ಕೊಪ್ಪಳ ಜಿಲ್ಲಾಧಿಕಾರಿ ಮತ್ತು ಜಿಲ್ಲಾಪಂಚಾಯತ್ ಕಾರ್ಯನಿರ್ವಹಣಾ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಮಹತ್ವದ ಬೆಳವಣಿಗೆಯಲ್ಲಿ ರಾಜ್ಯ ಸರ್ಕಾರವು ಆಡಳಿತಾತ್ಮಕ ಬದಲಾವಣೆ ಮಾಡಿದ್ದು, ಮಂಗಳವಾರ (ಜೂ.17) ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿದ್ದು, ಅದರಲ್ಲಿ ಜಿಲ್ಲಾಧಿಕಾರಿಗಳು ಸೇರಿದ್ದಾರೆ.
ಈ ಹಿಂದೆ ದಾವಣಗೆರೆ ಜಿಲ್ಲಾ ಪಂಚಾಯತ್ ಸಿಇಓ ಆಗಿದ್ದ ಸುರೇಶ್ ಬಿ. ಹಿಟ್ನಾಳ್ ಅವರನ್ನು ಕೊಪ್ಪಳ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ. ಕೊಪ್ಪಳ ನೂತನ ಜಿಲ್ಲಾ ಪಂಚಾಯತ್ ಸಿಇಒ ಆಗಿ ವರ್ಣಿತ್ ನೇಗಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಟಿ.ಮಹಾಂತೇಶ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲಾಧಿಕಾರಿಯಾಗಿದ್ದ ನಳಿನಿ ಅತುಲ್ ಅವರನ್ನು ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ಕಾರ್ಯದರ್ಶಿ ಹಾಗೂ ಯೋಜನೆ, ಕಾರ್ಯಕ್ರಮ ನಿರ್ವಹಣೆ ಮತ್ತು ಸಾಂಖ್ಯಿಕ ಇಲಾಖೆಯ ಜಂಟಿ ಕಾರ್ಯದರ್ಶಿಯಾಗಿ ನೇಮಕ ಮಾಡಿ ವರ್ಗಾವಣೆ ಮಾಡಲಾಗಿದೆ.
ಕೊಪ್ಪಳ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿದ್ದ ರಾಹುಲ್ ರತ್ನಮ್ ಪಾಂಡೆ ಅವರನ್ನು ಬೆಂಗಳೂರಿನ ಸೆಂಟರ್ ಫಾರ್ ಸ್ಮಾರ್ಟ್ ಗವರ್ನೆನ್ಸ್ ಕಾರ್ಯಕಾರಿ ನಿರ್ದೇಶಕರನ್ನಾಗಿ ವರ್ಗಾಯಿಸಲಾಗಿದೆ.

