಚಾಲಕ ಸುಹಾಸ್ ಯುವತಿ ಮೇಲೆ ಹಲ್ಲೆ ನಡೆಸಿದ್ದಾನೆ. ಹೊಡೆದ ಏಟಿಗೆ ಯುವತಿ ರಸ್ತೆಗೆ ಬಿದ್ದಿದ್ದಾರೆ.
ಘಟನೆ ನಡೆದ ನಂತರವೂ ಮಹಿಳೆ ಹೋಗಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಘಟನೆಯ ಬಗ್ಗೆ ಸಂಪೂರ್ಣವಾಗಿ ವಿಡಿಯೋ ಸಮೇತ ಮಾಹಿತಿ ಪಡೆದುಕೊಂಡ ಜಯನಗರ ಪೊಲೀಸ್ ಠಾಣೆ ಸಿಬ್ಬಂದಿ ಎನ್‌ಸಿಆರ್ ದಾಖಲಿಸಿದ್ದಾರೆ.
ಇದನ್ನು ಓದಿದ್ದೀರಾ? ಈಶಾನ್ಯ ಮತ್ತು ದಕ್ಷಿಣ ಭಾರತದಲ್ಲಿ ಪ್ರವಾಹ ಸಾಧ್ಯತೆ: ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಚಾಲಕನಿಂದ ಆರೋಪ
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆಯೇ ಶ್ರೇಯಾ ಮೇಲೆ ಹಲ್ಲೆ ಮಾಡಿದ ಬೈಕ್ ಚಾಲಕ ಸುಹಾಸ್ ಪ್ರತಿಕ್ರಿಯಿಸಿದ್ದು, ಮೊದಲು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಿದ್ದು ಆ ಯುವತಿ. ಶರ್ಟ್ ಕಟ್ ನಲ್ಲಿ ಬಂದೆ ಅಂತ ಅರ್ಧ ದಾರಿಯಲ್ಲಿ ನಿಲ್ಲಿಸಿ ಇಂಗ್ಲಿಷ್ ನಲ್ಲಿ ಬೈದರು. ನಾನು ಐದು ವರ್ಷದಿಂದ ರ‍್ಯಾಪಿಡೋ ಓಡಿಸುತ್ತಿದ್ದೇನೆ. ದಾರಿ ಗೊತ್ತು ಅಂದೆ. ಬಳಿಕ ಗಾಡಿ ನಿಲ್ಲಿಸಿ ಇಂಗ್ಲಿಷ್‌ನಲ್ಲಿ ನನಗೆ ಕೆಟ್ಟದಾಗಿ ಬೈದರು. ಟಿಫಿನ್ ಬಾಕ್ಸ್ ನಿಂದ ಹೊಡೆದರು. ಅಷ್ಟು ಜನರ ಮುಂದೆ ಹೊಡೆದಾಗ ಸಿಟ್ಟಲ್ಲಿ ನಾನು ಹೊಡೆದೆ ಎಂದು ಸ್ಪಷ್ಟಪಡಿಸಿದ್ದಾನೆ.