ರಫ್ತು ಬೆಳವಣಿಗೆಗೆ ಪೂರಕವಾದ ಕೈಗಾರಿಕಾ ನೀತಿ ರೂಪಿಸಲು ಕ್ರಮ: ಸಿಎಂ ಸಿದ್ದರಾಮಯ್ಯ ಭರವಸೆ

Date:

Advertisements
  • ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ
  • ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ

ಹೊಸ ಕೈಗಾರಿಕಾ ನೀತಿಯನ್ನು ಸರ್ಕಾರ ಘೋಷಣೆ ಮಾಡಿದಾಗ ಕೈಗಾರಿಕೋದ್ಯಮಿಗಳು ಬೆಂಬಲಿಸಿ ಸ್ವಾಗತಿಸಿದರು. ಈಗಲೂ ಎಲ್ಲರೊಂದಿಗೆ ಚರ್ಚೆ ಮಾಡಿ ರಫ್ತು ಬೆಳವಣಿಗೆಗೆ ಪೂರಕವಾದ ಕೈಗಾರಿಕಾ ನೀತಿ ರೂಪಿಸಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ರಾಜ್ಯ ಶ್ರೇಷ್ಠ ರಫ್ತು ಪ್ರಶಸ್ತಿಗಳ ಪ್ರದಾನ ಸಮಾರಂಭ ಉದ್ಘಾಟಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು.

ಮಹಾರಾಷ್ಟ್ರ ಮತ್ತು ತಮಿಳುನಾಡು ಒಂದು ಮತ್ತು ಎರಡನೇ ಸ್ಥಾನದಲ್ಲಿವೆ. ಕರ್ನಾಟಕ ರಫ್ತಿನಲ್ಲಿ ನಂಬರ್ ಒನ್ ಸ್ಥಾನಕ್ಕೆ ಏರಬೇಕು. ಕರ್ನಾಟಕ ರಫ್ತು ಮಾಡುವುದರಲ್ಲಿ ಮೊದಲಿನಿಂದಲೂ ಮುಂಚೂಣಿಯಲ್ಲಿದೆ. ಕೈಗಾರಿಕೆಗಳ ಅಭಿವೃದ್ಧಿ ಆಗಬೇಕೆಂದು ಕೌಶಲ್ಯ ತರಬೇತಿಯುಳ್ಳ ಕಾರ್ಮಿಕರಿದ್ದರೆ ಕೈಗಾರಿಕಾ ಬೆಳವಣಿಗೆಗೆ ಅನುಕೂಲ ಆಗುತ್ತದೆ ಎಂಬ ದೃಷ್ಟಿಯಿಂದ ಕೌಶಲ್ಯಾಭಿವೃದ್ಧಿ ಇಲಾಖೆ ಪ್ರಾರಂಭಿಸಲಾಗಿತ್ತು. ಈಗ ಅದಕ್ಕೆ ಶಕ್ತಿ ತುಂಬುವ ಕೆಲಸ ಮಾಡಲಾಗುವುದು ಎಂದು ಹೇಳಿದರು.

Advertisements

ಎಂ ಬಿ ಪಾಟೀಲ್ ಅವರು ಕೈಗಾರಿಕಾ ಇಲಾಖೆಯ ನೇತೃತ್ವವನ್ನು ವಹಿಸಿದ್ದು, ಕರ್ನಾಟಕದಲ್ಲಿ ಕೈಗಾರಿಕಾ ಬೆಳವಣಿಗೆ ಆಗಬೇಕು ಎನ್ನುವ ಆಶಯ ಹೊಂದಿದ್ದು, ಕರ್ನಾಟಕ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ಉದ್ಯಮಿಗಳಿಗೆ ನೀಡಲಿದೆ ಎಂದು ಭರವಸೆ ನೀಡಿದರು.

ನಿರುದ್ಯೋಗ ಸಮಸ್ಯೆ ನಿವಾರಣೆಗೆ ಕ್ರಮ

ಸರ್ಕಾರ 5 ಗ್ಯಾರಂಟಿಗಳನ್ನು ಘೋಷಿಸಿದ್ದು, ಯುವನಿಧಿ ಅಡಿಯಲ್ಲಿ 2022-23 ರಲ್ಲಿ ಪದವೀಧರರಾಗಿ ನಿರುದ್ಯೋಗಿಗಳಾಗಿರುವವರಿಗೆ 3,000 ರೂ.ಗಳ ನಿರುದ್ಯೋಗ ಭತ್ಯೆ ನೀಡಲಾಗುವುದು. ಡಿಪ್ಲೊಮಾ ಹೊಂದಿದವರಿಗೂ 1,500 ರೂ.ಗಳ ಭತ್ಯೆ ನೀಡಲಾಗುವುದು. ಬಹುತೇಕ ಡಿಸೆಂಬರ್ ತಿಂಗಳಿನಲ್ಲಿ ಪ್ರಾರಂಭವಾಗಲಿದೆ. ಕೌಶಲ್ಯ ಇಲಾಖೆಯಿಂದ ಕೈಗಾರಿಕೆಗಳಿಗೆ ಅಗತ್ಯವಿರುವ ಉದ್ಯೋಗಿಗಳನ್ನು ತಯಾರು ಮಾಡುವ ಸಲುವಾಗಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತಿದೆ. ಮಾರುಕಟ್ಟೆಗೆ ಸೂಕ್ತವಾಗಿರುವ ಉದ್ಯೋಗಿಗಳನ್ನು ತಯಾರು ಮಾಡಿದರೆ ನಿರುದ್ಯೋಗ ಸಮಸ್ಯೆ ಬಗೆಹರಿಯಲಿದೆ ಎಂದರು.

ಕೈಗಾರಿಕೆ ಬೆಳೆದರೆ ನಿರುದ್ಯೋಗ ಸಮಸ್ಯೆ ನಿವಾರಣೆಯಾಗಿ ದೇಶದ ಆರ್ಥಿಕತೆ ಬೆಳೆಯಲು ನೆರವಾಗಲಿದೆ. ಜಿಡಿಪಿ ಬೆಳೆದು ರಾಜ್ಯ ಬೆಳೆಯಲು ಸಾಧ್ಯವಾಗಿ ರಾಷ್ಟ್ರದ ಜಿಡಿಪಿಗೆ ದೊಡ್ಡ ಕೊಡುಗೆಯನ್ನು ರಾಜ್ಯದಿಂದ ಕೇಂದ್ರಕ್ಕೆ ಕೊಡಲು ಸಾಧ್ಯವಾಗುತ್ತದೆ. ಇವೆಲ್ಲ ಒಂದಕ್ಕೊಂದು ಸಂಬಂಧ ಹೊಂದಿದೆ. ಕಾನೂನು ಸುವ್ಯವಸ್ಥೆ ಉತ್ತಮವಾಗಿದೆ ಹೂಡಿಕೆಗಳು ಬರುತ್ತವೆ. ಹೂಡಿಕೆಗಳು ಬಂದಲ್ಲಿ ಕೈಗಾರಿಕೆಗಳು ಬಂದು ನಿರುದ್ಯೋಗ ನಿವಾರಣೆಯಾಗುತ್ತದೆ. ಕರ್ನಾಟಕದಲ್ಲಿ ಉತ್ತಮ ಕಾನೂನು ಸುವ್ಯವಸ್ಥೆ ಕಲ್ಪಿಸಲಾಗುವುದು. ಮಾರುಕಟ್ಟೆಯಲ್ಲಿ ಬೇಡಿಕೆಯಲ್ಲಿರುವ ಉದ್ಯೋಗಿಗಳನ್ನು ಸೃಷ್ಟಿ ಮಾಡುವ ಕೆಲಸವನ್ನು ಸರ್ಕಾರ ಮಾಡುತ್ತದೆ. ಶ್ರೇಷ್ಠ ರಫ್ತು ಮಾಡಿ ರಾಜ್ಯಕ್ಕೆ ಕೀರ್ತಿ ತಂದಿರುವ ರಫ್ತುದಾರರನ್ನು ಅಭಿನಂದಿಸಿದರು.

ಈ ಸುದ್ದಿ ಓದಿದ್ದೀರಾ? ಹೇಳಿಕೆ ವಾಪಸ್ ಪಡೆಯುವ ಜಾಯಮಾನ ನನ್ನದಲ್ಲ: ಬಿ ಕೆ ಹರಿಪ್ರಸಾದ್

ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ

ಇಂದು 68 ಉದ್ದಿಮೆಗಳಿಗೆ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗಿದೆ. ರಫ್ತಿನಲ್ಲಿ ಸಾಧನೆ ಮಾಡಿರುವ ಉದ್ದಿಮೆಗಳಿಗೆ 1992-93 ರಿಂದ ಶ್ರೇಷ್ಠ ರಫ್ತು ಪ್ರಶಸ್ತಿಗಳನ್ನು ನೀಡುವ ಪರಿಪಾಠ ಪ್ರಾರಂಭಿಸಲಾಗಿದೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದ ಉದ್ದಿಮೆಗಳನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿ ವಿಜೇತರು ಇತರ ಉದ್ದಿಮೆದಾರರಿಗೆ ಮಾದರಿ ಹಾಗೂ ಸ್ಪೂರ್ತಿಯಾಗಿದ್ದಾರೆ. ರಾಜ್ಯದಲ್ಲಿ ಉದ್ದಿಮೆಗಳ ಪ್ರಾರಂಭಕ್ಕೆ ಹಾಗೂ ಕೈಗಾರಿಕೆಗಳಿಗೆ ಪ್ರೋತ್ಸಾಹದಾಯಕ ವಾತಾವರಣ ಇದೆ. ಕರ್ನಾಟಕದಲ್ಲಿ ಸುಮಾರು 80ರ ದಶಕದಲ್ಲಿ ಕೈಗಾರಿಕಾ ನೀತಿ ರೂಪಿಸುವತ್ತ ಹೆಜ್ಜೆ ಇಡಲಾಗಿತ್ತು ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

Download Eedina App Android / iOS

X