ತಂದೆ ಸೇದಿ ಬಿಸಾಕಿದ್ದ ಬೀಡಿಯ ತುಂಡನ್ನು ನುಂಗಿ ಹತ್ತು ತಿಂಗಳ ಮಗು ಸಾವನ್ನಪ್ಪಿದ ಘಟನೆ ಮಂಗಳೂರು ನಗರದಲ್ಲಿ ನಡೆದಿದೆ.
ನಗರದ ಅಡ್ಯಾರ್‌ನಲ್ಲಿ ವಾಸವಾಗಿದ್ದ ಬಿಹಾರ ಮೂಲದ ದಂಪತಿಯ 10 ತಿಂಗಳ ಮಗು ಅನೀಶ್ ಕುಮಾರ್ ಮೃತಪಟ್ಟಿದೆ. ಶನಿವಾರ ಮಧ್ಯಾಹ್ನ ತಂದೆ ಸೇದಿ ಬಿಸಾಡಿದ್ದ ಬೀಡಿಯ ತುಂಡನ್ನು ಮಗು ನುಂಗಿ ಅಸ್ವಸ್ಥಗೊಂಡಿತ್ತು. ಕೂಡಲೇ ಮಗುವನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಭಾನುವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮಗು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಇದನ್ನು ಓದೀದ್ದಿರಾ? ಮಂಗಳೂರು | ಜಿಲ್ಲೆಯಲ್ಲಿ ಕೆಲವರಿಂದ ಮಾತ್ರ ಶಾಂತಿ, ಸೌಹಾರ್ದತೆಗೆ ಧಕ್ಕೆ: ಜಯಕೃಷ್ಣ ಶೆಟ್ಟಿ
ತನ್ನ ಗಂಡನ ನಿರ್ಲಕ್ಷ್ಯದಿಂದಲೇ ಬೀಡಿಯ ತುಂಡನ್ನು ನುಂಗಿ ಅಸ್ವಸ್ಥಗೊಂಡು ಮಗು ಮೃತಪಟ್ಟಿದೆ. ಮನೆಯೊಳಗೆ ಬೀಡಿ ಸೇದಿ ಬಿಸಾಡದಂತೆ ಗಂಡನಿಗೆ ಹಲವು ಬಾರಿ ಹೇಳಿದರೂ ಮತ್ತೆ ಬೀಡಿ ಸೇದಿ ಬಿಸಾಡಿದರ ಪರಿಣಾಮ ಮಗು ಪ್ರಾಣ ಕಳೆದುಕೊಂಡಿದೆ ಎಂದು ಮಗುವಿನ ತಾಯಿ ಲಕ್ಷ್ಮಿ ದೇವಿ ದೂರು ನೀಡಿದ್ದಾರೆ. ಈ ಸಂಬಂಧ ಮಂಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.