ಕರ್ನಾಟಕ ರಾಜ್ಯ ಸರಕಾರದ ರಾಷ್ಟ್ರೀಯ ರಸ್ತೆ ಅಭಿವೃದ್ಧಿ ಯೋಜನೆಯಡಿ ಯಲ್ಲಿ 34 ಕೋಟಿ ರೂ. ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಕಳಪೆ ಮಾಡಿದ್ದು ಪರಿಶೀಲನೆ ನಡೆಸಿ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿ ದಲಿತ ಸೇನೆ ವತಿಯಿಂದ ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅವರಿಗೆ ಮನವಿ ಸಲ್ಲಿಸಿದರು.
ರಾಷ್ಟ್ರೀಯ ಹೆದ್ದಾರಿ ಸಂಪೂರ್ಣವಾಗಿ ಹದೆಗಟ್ಟಿದ್ದರಿಂದ ಹೆಚ್ಚಿನ ಸಂಖ್ಯೆಯಲ್ಲಿ ದಿನನಿತ್ಯ ಅಪಘಾತಗಳು ಸಂಭವಿಸುತ್ತಿವೆ.34 ಕೋಟಿ ರೂ.ವೆಚ್ಚದಲ್ಲಿ ಪವರ ಗ್ರೀಡ್‌ನಿಂದ ಯರಮರಸ್ ಕ್ಯಾಂಪ್‌ವರೆಗೆ ರಾಷ್ಟ್ರೀಯ ಹೆದ್ದಾರಿಯನ್ನು ನಿರ್ಮಾಣ ಮಾಡಲು 1 ಕಿ.ಮೀ ಗೆ 7 ಕೋಟಿ ರೂಪಾಯಿ ಅನುದಾನವನ್ನು ನೀಡಿ ಉನ್ನತ ಮಟ್ಟದ ಕಾಮಗಾರಿಯನ್ನು ಮಾಡಬೇಕೆಂದು ಗುತ್ತೇದಾರರಿಗೆ ಆದೇಶಿಸಿ ಸಂಪೂರ್ಣವಾಗಿ ಗುಣಮಟ್ಟದ ಕಾಮಗಾರಿ ನಿರ್ವಹಿಸಲು ಸ್ಯಾಪ್‌ಕಾನ್ ಕನ್ಸ್ಟ್ರಕ್ಷನ್ ಪ್ರೈ.ಲಿ ಕಂಪನಿಗೆ ನೀಡಿದೆ. ಕಂಪನಿಯು ಕಳಪೆ ಕಾಮಗಾರಿ ಮಾಡುತ್ತಿದ್ದು ,ಅಧಿಕಾರಿಗಳೊಂದಿಗೆ ಶಾಮೀಲಾಗಿ ಭ್ರಷ್ಟಚಾರವೆಸಗಿದೆ. ಕಳಪೆ ಕಾಮಗಾರಿ ಕಾನೂನು ಬಾಹೀರವಾಗಿ ಸರಕಾರದ ಆದೇಶಗಳನ್ನು ಗಾಳಿಗೆ ತೂರಿದೆ ಎಂದು ದೂರಿದರು.
ಈ ಗುತ್ತಿಗೆದಾರನ ಅವೈಜ್ಞಾನಿಕ ಕಾಮಗಾರಿಯ ರಾಷ್ಟ್ರೀಯ ಹೆದ್ದಾರಿ ಪವರಗ್ರೀಡ್ ಮುಂದುಗಡೆ ಕಾಮಗಾರಿಯ ಗುಂಡಿಯಲ್ಲಿ ಬಿದ್ದು ಇಬ್ಬರು ಸಾವನ್ನಪ್ಪಿದ್ದಾರೆ.ಕೂಡಲೇ ಸ್ಯಾಪ್‌ಕಾನ್ ಕನ್ಸ್ಟ್ರಕ್ಷನ್ ಪ್ರೈ.ಲಿ ಕಂಪನಿಯ ಮಾಲೀಕನ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ ಉನ್ನತ ಮಟ್ಟದ ತನಿಖೆ ನಡೆಸಬೇಕು.ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಗುಣಮಟ್ಟದಲ್ಲಿ ಮಾಡಬೇಕು ಎಂದು ಒತ್ತಾಯಿಸಿದರು.
ಈ ಸುದ್ದಿ ಓದಿದ್ದೀರಾ? ರಾಯಚೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ; ಆರೋಪಿ ಬಂಧನ
ಈ ಸಂದರ್ಭದಲ್ಲಿ ರಾಜ್ಯ ಸಂಘಟನೆ ಕಾರ್ಯದರ್ಶಿ ಜಾವಿದ್ ಖಾನ್, ಜಿಲ್ಲಾಧ್ಯಕ್ಷ ಮಾರುತಿ ಛಲುವಾದಿ ಚಿಕ್ಕಸೂಗುರು, ಇದ್ದರು.
