ಗೃಹ ಸಚಿವರೆ ತನಿಖೆ ಮೇಲುಸ್ತುವಾರಿ ಮುಂದುವರಿಸಿದರೆ ಭಯೋತ್ಪಾದಕರಿಗೆ ಕ್ಲೀನ್ ಚಿಟ್: ಬಿಜೆಪಿ ಆರೋಪ

Date:

Advertisements
  • ‘ಶಾಸಕರ ಅಮಾನತು ಮಾಡಿ ಸಂವಿಧಾನದ ಆಶಯ ಬುಡಮೇಲು ಮಾಡಿದ್ದಾರೆ’
  • ‘ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಕ್ರೈಂ ರೇಟ್ ಶೇ.35 ರಷ್ಟು ಹೆಚ್ಚಾಗಿದೆ’

ಬೆಂಗಳೂರಿನಲ್ಲಿ ಸೆರೆಸಿಕ್ಕ ಶಂಕಿತ ಉಗ್ರರರ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ರಾಜ್ಯ ಸರ್ಕಾರವು ಎನ್‌ಐಎಗೆ ವಹಿಸಬೇಕು ಎಂದು ಬಿಜೆಪಿ ಆಗ್ರಹಿಸಿದೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಬಿಜೆಪಿ, “ಸಿಲಿಕಾನ್ ಸಿಟಿ, ಸ್ಟಾರ್ಟಪ್‌ಗಳ ತವರೂರು, ಐಟಿ ಸಿಟಿ ಎಂದು ಜಗತ್ತಿನಲ್ಲಿಯೇ ಬ್ರಾಂಡ್ ಆಗಿರುವ ಬೆಂಗಳೂರಿನಲ್ಲಿ ಈ ಸರ್ಕಾರ ಬಂದ ನಂತರ, ಉಗ್ರಗಾಮಿಗಳ ಚಟುವಟಿಕೆ ಹೆಚ್ಚಾಗಿದೆ. ಬೆಂಗಳೂರಿನಲ್ಲಿ ವಿಧ್ವಂಸಕ ಕೃತ್ಯ ನಡೆಸಲು ಯೋಜನೆ ರೂಪಿಸಿದ್ದ ಭಯೋತ್ಪಾದಕರು ಸಾಕ್ಷಿ ಸಮೇತ ಸಿಕ್ಕಿಬಿದ್ದಿದ್ದಾರೆ” ಎಂದು ತಿಳಿಸಿದೆ.

“ಆದರೆ, ಸೆರೆ ಸಿಕ್ಕ ಭಯೋತ್ಪಾದಕರನ್ನು, ಭಯೋತ್ಪಾದಕರು ಎಂದು ಹೇಳಲು ಆಗುವುದಿಲ್ಲ ಎಂದು ಈ ಘನತೆವೆತ್ತ ಸರ್ಕಾರದ ಗೃಹ ಮಂತ್ರಿ ಹೇಳುವ ಮೂಲಕ, ಇಲ್ಲಿಯೂ ಸಹ ತನ್ನ ಓಲೈಕೆ ರಾಜಕಾರಣವನ್ನು ಪ್ರದರ್ಶಿಸುತ್ತಿದ್ದಾರೆ. ಇವರೇ ಈ ಪ್ರಕರಣದ ತನಿಖೆಯ ಮೇಲುಸ್ತುವಾರಿಯನ್ನು ಮುಂದುವರೆಸಿದರೇ, ಎಲ್ಲ ಭಯೋತ್ಪಾದಕರಿಗೂ ಕ್ಲೀನ್ ಚಿಟ್ ಸಿಗಲಿದೆ. ಹಾಗಾಗಿ ರಾಜ್ಯದ ನಾಗರಿಕರ ಹಿತದೃಷ್ಟಿಯಿಂದ ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ಎನ್.ಐ‌.ಎ ಗೆ ವಹಿಸಬೇಕು’ ಎಂದು ಬಿಜೆಪಿ ಆಗ್ರಹಿಸಿದೆ.

Advertisements

“ಸರ್ಕಾರದ ಕೆಲಸ – ದೇವರ ಕೆಲಸ ಎಂಬುದು ಈ ಸರ್ಕಾರದ ಅವಧಿಯಲ್ಲಿ ‘ವರ್ಗಾವಣೆಯೊಂದೇ ಸರ್ಕಾರದ ಕೆಲಸ’ ಎಂಬಂತೆ ಮಾರ್ಪಾಡಾಗಿದೆ. ಸರ್ಕಾರವೊಂದು ಆಡಳಿತಕ್ಕೆ ಬಂದು ಎರಡು ತಿಂಗಳೊಳಗೆ ಬೃಹತ್ ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವುದು ದೇಶದ ಇತಿಹಾಸದಲ್ಲಿ ಇದೇ ಮೊದಲು” ಎಂದು ಟೀಕಿಸಿದೆ.

“ಗ್ಯಾರಂಟಿಗಳ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಎಟಿಎಂ ಸರ್ಕಾರ ಇಲ್ಲಿಯವರೆಗೂ ವರ್ಗಾವಣೆ ದಂಧೆಯಲ್ಲಿ ಮಾತ್ರ ನಿರತವಾಗಿದೆ ಹೊರತು ರಾಜ್ಯದ ಅಭಿವೃದ್ಧಿಯನ್ನು ಸಂಪೂರ್ಣವಾಗಿ ಕಡೆಗಣಿಸಿದೆ. ಈ ತುಘಲಕ್ ಸರ್ಕಾರ ಆಡಳಿತಕ್ಕೆ ಬಂದಿದ್ದೇ ತಡ, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು, ರಾಜ್ಯದ ಕ್ರೈಂ ರೇಟ್ ಶೇ.35 ರಷ್ಟು ಹೆಚ್ಚಾಗಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಾಲಮುಚ್ಚಿಕೊಂಡಿದ್ದ ಸಮಾಜಘಾತುಕ ಶಕ್ತಿಗಳು, ಈಗ ಸಂಪೂರ್ಣ ಬಾಲ ಬಿಚ್ಚಿದ್ದು, ರಾಜ್ಯದಲ್ಲಿ ಕೊಲೆ, ಸುಲಿಗೆ, ದರೋಡೆ ಪ್ರಕರಣಗಳು ಸಾಮಾನ್ಯವಾಗಿವೆ” ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಪೊಲೀಸರ ಮೇಲೆ ಹಲ್ಲೆ, ಹಿಂದೂ ಕಾರ್ಯಕರ್ತರ ಕೊಲೆ, ಜೈನ ಮುನಿಗಳ ಅಮಾನುಷ ಹತ್ಯೆ, ಹಾಡುಹಗಲೇ ಅತ್ಯಾಚಾರ ಪ್ರಕರಣಗಳು, ಭಯೋತ್ಪಾದಕರ ಸಂಚು ಹೀಗೆ ಸಾಲು ಸಾಲು ಅಪರಾಧ ಪ್ರಕರಣಗಳು ಜರುಗುತ್ತಿದ್ದರೂ, ಸರ್ಕಾರ ಮಾತ್ರ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಕುಳಿತಿದೆ” ಎಂದು ಆರೋಪಿಸಿದೆ.

“ರಾಜ್ಯದೆಲ್ಲೆಡೆ ಮಳೆ ಇಲ್ಲದೇ, ಬರ ತಾಂಡವವಾಡುತ್ತಿದ್ದು, ಬೆಳೆ ಹಾಗೂ ಬೆಲೆ ಇಲ್ಲದೇ ಅನ್ನದಾತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ರಾಜ್ಯದಲ್ಲಿ ಈ ಸರ್ಕಾರ ಬಂದ ಎರಡು ತಿಂಗಳೊಳಗೆ ಒಟ್ಟು 46 ಜನ ರೈತರು ಆತ್ಮಹತ್ಯೆ ಮಾಡಿಕೊಂಡಿರುವುದು, ಈ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಪ್ರದರ್ಶಿಸುತ್ತದೆ” ಎಂದು ಬಿಜೆಪಿ ದೂರಿದೆ.

ಈ ಸುದ್ದಿ ಓದಿದ್ದೀರಾ? ಪಿಎಸ್‌ಐ ನೇಮಕಾತಿ ಹಗರಣ | ನ್ಯಾಯಾಂಗ ತನಿಖೆಗೆ ಸರ್ಕಾರ ಆದೇಶ

“ಸಂವಿಧಾನ ರಕ್ಷಕರು ಎಂದು ತಮಗೆ ತಾವೇ ಸರ್ಟಿಫಿಕೇಟ್ ಕೊಟ್ಟುಕೊಳ್ಳುವ ಈ ಸರ್ಕಾರದ ಪ್ರತಿನಿಧಿಗಳು, ಅಧಿಕಾರಕ್ಕೆ ಬಂದ ನಂತರ ಸಂವಿಧಾನಕ್ಕೆ ಮತ್ತು ಸಾಂವಿಧಾನಿಕ ಹುದ್ದೆಗಳಿಗೆ ಕನಿಷ್ಠ ಗೌರವವನ್ನು ಸಹ ನೀಡುತ್ತಿಲ್ಲ. ರಾಜ್ಯದ ಹಿರಿಯ ಐ.ಎ.ಎಸ್ ಅಧಿಕಾರಿಗಳನ್ನು ತಮ್ಮ ಪಕ್ಷದ ಕೆಲಸಕ್ಕೆ ನೇಮಿಸಿಕೊಂಡು, ಅಧಿಕಾರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಸಭಾಪತಿಗಳು ತಮ್ಮ ಹುದ್ದೆಯ ಘನತೆಯನ್ನು ಮರೆತು ರಾಜಕೀಯ ಔತಣಕೂಟದಲ್ಲಿ ಭಾಗಿಯಾಗಿದ್ದಾರೆ. ಇದನ್ನು ಸದನದಲ್ಲಿ ಪ್ರಶ್ನಿಸಿದ ಶಾಸಕರನ್ನು ಏಕಾಏಕಿ ಅಮಾನತು ಮಾಡುವ ಮೂಲಕ, ಸಂವಿಧಾನದ ಆಶಯಗಳನ್ನು ಬುಡಮೇಲು ಮಾಡಿದ್ದಾರೆ” ಎಂದು ಅಸಮಧಾನ ವ್ಯಕ್ತಪಡಿಸಿದೆ.

“ಈ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ತಾವು ಘೋಷಿಸಿದ್ದ ಸುಳ್ಳು ಗ್ಯಾರಂಟಿಗಳ ಅನುಷ್ಠಾನಕ್ಕಾಗಿ ರಾಜ್ಯದ ಜನತೆಯ ಮೇಲೆ ತೆರಿಗೆ ಏರಿಕೆಯನ್ನು ಹೇರಿದ್ದು, ತರಕಾರಿ, ದಿನಸಿ ಸಾಮಗ್ರಿ, ಹಾಲು, ಹಣ್ಣು-ಹಂಪಲು, ಮೊಟ್ಟೆ, ಮಾಂಸ ಸೇರಿ ದಿನಬಳಕೆ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದರಿಂದ ಬಡ ಮತ್ತು ಮಧ್ಯಮ ವರ್ಗದ ಜನತೆ ಜೀವನ ನಡೆಸುವುದೇ ದುಸ್ತರವಾಗಿದೆ. ಆದರೆ, ಬೆಲೆಯೇರಿಕೆ ಬಗ್ಗೆ ಕ್ರಮ ಕೈಗೊಳ್ಳಬೇಕಾಗಿದ್ದ ಸರ್ಕಾರ, ತನ್ನ ವರ್ಗಾವಣೆಯ ದಂಧೆಯ ರೇಟನ್ನು ಏರಿಸಿಕೊಂಡು, ತನ್ನ ಮತ್ತು ದೆಹಲಿಯ ಕಲೆಕ್ಷನ್ ಏಜೆಂಟ್‌ಗಳ ಜೇಬನ್ನು ತುಂಬಿಸುತ್ತಿದೆ” ಎಂದು ಆರೋಪಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X