8 ವರ್ಷದ ಬಳಿಕ ಕೆಎಸ್‌ಆರ್‌ಟಿಸಿಗೆ ನೇಮಕಾತಿ: 2 ಸಾವಿರ ಅಭ್ಯರ್ಥಿಗಳಿಗೆ ಆದೇಶ ವಿತರಿಸಿದ ಸಚಿವ ರಾಮಲಿಂಗಾರೆಡ್ಡಿ

Date:

Advertisements

“ಕೆಎಸ್‌ಆರ್‌ಟಿಸಿ (KSRTC) ವ್ಯಾಪ್ತಿಯಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದೆ. ನೇಮಕಗೊಂಡ 2000 ಚಾಲಕ-ಕಂ- ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ. ಇದರಲ್ಲಿ ಯಾರದ್ದೇ ಹಸ್ತಕ್ಷೇಪವಿಲ್ಲ. ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆಗೊಳಿಸಲಾಗಿದೆ” ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಹೇಳಿದರು.

ಸಾರಿಗೆ ನಿಗಮ ವ್ಯಾಪ್ತಿಯಲ್ಲಿ ನಡೆದ ನೇಮಕಾತಿಯಲ್ಲಿ ಆಯ್ಕೆ ಆದ ನೂತನ ಚಾಲಕ ಕಂ -ನಿರ್ವಾಹಕರಿಗೆ ಮಂಗಳವಾರ ಬೆಂಗಳೂರಿನ ಶಾಂತಿನಗರದಲ್ಲಿರುವ ಕೆಎಸ್‌ಆರ್‌ಟಿಸಿಯ ಕೇಂದ್ರ ಕಚೇರಿಯಲ್ಲಿ ನಿಯೋಜನಾ ಆದೇಶ ವಿತರಣೆ ಸಮಾರಂಭದಲ್ಲಿ ಆದೇಶ ಪತ್ರ ವಿತರಿಸಿ ಅವರು ಮಾತನಾಡಿದರು.

“ಹೊಸದಾಗಿ ನೇಮಕಗೊಂಡಿರುವ ಚಾಲನಾ ಸಿಬ್ಬಂದಿಗಳು ಸಂಸ್ಥೆಯನ್ನು ಉಳಿಸಿ ಬೆಳೆಸಿಕೊಂಡು ಹೋಗುವ ನಿಟ್ಟಿನಲ್ಲಿ ಕರ್ತವ್ಯ ‌ನಿರ್ವಹಿಸಬೇಕು. ಹಾಗೂ ಮಹಿಳಾ ಪ್ರಯಾಣಿಕರೊಂದಿಗೆ, ವಿದ್ಯಾರ್ಥಿಗಳೊಂದಿಗೆ ಸೌಜನ್ಯದಿಂದ ವರ್ತಿಸುವಂತೆ ತಿಳಿಸಿದರು. ಅಪಘಾತವು ಸಂಭವಿಸಿದಂತೆ ಎಚ್ಚರಿಕೆಯಿಂದ ಕರ್ತವ್ಯ ನಿರ್ವಹಿಸಬೇಕು” ಎಂದು ಸೂಚಿಸಿದರು.

Advertisements
WhatsApp Image 2025 06 17 at 2.42.58 PM

“ನಿಗಮವು ಕೊರೋನಾ ನಂತರ ಹಲವು ಅಡೆತಡೆಗಳನ್ನು ಎದುರಿಸಿಕೊಂಡು ಆರ್ಥಿಕವಾಗಿ ಯಶಸ್ಸಿನ ಮಾರ್ಗವನ್ನು ನೋಡುತ್ತಿದ್ದು, ಹಲವಾರು ಕಾರ್ಮಿಕ ಸ್ನೇಹಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗಿರುತ್ತದೆ. ನೌಕರರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಯನ್ನು ಒದಗಿಸಲಾಗುತ್ತಿದೆ. ನಾಲ್ಕು ಸಾರಿಗೆ ನಿಗಮಗಳಿಂದ ಸುಮಾರು 1000 ಕ್ಕೂ ಹೆಚ್ಚು ಮೃತರ ಅವಲಂಬಿತರಿಗೆ ನೌಕರಿಯನ್ನು ನೀಡಿದ್ದು, ಸುಮಾರು 9000 ಹುದ್ದೆಗಳಿಗೆ ನೇಮಕಾತಿ ನಡೆಯುತ್ತಿದ್ದು, ಈಗಾಗಲೇ 7500 ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಪೂರ್ಣಗೊಂಡಿರುತ್ತದೆ. ಅಪಘಾತದಿಂದ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬವನ್ನು ಆರ್ಥಿಕವಾಗಿ ಸದೃಢಗೊಳಿಸುವ ಸಲುವಾಗಿ ರೂ.1 ಕೋಟಿ ವಿಮಾ ಯೋಜನೆ, ಸ್ವಾಭಾವಿಕವಾಗಿ ಮೃತಪಟ್ಟ ಚಾಲನಾ ಸಿಬ್ಬಂದಿಗಳ ಕುಟುಂಬಕ್ಕೆ ರೂ.10 ಲಕ್ಷಗಳ ಕುಟುಂಬ ಕಲ್ಯಾಣ ಯೋಜನೆ ಅಡಿ ಪರಿಹಾರವನ್ನು ನೀಡಲಾಗುತ್ತಿದೆ” ಎಂದು ತಿಳಿಸಿದರು.

ಗುಬ್ಬಿ ವಿಧಾನಸಭಾ ಕ್ಷೇತ್ರದ ಶಾಸಕರೂ, ನಿಗಮದ ಅಧ್ಯಕ್ಷರೂ ಆದ ಎಸ್.ಆರ್. ಶ್ರೀನಿವಾಸ್ ಮಾತನಾಡಿ, “ಕೆಎಸ್‌ಆರ್‌ಟಿಸಿಯಲ್ಲಿ ಕಳೆದ ಎಂಟು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆಯು ಸ್ಥಗಿತಗೊಂಡಿತ್ತು. ಸಾರಿಗೆ ಸಚಿವರು ಸರ್ಕಾರದೊಂದಿಗೆ ಚರ್ಚಿಸಿ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಿದ್ದಾರೆ. ಚಾಲನಾ ಸಿಬ್ಬಂದಿಗಳ ನೇಮಕಾತಿಯು ಸಂಪೂರ್ಣವಾಗಿ ಪಾರದರ್ಶಕವಾಗಿದ್ದು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗಿದೆ. ನಿಮ್ಮ ಆಯ್ಕೆಯಂತೆ ಘಟಕ ನಿಯೋಜನೆ ಮಾಡಿರುವುದಾಗಿ ತಿಳಿಸಿದರು. ಜವಾಬ್ದಾರಿಯುತ ಹುದ್ದೆಗೆ ನೇಮಕವಾಗುತ್ತಿದ್ದು, ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ ನಿಗಮವನ್ನು ಆರ್ಥಿಕವಾಗಿ ಸದೃಢಗೊಳಿಸಬೇಕು” ಎಂದು ತಿಳಿಸಿ, ಎಲ್ಲರಿಗೆ ಶುಭ ಹಾರೈಸಿದರು.

WhatsApp Image 2025 06 17 at 2.42.59 PM 1

ನಿಗಮದ ಉಪಾಧ್ಯಕ್ಷರಾದ ಮೊಹಮ್ಮದ್ ರಿಜ್ವಾನ್ ನವಾಬ್ ಈ ಸಂದರ್ಭದಲ್ಲಿ ಮಾತನಾಡಿ, ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ 51 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ವಿತರಣೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಕೆಎಸ್‌ಆರ್‌ಟಿಸಿಯ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ, ಸಿಬ್ಬಂದಿ ಮತ್ತು ಜಾಗೃತ ವಿಭಾಗದ ನಿರ್ದೇಶಕಿ ಡಾ. ನಂದಿನಿ ದೇವಿ ಕೆ., ಮಾತಿ ತಂತ್ರಜ್ಞಾನ ವಿಭಾಗದ ನಿರ್ದೇಶಕರಾದ ಇಬ್ರಾಹಿಂ ಮೈಗೂರ, ಕೆಎಸ್‌ಆರ್‌ಟಿಸಿಯ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ. ಎಸ್, ಕಾರ್ಮಿಕ ಮುಖಂಡರು, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.

ನೇಮಕಾತಿಯ ಬಗ್ಗೆ ಇತರೆ ವಿವರಗಳು ಹೀಗಿದೆ.

  • ನಿಗಮದಲ್ಲಿ 2020ನೇ ಸಾಲಿನಲ್ಲಿ ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು. ಸದರಿ ನೇಮಕಾತಿ ಪ್ರಕ್ರಿಯೆಗಳು ಚಾಲನೆಯಲ್ಲಿದ್ದಾಗ ಕೋವಿಡ್-19 ರ ಹಿನ್ನಲೆಯಲ್ಲಿ ಸರ್ಕಾರದ ನಿರ್ದೇಶನದಂತೆ ನೇಮಕಾತಿ ಪ್ರಕ್ರಿಯೆಗಳನ್ನು ಸ್ಥಗಿತಗೊಳಿಸಲಾಗಿತ್ತು.
  • ಸರ್ಕಾರವು ದಿನಾಂಕ: 13-10-2023 ರಂದು 300 ತಾಂತ್ರಿಕ ಸಹಾಯಕ ಹಾಗೂ 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿ ನೀಡಿತು. ಅದರಂತೆ, ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿ ಆಯ್ಕೆಯಾದ ಅಭ್ಯರ್ಥಿಗಳನ್ನು ಜನವರಿ-2024 ರ ಮಾಹೆಯಲ್ಲಿ ವಿಭಾಗ /ಘಟಕಗಳಿಗೆ ಹಂಚಿಕೆ ಮಾಡಲಾಯಿತು.
  • 2000 ಚಾಲಕ-ಕಂ-ನಿರ್ವಾಹಕ ಹುದ್ದೆಗಳಿಗೆ ಒಟ್ಟು 25,494 ಅರ್ಜಿಗಳು ಸ್ವೀಕೃತಗೊಂಡಿತ್ತು. ದಾಖಲಾತಿ ಪರಿಶೀಲನೆಗೆ ಹಾಜರಾದ ಅಭ್ಯರ್ಥಿಗಳ ಪೈಕಿ 13,954 ಅಭ್ಯರ್ಥಿಗಳು ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಅರ್ಹರಾಗಿದ್ದರು.
  • ಅಭ್ಯರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಹುಮ್ನಾಬಾದ್ ಚಾಲನಾ ತರಬೇತಿ ಕೇಂದ್ರ ಮತ್ತು ಕರಾರಸಾ ನಿಗಮದ ಹಾಸನ ಚಾಲನಾ ತರಬೇತಿ ಕೇಂದ್ರಗಳಲ್ಲಿ ಪರೀಕ್ಷೆ ಪಡೆಯುಲು ಅವಕಾಶ ಕಲ್ಪಿಸಲಾಗಿತ್ತು. ಅದರಂತೆ 2,672 ಅಭ್ಯರ್ಥಿಗಳು ಹುಮ್ನಾಬಾದ್ ಹಾಗೂ 11,282 ಅಭ್ಯರ್ಥಿಗಳು ಹಾಸನ ತರಬೇತಿ ಕೇಂದ್ರಗಳಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದರು.
  • ಚಾಲನಾ ವೃತ್ತಿ ಪರೀಕ್ಷೆಯು ಸಂಪೂರ್ಣ ಗಣಕೀಕೃತವಾಗಿದ್ದು, ಮೊದಲ ಬಾರಿಗೆ ಚಾಲನಾ ವೃತ್ತಿಪರೀಕ್ಷೆಗೆ ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು.
  • ಚಾಲನಾ ವೃತ್ತಿ ಪರೀಕ್ಷೆಯಲ್ಲಿ ಅರ್ಹಗೊಂಡ ಅಭ್ಯರ್ಥಿಗಳಲ್ಲಿ ಮೆರಿಟ್/ಮೀಸಲಾತಿ ಅನುಸಾರ 2000 ಹುದ್ದೆಗಳಿಗೆ ದಿನಾಂಕ:05-06-2025 ರಂದು ಸಂಭವನೀಯ ಆಯ್ಕೆಪಟ್ಟಿ ಪ್ರಕಟಿಸಿ, ಅಭ್ಯರ್ಥಿಗಳಿಂದ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿತ್ತು.
  • ದಿನಾಂಕ:12-06-25 ರಂದು ಅಂತಿಮ ಆಯ್ಕೆ ಪಟ್ಟಿಯನ್ನು ನಿಗಮದ ವೆಬ್-ಸೈಟ್ ನಲ್ಲಿ ಪ್ರಕಟಿಸಲಾಯಿತು
  • ಈ ಸಂಬಂಧ ದಿನಾಂಕ: 16-06-2025 ರಿಂದ 19-06-2025 ರವರೆಗೆ ಗಣಕೀಕೃತ ಕೌನ್ಸಿಲಿಂಗ್ ಪ್ರಕ್ರಿಯೆಯನ್ನು ನಡೆಸಲಾಗುತ್ತಿದ್ದು, ವಿಭಾಗ ಆಯ್ಕೆ ಮಾಡಿಕೊಂಡ ಅಭ್ಯರ್ಥಿಗಳು ದಿನಾಂಕ: 05-07-2025 ರೊಳಗಾಗಿ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ಕಲ್ಪಿಸಲಾಗಿದೆ.
  • ದಿನಾಂಕ: 16-06-2025 ರಂದು ಕೌನ್ಸಿಲಿಂಗ್ ನಲ್ಲಿ ವಿಭಾಗ ಆಯ್ಕೆಮಾಡಿಕೊಂಡ ಅಭ್ಯರ್ಥಿಗಳ ಪೈಕಿ 50/50 ಅಂಕಗಳಿಸಿರುವ ಅಭ್ಯರ್ಥಿಗಳಿಗೆ ದಿನಾಂಕ: 17-06-2025 ರಂದು ಕೇಂದ್ರ ಕಚೇರಿಯಲ್ಲಿ ನಿಯೋಜನಾ ಆದೇಶ ವಿತರಣೆ ಮಾಡಲಾಯಿತು.
  • ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ಕಳೆದ ಒಂದು ವರ್ಷದ ಅವಧಿಯಲ್ಲಿ 209 ಮೃತಾವಲಂಬಿತರಿಗೆ ನೌಕರಿ ನೀಡಲಾಗಿದೆ.
  • ನಾಲ್ಕು ಸಾರಿಗೆ ನಿಗಮದಲ್ಲಿ 1,000 ಮೃತಾವಲಂಬಿತರಿಗೆ ನೇಮಕಾತಿ ನೀಡಲಾಗಿದೆ. ಒಟ್ಟಾರೆ ನಿಗಮದಲ್ಲಿ ಕಳೆದ ಒಂದೂವರೆ ವರ್ಷದಲ್ಲಿ 2500 ಹುದ್ದೆಗಳನ್ನು ಭರ್ತಿ ಮಾಡಲಾಗಿದೆ.
WhatsApp Image 2025 06 17 at 2.43.00 PM
WhatsApp Image 2025 06 17 at 2.42.58 PM 1
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X