ವಕೀಲನ ಮೇಲೆ ಹತ್ತಕ್ಕೂ ಹೆಚ್ಚು ಯುವಕರು ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಗರದಲ್ಲಿ ನಡೆದಿದೆ.
ರಸ್ತೆ ಚರಂಡಿ ಅಗಲೀಕರಣ ವಿಚಾರದಲ್ಲಿ ಏಕಾಏಕಿ ಯುವಕರಿಂದ ದಾಳಿ ಮಾಡಲಾಗಿದೆ ಎನ್ನಲಾಗಿದೆ.
ವಕೀಲ ಚಂದನ ಗಿಡ್ಡನ್ನವರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು ರಾಜಾರೋಷವಾಗಿ ಕೈಯಲ್ಲಿ ಬಡಿಗೆಗಳನ್ನು ಹಿಡಿದುಕೊಂಡು ಹಲ್ಲೆ ಮಾಡಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.
ರಮೇಶ್ ಜಾರಕಿಹೊಳಿ ಬೆಂಬಲಿಗರು ಹಲ್ಲೆ ಮಾಡಿದ್ದಾರೆಂದು ವಕೀಲ ಚಂದನ ಗಿಡ್ಡನ್ನವರ ಪೊಲೀಸ್ ಠಾಣೆಗೆ ದೂರು ನೀಡಿದ್ದಾನೆ. ಮಾರಣಾಂತಿಕ ಹಲ್ಲೆಯಾದ್ರೂ ಯಾವೊಬ್ಬ ಪೊಲೀಸರು ಸ್ಥಳಕ್ಕೆ ಬಂದಿಲ್ಲ ಎಂದು ಹಲ್ಲೆಗೋಳಗಾದ ವಕೀಲ ಆರೋಪಿಸಿದ್ದಾನೆ. ಗೋಕಾಕ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.