ಸೋನಿಪತ್ ಕಾಲುವೆಯಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಹರಿಯಾಣದ ಮೂಲದ ಮಾಡೆಲ್‌ನ ಶವ ಪತ್ತೆಯಾಗಿದೆ.
ಹರಿಯಾಣವಿ ಎಂಬ ಸಂಗೀತ ಸಂಸ್ಥೆಯಲ್ಲಿ ಮಾಡೆಲ್ ಆಗಿ ಕೆಲಸ ಮಾಡುತ್ತಿದ್ದ ಶೀತಲ್ ಅವರ ಶವ ಪತ್ತೆಯಾಗಿದ್ದು ಕೊಲೆಗೆ ಕಾರಣ ತಿಳಿದು ಬಂದಿಲ್ಲ. ಶೀತಲ್ ತನ್ನ ಸಹೋದರಿ ನೇಹಾ ಜೊತೆ ಪಾಣಿಪತ್‌ನಲ್ಲಿ ವಾಸಿಸುತ್ತಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್ 14 ರಂದು ಮಾಡೆಲ್ ಶೂಟಿಂಗ್‌ಗಾಗಿ ಅಹರ್ ಗ್ರಾಮಕ್ಕೆ ತೆರಳಿದ್ದರು. ಮರಳಿ ಮನೆಗೆ ಬಾರದೇ ಇದ್ದಾಗ ಸಹೋದರಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ದೂರು ದಾಖಲಿಸಿದ್ದರು.
ಪೊಲೀಸರು ತನಿಖೆ ಕೈಗೊಂಡಾಗ ಖಾಂಡಾ ಗ್ರಾಮದ ಬಳಿಯ ಕಾಲುವೆಯಲ್ಲಿ ಮೃತದೇಹವನ್ನು ಪತ್ತೆ ಹಚ್ಚಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನು ಓದಿದ್ದೀರಾ? ದೂರದೂರಿನಲ್ಲೂ ಮೇಳೈಸುತ್ತಿದೆ ʼದೂರ ತೀರ ಯಾನʼದ ಶೀರ್ಷಿಕೆ ಗೀತೆ
ಇಡೀ ಪ್ರಕರಣದ ಬಗ್ಗೆ ಮಾಹಿತಿ ನೀಡಿದ ಎಸಿಪಿ ಅಜಿತ್ ಸಿಂಗ್, ಖಾರ್ಖೋಡಾ ಪೊಲೀಸ್ ಠಾಣೆ ಪ್ರದೇಶದ ಕಾಲುವೆಯಿಂದ ಯುವತಿಯ ಶವ ಪತ್ತೆಯಾಗಿದ್ದು, ಪಾಣಿಪತ್‌ನಲ್ಲಿ ನಾಪತ್ತೆ ಪ್ರಕರಣ ದಾಖಲಾಗಿದೆ. ಮೃತದೇಹವನ್ನು ವಶಕ್ಕೆ ತೆಗೆದುಕೊಂಡು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.
ಕಳೆದ ವಾರ, ಯೂಟ್ಯೂಬರ್ ಕಮಲ್ ಕೌರ್ ಭಾಭಿ ಅವರ ಮೃತದೇಹ ಬಟಿಂಡಾ-ಚಂಡೀಗಢ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಆದೇಶ್ ವೈದ್ಯಕೀಯ ವಿಶ್ವವಿದ್ಯಾಲಯದ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನಲ್ಲಿ ಪತ್ತೆಯಾಗಿತ್ತು. ಇದೀಗ ಮತ್ತೋರ್ವ ಮಾಡೆಲ್‌ನ ಮೃತದೇಹ ಕೊಲೆಯಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕವನ್ನು ಹೆಚ್ಚಿಸಿದೆ.