ವಿಜಯಪುರ | ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ: ಬೃಹತ್ ಪ್ರತಿಭಟನೆ ಎಚ್ಚರಿಕೆ

Date:

Advertisements

ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ರಸ್ತೆ ಅಗಲೀಕರಣ ಮಾಡದೆ ಟೋಲ್ ಸುಂಕ ವಸೂಲಿ ಮಾಡುತ್ತಿರುವುದು ಕಾನೂನು ಬಾಹಿರವಾಗಿದೆ. ಕೂಡಲೇ ಈ ಸಮಸ್ಯೆಯನ್ನು ಬಗೆಹರಿಸಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ, ದಲಿತಪರ, ಪ್ರಗತಿಪರ, ರೈತರಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಯುವಜನ ಸೇನೆ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಕರ್ನಾಟಕ ರಸ್ತೆ ಅಭಿವೃದ್ಧಿ ಆರಕ್ಷಕರಿಗೆ ಎಚ್ಚರಿಕೆ ಪತ್ರ ಬರೆದಿದ್ದಾರೆ.

ಹುನಗುಂದದಿಂದ ತಂಗಡಗಿ ಮಾರ್ಗವಾಗಿ ತಾಳಿಕೋಟಿಯವರೆಗೆ ನಿರ್ಮಿಸಿರುವ ರಾಜ್ಯ ಹೆದ್ದಾರಿ ಕಾಮಗಾರಿಯನ್ನು ಕಾಗದದಲ್ಲಿ ಪೂರ್ಣಗೊಳಿಸಲಾಗಿದೆ. ಈ ರಸ್ತೆಯು ಹಾಯ್ದು ಹೋಗುವ ತಂಗಡಗಿ ಗ್ರಾಮದಲ್ಲಿರುವ ಪೆಟ್ರೋಲ್ ಬಂಕ್ ತಿರುವಿಗೆ ಹೊಂದಿಕೊಂಡು ಅಕ್ಕಪಕ್ಕದಲ್ಲಿ ಬಹಳ ವರ್ಷಗಳಿಂದ ಮನೆಗಳನ್ನು ಕಟ್ಟಿಸಿಕೊಂಡು ವಾಸವಾಗಿದ್ದಾರೆ.

ಮನೆಗಳು ರಾಜ್ಯ ಹೆದ್ದಾರಿಯ ವ್ಯಾಪ್ತಿಯಲ್ಲಿ ಬರುತ್ತವೆ. ಮನೆಗಳಿಗೆ ಈಗಾಗಲೇ ಸರ್ಕಾರದಿಂದ ಪರಿಹಾರವನ್ನು ಕೂಡ ಒದಗಿಸಲಾಗಿದೆ. ಹೀಗಿದ್ದರೂ ರಸ್ತೆಯಲ್ಲಿರುವ ಮನೆಗಳನ್ನು ತೆರವುಗೊಳಿಸದೇ ಜನರ ಜೀವನದ ಜೊತೆ ಕೆಲವು ಪ್ರಭಾವಿಗಳು ಆಟವಾಡುತ್ತಿದ್ದಾರೆ. ಈ ಭಾಗದಲ್ಲಿ ಡಾಂಬರನ್ನೂ ಕೂಡಾ ಹಾಕದೆ ಹಾಗೆಯೇ ಬಿಡಲಾಗಿದೆ. ಈಗ ನಿರ್ಮಿಸಿರುವ ರಸ್ತೆಯ ಎರಡು ಬದಿಯ ಚರಂಡಿಯನ್ನು ಅವೈಜ್ಞಾನಿಕವಾಗಿ ನಿರ್ಮಿಸಿದ್ದು, ಅವುಗಳು ಮಳೆ ನೀರಿನಿಂದ ತುಂಬಿಕೊಂಡು ಕೊಳಚೆ ನೀರು ಊರಿನ ಒಳಗೆ ಹರಿಯುತ್ತಿದೆ. ಇದರಿಂದ ಗಲೀಜು ವಾತಾವರಣ ನಿರ್ಮಾಣವಾಗಿ ಸಾಂಕ್ರಾಮಿಕ ರೋಗಗಳಿಗೆ ಕಾರಣವಾಗಿವೆ. ಈ ಬಗ್ಗೆ 4 ವರ್ಷಗಳ ಹಿಂದೆಯೇ ಕರ್ನಾಟಕ ರಸ್ತೆ ಅಭಿವೃದ್ಧಿ ಕೇಂದ್ರ ಕಚೇರಿಗೆ ಮನವಿ ಸಲ್ಲಿಸಿದರೂ, ಈವರೆಗೂ ರಸ್ತೆ ಮೇಲಿರುವ ಮನೆಗಳನ್ನು ತೆರವುಗೊಳಿಸಿ ರಸ್ತೆ ನಿರ್ಮಿಸಿಲ್ಲ.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಬಹು ಉಪಯೋಗಿ ಹಲಸಿಗೆ ಬಹು ಬೇಡಿಕೆ

ಸಂಘಟನೆ ವತಿಯಿಂದ ಅಧಿಕಾರಿಗಳಿಗೆ 15 ದಿನಗಳ ಗಡುವು ನೀಡುತ್ತಿದ್ದು, ಕೂಡಲೇ ಪರಿಹಾರ ಪಡೆದ ಮನೆಗಳನ್ನು ತೆರವುಗೊಳಿಸಿ. ಎರಡು ಬದಿಯ ಚರಂಡಿಗಳನ್ನು ಪೂರ್ಣಗೊಳಿಸಬೇಕು. ಇಲ್ಲವಾದಲ್ಲಿ ಸಮಸ್ಯೆ ಇರುವ ಜಾಗದಲ್ಲಿಯೇ ಗ್ರಾಮಸ್ಥರು ಹಾಗೂ ವಿವಿಧ ಕನ್ನಡಪರ, ದಲಿತಪರ, ಪ್ರಗತಿಪರ, ರೈತರಪರ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸುವುದಾಗಿ ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

Download Eedina App Android / iOS

X