ಕಾಂತಾರ ಚಿತ್ರತಂಡಕ್ಕೆ ತಹಶೀಲ್ದಾರ್ ನೋಟಿಸ್; ಮೂರು ದಿನದಲ್ಲಿ ಉತ್ತರಿಸಲು ಸೂಚನೆ

Date:

Advertisements

ರಿಷಬ್ ಶೆಟ್ಟಿ ನಟನೆಯ ‘ಕಾಂತಾರ: ಚಾಪ್ಟರ್​ 1’ ಚಿತ್ರತಂಡಕ್ಕೆ ಮತ್ತೊಂದು ಕಂಟಕ ಎದುರಾಗಿದ್ದು, ಶಿವಮೊಗ್ಗ ಜಿಲ್ಲೆಯ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ನೀಡಿದ್ದಾರೆ.

ಇತ್ತೀಚೆಗೆ ಚಿತ್ರೀಕರಣದ ವೇಳೆ ಮಾಣಿ ಡ್ಯಾಮ್​​​ ಹಿನ್ನೀರಿನಲ್ಲಿ ದೋಣಿ ಮಗುಚಿ ಅವಘಡ ಸಂಭವಿಸಿದ್ದರ ಬಗ್ಗೆ ವರದಿ ಆಗಿತ್ತು. ಈ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡುವಂತೆ ಕಾಂತಾರ ಚಿತ್ರತಂಡಕ್ಕೆ ನೋಟಿಸ್​ ನೀಡಲಾಗಿದೆ. ಶೂಟಿಂಗ್​ಗೆ ಪಡೆದ ಅನುಮತಿ ಪತ್ರ ಹಾಜರುಪಡಿಸಲು ಸೂಚಿಸಲಾಗಿದೆ. ನೋಟಿಸ್​ ತಲುಪಿದ 3 ದಿನದೊಳಗೆ ಹಾಜರುಪಡಿಸಲು ಸೂಚನೆ ನೀಡಲಾಗಿದ್ದು, ಇಲ್ಲದಿದ್ದರೆ ಕ್ರಮ ಕೈಗೊಳ್ಳುವುದಾಗಿ ತಹಶೀಲ್ದಾರ್ ಎಚ್ಚರಿಕೆ ನೀಡಿದ್ದಾರೆ.

‘ಕಾಂತಾರ: ಚಾಪ್ಟರ್​ 1’ ಚಿತ್ರತಂಡಕ್ಕೆ ತಹಶೀಲ್ದಾರ್ ನೀಡಿರುವ ನೋಟಿಸ್ ಈ ರೀತಿ ಇದೆ. ‘ದಿನಾಂಕ 15-06-2025ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತರ: ದಿ ಲೆಜೆಂಡ್ ಭಾಗ-ಒಂದು ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ ಹಾಗೆಯೇ ಒಂದು ಆಂಬುಲೆನ್ಸ್ ಚಿತ್ರೀಕರಣದ ಸ್ಥಳದಿಂದ ತೀರ್ಥಹಳ್ಳಿ ಕಡೆ ಹೋಗಿರುವ ಬಗ್ಗೆ ಪ್ರಕಟವಾಗಿರುತ್ತದೆ. ಸದರಿ ಚಿತ್ರೀಕರಣ ನಡೆಯುತ್ತಿರುವ ಬಗ್ಗೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲ್ಲೂಕು ಆಡಳಿತಕ್ಕಾಗಲಿ, ಜಿಲ್ಲಾಡಳಿತಕ್ಕಾಗಲಿ ಯಾವುದೇ ಮಾಹಿತಿಯನ್ನು ತಾವು ನೀಡಿರುವುದಿಲ್ಲ.’

Advertisements

ಇದನ್ನು ಓದಿದ್ದೀರಾ? ಥಗ್ ಲೈಫ್ ಸಿನಿಮಾ ನಿಷೇಧ: ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

‘ಈ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತರ ಹೊಂಬಾಳೆ ಫಿಲ್ಮ್ಸ್ ವತಿಯಿಂದ ಸೃಷ್ಟಿಕರಣ ನೀಡಿರುವುದು ಸರಿಯಷ್ಟೇ. ಆದರೆ ಸದರಿ ಸುದ್ದಿಯಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದು, ಮಾನ್ಯ ಜಿಲ್ಲಾಧಿಕಾರಿಯವರು ಈ ಬಗ್ಗೆ ವರದಿ ಕೇಳಿದ್ದು, ರಾಜಸ್ವ ನಿರೀಕ್ಷಕರು, ನಗರ ಹೋಬಳಿ ರವರು ನಿಮ್ಮ ಸಂಸ್ಥೆಯ ಮ್ಯಾನೇಜರ್ ಅವರಿಗೆ ಅನುಮತಿ ಪತ್ರಗಳನ್ನು ಹಾಜರುಪಡಿಸಲು ದೂರವಾಣಿ ಮೂಲಕ ಸಂಪರ್ಕಿಸಿದ್ದರೂ ಸಹ ನೀವುಗಳು ಯಾವುದೇ ಸ್ಪಂದನೆ ನೀಡಿರುವುದಿಲ್ಲ.’

‘ದಿನಾಂಕ 15-06-2025ರಂದು ನಡೆದ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಅವಶ್ಯವಿರುವುದರಿಂದ ಸಮರ್ಪಕ ದಾಖಲೆಗಳೊಂದಿಗೆ ಈ ನೋಟಿಸ್ ತಲುಪಿದ 3 ದಿನಗಳ ಒಳಗಾಗಿ ಸಮಜಾಯಿಷಿ ನೀಡಲು ಸೂಚಿಸಿದೆ. ತಪ್ಪಿದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಭಾವಿಸಿ ಚಿತ್ರೀಕರಣಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡಲಾಗುವುದು ತಿಳಿಯಿರಿ’ ಎಂದು ನೋಟಿಸ್ ನೀಡಲಾಗಿದೆ.

ಶೂಟಿಂಗ್ ಆರಂಭ ಆದಾಗಿನಿಂದಲೂ ‘ಕಾಂತಾರ: ಚಾಪ್ಟರ್​ 1’ ಸಿನಿಮಾಗೆ ಹಲವು ವಿಘ್ನಗಳು ಎದುರಾಗುತ್ತಿವೆ. ಕಲಾವಿದರು ಮತ್ತು ತಂತ್ರಜ್ಞರು ನಿಧನರಾಗಿದ್ದು ಕೂಡ ಬೇಸರದ ಸಂಗತಿ. ಈಗ ದೋಣಿ ಮಗುಚಿದ ಘಟನೆ ಕೂಡ ಚರ್ಚೆ ಆಗುತ್ತಿದೆ. ತಹಶೀಲ್ದಾರ್ ನೋಟಿಸ್​ಗೆ ಚಿತ್ರತಂಡ ಯಾವ ರೀತಿ ಸ್ಪಷ್ಟನೆ ನೀಡಲಿದೆ ಎಂಬುದನ್ನು ಕಾದು ನೋಡಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಟ ,ನಿರ್ದೇಶಕ ಮುರಳಿ ಮೋಹನ್ ನಿಧನ; ಓಂ, ಶ್‌ ಸೇರಿ ಹಲವು ಚಿತ್ರಗಳಿಗೆ ಸಂಭಾಷಣೆ

ಕನ್ನಡ ಚಿತ್ರರಂಗದಲ್ಲಿ ನಿರ್ದೇಶಕನಾಗಿ ಗುರುತಿಸಿಕೊಂಡಿದ್ದ ಮುರಳಿ ಮೋಹನ್ ಅವರು ನಿಧನರಾಗಿದ್ದಾರೆ. ಹಲವು...

ನಾವು ಬಾಯಿ ಮುಚ್ಚಿಕೊಂಡಿದ್ದರೆ ಮತದಾನದ ಹಕ್ಕು ಕಸಿದುಕೊಳ್ಳುವ ದಿನ ದೂರವಿಲ್ಲ: ನಟ ಕಿಶೋರ್ ಕುಮಾರ್

ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಮತಗಳ್ಳತನದ ಬಗ್ಗೆ ಲೋಕಸಭೆಯ ವಿಪಕ್ಷ...

ಹಣ ಪಡೆದು ವಂಚನೆ ಆರೋಪ: ನಟ ಧ್ರುವ ಸರ್ಜಾ ವಿರುದ್ಧ ಮಹಾರಾಷ್ಟ್ರದಲ್ಲಿ ಎಫ್‌ಐಆರ್‌ ದಾಖಲು

ಖ್ಯಾತ ನಿರ್ದೇಶಕ ಮತ್ತು ನಿರ್ಮಾಪಕ ರಾಘವೇಂದ್ರ ಹೆಗಡೆ ಅವರಿಗೆ ಕೋಟ್ಯಂತರ ರೂಪಾಯಿ...

Download Eedina App Android / iOS

X