ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಮಗನ ಬಂಧನ

Date:

Advertisements
  • ತಮ್ಮನ ವಿರುದ್ಧ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದ ಅಣ್ಣ ಸಜಿತ್
  • ನಾಲ್ಕು ದಿನದ ನಂತರ ಪರಾರಿಯಾಗಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹೆತ್ತ ತಂದೆ-ತಾಯಿಗೆ ಕಬ್ಬಿಣದ ರಾಡ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿ ಪರಾರಿಯಾಗಿದ್ದ ಮಗನನ್ನು ಕೊಡಿಗೆಹಳ್ಳಿ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

ಶರತ್(25) ಬಂಧಿತ ಆರೋಪಿ. ಭಾಸ್ಕರ್(61) ಹಾಗೂ ಶಾಂತಾ (60) ದಂಪತಿಯನ್ನು ಸೋಮವಾರ ರಾತ್ರಿ ಹತ್ಯೆ ಮಾಡಿ ಆರೋಪಿ ಮಡಿಕೇರಿಯಲ್ಲಿ ತಲೆಮರೆಸಿಕೊಂಡಿದ್ದನು.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದ ಪೊಲೀಸರು ಪರಾರಿಯಾಗಿದ್ದ ಆರೋಪಿಯನ್ನು ನಾಲ್ಕು ದಿನದ ನಂತರ ಬಂಧಿಸಿದ್ದಾರೆ. ಆರೋಪಿಯನ್ನು ನಗರಕ್ಕೆ ಕರೆತಂದು ವಿಚಾರಣೆ ನಡೆಸುತ್ತಿದ್ದಾರೆ. ತನಿಖೆ ಬಳಿಕ ಕೊಲೆಗೆ ನಿಜವಾದ ಕಾರಣವೇನು ಎಂಬುದು ತಿಳಿಯಲಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

Advertisements

ಪ್ರಕರಣದ ಹಿನ್ನೆಲೆ

ಭಾಸ್ಕರ್ ಹಾಗೂ ಶಾಂತಾ ದಂಪತಿ ಇವರು ಮೂಲತಃ ಮಂಗಳೂರಿನವರು. ಕಳೆದ 13 ವರ್ಷದಿಂದ ಬಳ್ಳಾರಿ ರಸ್ತೆಯ ಬ್ಯಾಟರಾಯನಪುರದಲ್ಲಿ ತಮ್ಮ ಸ್ವಂತ ಮನೆಯಲ್ಲಿ ನೆಲೆಸಿದ್ದರು.

ಮೃತ ಭಾಸ್ಕರ್ ಕೊಡಿಗೆಹಳ್ಳಿ ಸಮೀಪ ತಮ್ಮ ಸ್ನೇಹಿತರ ಕ್ಯಾಂಟೀನ್‌ನಲ್ಲಿ ಕ್ಯಾಶಿಯರ್ ಆಗಿದ್ದರು. ಮೃತ ಶಾಂತಾ ಕೇಂದ್ರ ಸರ್ಕಾರ ಸ್ವಾಮ್ಯದ ಕಂಪನಿಯಲ್ಲಿ ಉದ್ಯೋಗಿಯಾಗಿ ನಿವೃತ್ತಿ ಹೊಂದಿದ್ದರು. ದಂಪತಿಗೆ ಇಬ್ಬರು ಮಕ್ಕಳಿದ್ದರು. ಮೊದಲನೇ ಮಗ ಸಜಿತ್ ವಿವಾಹವಾಗಿ ಕೊಡಿಗೆಹಳ್ಳಿಯಲ್ಲಿ ಪ್ರತ್ಯೇಕವಾಗಿ ನೆಲೆಸಿದ್ದನು. ಎರಡನೆಯ ಮಗ ಆರೋಪಿ ಶರತ್ ಮನೆಯ ಮಹಡಿ ಮೇಲಿನ ಕೊಠಡಿಯಲ್ಲಿ ನೆಲೆಸಿದ್ದನು.

ಆರೋಪಿ ಶರತ್‌ನಿಗೆ ಕುಡಿಯುವ ಚಟವಿತ್ತು. ಆಗಾಗ ಸೈಕೋ ರೀತಿ ವರ್ತಿಸುತ್ತಿದ್ದನು. ನಿತ್ಯ ಕುಡಿದು ಬಂದು ತಂದೆ-ತಾಯಿ ಜತೆಗೆ ಜಗಳವಾಡುತ್ತಿದ್ದನು. ಜುಲೈ 17ರಂದು ಸಾಯಂಕಾಲ ಕುಡಿದು ಬಂದು ಆರೋಪಿ ತಂದೆ-ತಾಯಿ ಜತೆಗೆ ಜಗಳ ಆರಂಭಿಸಿದ್ದಾನೆ. ಈ ವೇಳೆ, ರಾಡ್‌ನಿಂದ ಇಬ್ಬರ ಮೇಲೂ ಹಲ್ಲೆ ಮಾಡಿ, ಹತ್ಯೆ ಮಾಡಿದ್ದಾನೆ. ಬಳಿಕ, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹೆತ್ತ ತಂದೆ-ತಾಯಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಮಗ

ಜುಲೈ 18ರ ಬೆಳಗ್ಗೆ ಕೆಲಸದ ನಿಮಿತ್ತ ಭಾಸ್ಕರ್‌ಗೆ ಕ್ಯಾಂಟೀನ್ ಸಿಬ್ಬಂದಿ ಕರೆ ಮಾಡಿದ್ದಾರೆ. ಕರೆ ಸ್ವೀಕರಿಸದೆ ಇದ್ದಾಗ ಕ್ಯಾಂಟೀನ್ ಸಿಬ್ಬಂದಿ ಮೃತರ ಹಿರಿಯ ಪುತ್ರ ಸಜಿತ್‌ಗೆ ಕರೆ ಮಾಡಿ ವಿಚಾರಿಸಿದ್ದಾರೆ. ಈ ವೇಳೆ, ಸಜಿತ್ ತನ್ನ ತಾಯಿಗೆ ಕರೆ ಮಾಡಿದ್ದಾರೆ. ಯಾರೂ ಕರೆ ಸ್ವೀಕರಿಸದ ಕಾರಣ ಪಕ್ಕದ ಮನೆಯವರಿಗೆ ಕರೆ ಮಾಡಿ ಹೇಳಿದ್ದಾರೆ. ಈ ವೇಳೆ ದಂಪತಿ ಇಬ್ಬರು ಕೊಲೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ತಂದೆ-ತಾಯಿಯನ್ನು ಶರತ್‌ ಹತ್ಯೆ ಮಾಡಿದ್ದಾನೆ ಎಂದು ಆರೋಪಿಸಿ ತಮ್ಮನ ವಿರುದ್ಧ ಅಣ್ಣ ಸಜಿತ್ ಕೊಡಿಗೆಹಳ್ಳಿ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

Download Eedina App Android / iOS

X