ವಿರೋಧ ಪಕ್ಷದವರಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡಿದ್ದು ಇದೇ ಮೊದಲು: ಸಿಎಂ ಸಿದ್ದರಾಮಯ್ಯ

Date:

Advertisements

ತಮ್ಮ 40 ವರ್ಷಗಳ ರಾಜಕೀಯ ಇತಿಹಾಸದಲ್ಲಿ ಮತ್ತು 14 ಬಾರಿ ಬಜೆಟ್ ಮಂಡಿಸಿದ ಸಂದರ್ಭದಲ್ಲಿ ಇದೇ ಮೊದಲ ಬಾರಿ ವಿರೋಧ ಪಕ್ಷದ ಉಪಸ್ಥಿತಿಯಿಲ್ಲದೇ ಬಜೆಟ್ ಚರ್ಚೆಗೆ ಉತ್ತರ ನೀಡುವಂತಹ ಪರಿಸ್ಥಿತಿ ಒದಗಿಬಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ವಿಧಾನಸೌಧದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಮಂಡಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ ಬಗ್ಗೆ ಚರ್ಚಿಸುವುದು ಬಿಟ್ಟು, ಹೊರಗೆ ಹೋರಾಟ ಮಾಡುವುದರಿಂದ ಪ್ರಯೋಜನವಿಲ್ಲ ಎಂದು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ನಡೆಯನ್ನು ಟೀಕಿಸಿದರು.

ವಿರೋಧ ಪಕ್ಷದವರು ಚರ್ಚೆಗಳಲ್ಲಿ ಭಾಗವಹಿಸಲಿ ಎಂದು ಮೂರು ವಾರಗಳ ಕಾಲ ಅಧಿವೇಶನ ನಡೆಸಲಾಯಿತು. ಆದರೆ, ವಿಧಾನಸಭೆಗೆ ಆಗಮಿಸದೆ ಗದ್ದಲದಲ್ಲೇ ಸಮಯ ವ್ಯರ್ಥಗೊಳಿಸಿದರು. ಅವರ ನಡವಳಿಕೆ ಸರಿಯಿರದಿದ್ದ ಕಾರಣ, ಸಭಾಧ್ಯಕ್ಷರು ಕ್ರಮ ತೆಗೆದುಕೊಂಡಿದ್ದಾರೆ. ಸಭಾಧ್ಯಕ್ಷರ ಕ್ರಮಕ್ಕೂ, ನಮಗೂ ಯಾವುದೇ ಸಂಬಂಧವಿಲ್ಲ” ಎಂದು ಸ್ಪಷ್ಟಪಡಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮಣಿಪುರದ ಹಿಂಸಾಚಾರಕ್ಕೆ ಹಿಂದೆ ಆಳಿದ ಪಕ್ಷಗಳೇ ಕಾರಣ: ಶೋಭಾ ಕರಂದ್ಲಾಜೆ ಆರೋಪ

ಕಾಂಗ್ರೆಸ್ ಕೈ ಕಟ್ಟಿಹಾಕಿತ್ತು ಎನ್ನುವುದು ಸುಳ್ಳು

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ನೈಸ್ ಹಗರಣದ ಬಗ್ಗೆ ಪ್ರಸ್ತಾಪಿಸಿರುವ ಬಗ್ಗೆ ಉತ್ತರಿಸಿ, ಕಾಂಗ್ರೆಸ್ ಸರ್ಕಾರದ ನಂತರ ಮೈತ್ರಿ ಸರ್ಕಾರ ಬಂದ ಸಂದರ್ಭದಲ್ಲಿಯೇ ಕ್ರಮ ತೆಗೆದುಕೊಳ್ಳಬಹುದಿತ್ತು. ತನಿಖೆ ನಡೆಸಲು ಕಾಂಗ್ರೆಸ್ ನವರು ಕೈಕಟ್ಟಿದ್ದರು ಎನ್ನುವುದು ಸುಳ್ಳು. ಸಾಲಮನ್ನಾ ಸೇರಿದಂತೆ ಇತರೆ ಕಾರ್ಯಕ್ರಮಗಳಿಗೆ ಕಾಂಗ್ರೆಸ್ ಬೆಂಬಲ ನೀಡಲಿಲ್ಲವೇ, ಕಾಂಗ್ರಸ್ ಕೈಕಟ್ಟಿ ಹಾಕಿತ್ತು ಎಂದು ರಾಜೀನಾಮೆ ನೀಡಿದರೆ? ತಮ್ಮ ಸ್ವಯಂತಪ್ಪಿನಿಂದಲೇ ಅವರು ಸರ್ಕಾರ ಕಳೆದುಕೊಳ್ಳುವಂತಾಯಿತು ಎಂದು ತಿಳಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

2029ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ಪ್ರಧಾನಿ ಅಭ್ಯರ್ಥಿ: ತೇಜಸ್ವಿ ಯಾದವ್

2029ರ ಲೋಕಸಭೆ ಚುನಾವಣೆಯಲ್ಲಿ ಸದ್ಯ ಲೋಕಸಭೆ ವಿಪಕ್ಷ ನಾಯಕರಾಗಿರುವ ರಾಹುಲ್ ಗಾಂಧಿ...

ಸಾರ್ವಜನಿಕ ಸಭೆಯಲ್ಲಿ ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಬುಧವಾರ(ಆಗಸ್ಟ್ 20) ಬೆಳಿಗ್ಗೆ ತಮ್ಮ ನಿವಾಸದಲ್ಲಿ ನಡೆದ ಸಾರ್ವಜನಿಕ ವಿಚಾರಣೆಯ ಸಂದರ್ಭದಲ್ಲಿ...

ಅರಸು ಪತ್ರಕರ್ತರನ್ನು ಹಚ್ಚಿಕೊಳ್ಳಲೂ ಇಲ್ಲ, ಓಲೈಸಲೂ ಇಲ್ಲ: ಕಲ್ಲೆ ಶಿವೋತ್ತಮರಾವ್

2025-26ನೇ ಸಾಲಿನ ಡಿ.ದೇವರಾಜ ಅರಸು ಪ್ರಶಸ್ತಿಗೆ ಹಿರಿಯ ಪತ್ರಕರ್ತ ಕಲ್ಲೆ ಶಿವೋತ್ತಮರಾವ್...

ದಾವಣಗೆರೆ | ಕೆ.ಎನ್‌. ರಾಜಣ್ಣ, ನಾಗೇಂದ್ರರ ಮರಳಿ ಸಂಪುಟ ಸೇರ್ಪಡೆಗೆ ವಾಲ್ಮೀಕಿ ಸಮಾಜ ಆಗ್ರಹ

"ಇತ್ತೀಚೆಗೆ ಚುನಾವಣೆ ಆಯೋಗದ ವಿರುದ್ಧ ಕಾಂಗ್ರೆಸ್ ಆರೋಪಕ್ಕೆ ವ್ಯತಿರಿಕ್ತ ಹೇಳಿಕೆ ನೀಡಿ...

Download Eedina App Android / iOS

X