ಕಾಫಿ ತೋಟಕ್ಕೆ ಕಾಡಾನೆ ನುಗ್ಗಿ ಬೆಳೆಗಳನ್ನು ನಾಶ ಮಾಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕಿನ ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವನಗೂಲ್ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಚಾರ್ ಪಾಲ್ ವ್ಯಾಪ್ತಿಯಲ್ಲಿ ಕಾಡಾನೆಯು, ಕಾಫಿ ತೋಟಗಳಿಗೆ ನುಗ್ಗಿ, ಬಾಳೆ, ಕಾಫಿ, ಕಾಳುಮೆಣಸು ಬೆಳೆಗಳನ್ನು ನಾಶ ಮಾಡಿವೆ. ತರುವೆ, ತ್ರಿಪುರ, ಬಣಕಲ್ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗದ್ದೆ ನಾಟಿ ಪ್ರಾರಂಭವಾಗಲಿದ್ದು, ಇನ್ನಷ್ಟು ಬೆಳೆ ಹಾನಿಯಾಗುತ್ತದೆ ಎಂದು ರೈತರಲ್ಲಿ ಆತಂಕ ಹೆಚ್ಚಾಗುತ್ತಿದೆ. ಕಾಡಾನೆಗಳು ಮನೆಯ ಸಮೀಪ ಬರುತ್ತಿರುವುದರಿಂದ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಧಾರಾಕಾರ ಮಳೆ: ಮನೆ ಮೇಲೆ ಮರ ಬಿದ್ದು ಹಾನಿ; ಮಹಿಳೆಗೆ ಗಾಯ
ಈ ಕುರಿತು ಸ್ಥಳಕ್ಕೆ ಅರಣ್ಯ ಅಧಿಕಾರಿಗಳು ಕಾಡಾನೆಯನ್ನು ಅರಣ್ಯಕ್ಕೆ ಓಡಿಸುವ ಯತ್ನ ನಡೆಸುತ್ತಿದ್ದು, ಬೆಳೆಹಾನಿಯನ್ನು ಪರಿಶೀಲಿಸಿದರು. ಕೂಡಲೇ ಕಾಡಾನೆಗಳನ್ನು ಹಿಡಿದು ಸ್ಥಳಾಂತರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ
