ನಾವೆಲ್ಲಾ ಬಡ್ಡಿ ಮಕ್ಕಳು ಎಂದು ವ್ಯಂಗ್ಯವಾಡಿದ ಮುಖ್ಯಮಂತ್ರಿ ಚಂದ್ರು

Date:

Advertisements
  • ರಾಷ್ಟ್ರದ ಸಾಲ ₹175 ಲಕ್ಷ ಕೋಟಿ ಇದ್ದು, ರಾಜ್ಯದ ಸಾಲ ₹5.5 ಲಕ್ಷ ಕೋಟಿ ಮುಟ್ಟಿದೆ
  • ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ : ಚಂದ್ರು

“ಇದುವರೆಗೂ ರಾಷ್ಟ್ರ ಹಾಗೂ ರಾಜ್ಯದಲ್ಲಿ ಅಧಿಕಾರ ನಡೆಸಿದ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ಭ್ರಷ್ಟಾಚಾರ, ದುರಾಡಳಿತದಿಂದಾಗಿ ಮತ ನೀಡಿದ ನಾವುಗಳೆಲ್ಲರೂ ಸಾಲಗಾರರಿಗೆ ಲಕ್ಷಾಂತರ ಕೋಟಿ ಬಡ್ಡಿ ಕಟ್ಟುತ್ತಾ ಬಡ್ಡಿ ಮಕ್ಕಳಾಗಿದ್ದೇವೆ” ಎಂದು ಆಮ್‌ ಆದ್ಮಿ ಪಕ್ಷದ ನೂತನ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.

ಬೆಂಗಳೂರಿನ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ನಡೆದ ಆಮ್ ಆದ್ಮಿ ಪಕ್ಷದ ಪದಗ್ರಹಣ ಸಮಾರಂಭದಲ್ಲಿ ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು ಅವರು, “ರಾಷ್ಟ್ರದ ಸಾಲ ₹175 ಲಕ್ಷ ಕೋಟಿ ಇದ್ದು, ರಾಜ್ಯದ ಸಾಲ ₹5.5 ಲಕ್ಷ ಕೋಟಿ ಮುಟ್ಟಿದೆ. ₹35 ಸಾವಿರ ಕೋಟಿ ರೂಪಾಯಿಗಳಷ್ಟು ಬಡ್ಡಿಯನ್ನು ಕಟ್ಟಬೇಕಾಗಿದೆ. ಹೀಗಿರುವಾಗ ನಾವೆಲ್ಲ ಬಡ್ಡಿ ಮಕ್ಕಳು ಅಲ್ಲದೆ ಮತ್ತೇನು?” ಎಂದು ಪ್ರಶ್ನಿಸಿದರು.

“ದೆಹಲಿ ರಾಜ್ಯದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರ ಅಲ್ಲಿನ ಪ್ರಜೆಗಳಿಗೆ ವಿದ್ಯುತ್, ನೀರು, ಶಿಕ್ಷಣ, ಆರೋಗ್ಯ, ಸಾರಿಗೆ ಸೇರಿದಂತೆ ಎಲ್ಲ ಸವಲತ್ತುಗಳನ್ನು ಉಚಿತವಾಗಿ ನೀಡುತ್ತಿದ್ದರೂ ಸಹ ಸಾಲರಹಿತ ಬಜೆಟ್ ಮಂಡಿಸುತ್ತಿರುವುದು ಆಮ್ ಆದ್ಮಿ ಪಕ್ಷದ ವಿಶೇಷತೆ” ಎಂದು ಬಣ್ಣಿಸಿದರು.

Advertisements

“ಕೌಟಿಲ್ಯನ ಅರ್ಥಶಾಸ್ತ್ರದ ಪ್ರಕಾರ ಗಳಿಕೆ-ಉಳಿಕೆ-ಬಳಕೆ ಬಜೆಟ್‌ನ ಮೂಲ ಸ್ವರೂಪ. ದೇಶದಲ್ಲಿ ಗಳಿಕೆ ತೆರಿಗೆ ರೂಪದಲ್ಲಿ ಅತಿ ಹೆಚ್ಚಾಗಿದ್ದರೂ ಭ್ರಷ್ಟರ ಅಕ್ರಮ, ದುರಾಡಳಿತಗಳಿಂದಾಗಿ ಅವರುಗಳ ಸ್ವಾರ್ಥ ಗಳಿಕೆ ಹೆಚ್ಚಾಗಿದ್ದು, ಉಳಿಕೆ ಶೂನ್ಯಕ್ಕೆ ತಲುಪುತ್ತಿರುವುದು ದುರಂತ” ಎಂದರು.

“ರಾಜ್ಯದಲ್ಲಿ ಕಾಂಗ್ರೆಸ್, ಆಮ್ ಆದ್ಮಿ ಪಕ್ಷದ ಗ್ಯಾರಂಟಿಗಳನ್ನು ಕಾಪಿ ಮಾಡಿಲ್ಲ, ನೀಚತನದಿಂದ ಕದ್ದಿದೆ. ಇವರುಗಳ ಬಣ್ಣ ಆರು ತಿಂಗಳಲ್ಲಿ ಬಟಾ ಬಯಲಾಗಲಿದೆ. ರಾಜ್ಯದ ರೈತರಿಗೆ 24 ಗಂಟೆ ಉಚಿತ ವಿದ್ಯುತ್, ಸೂಕ್ತ ಬೆಂಬಲ ಬೆಲೆ, ಯುವಕರಿಗೆ ಉದ್ಯೋಗ, ಸಾಮಾನ್ಯ ಮಕ್ಕಳ ಭವಿಷ್ಯಕ್ಕಾಗಿ ಉತ್ತಮ ಶಿಕ್ಷಣ ಹಾಗೂ ಆರೋಗ್ಯ ನೀಡಬೇಕೆ ಹೊರತು ಒಂದು ದಿವಸದ ಗ್ಯಾರಂಟಿಗಳಲ್ಲ” ಎಂದು ಟೀಕಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಆತ್ಮಹತ್ಯೆ ಮಾಡಿಕೊಂಡ ಮಗನ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅಳಲು ತೋಡಿಕೊಂಡ ತಾಯಿ

ಮಣಿಪುರ ಘಟನೆಯ ಬಗ್ಗೆ ಆತಂಕ ವ್ಯಕ್ತಪಡಿಸಿ ಮಾತನಾಡಿದ ಮುಖ್ಯಮಂತ್ರಿ ಚಂದ್ರು, “ಪ್ರಧಾನಿ ಮೋದಿ ರಾಷ್ಟ್ರದ ಜನತೆಯ ಮುಂದೆ ಕ್ಷಮೆ ಕೇಳಬೇಕು. ಸದಾ ಸಂವಿಧಾನ, ಪ್ರಜಾಪ್ರಭುತ್ವವನ್ನು ಉಳಿಸಲು ನಾವು ಮಹಾ ಮೈತ್ರಿಯಲ್ಲಿ ಜೋಡಣೆಯಾಗಿದ್ದೇವೆ. ಕರ್ನಾಟಕ ರಾಜ್ಯವನ್ನು ಭ್ರಷ್ಟರ ಕೈಯಿಂದ ಕಿತ್ತುಕೊಳ್ಳುವುದೇ ನಮ್ಮ ಹೆಗ್ಗುರಿ. ಮುಂಬರುವ ರಾಜ್ಯದ ಜಿಲ್ಲಾ-ತಾಲೂಕು ಪಂಚಾಯಿತಿ, ಬಿಬಿಎಂಪಿ ಹಾಗೂ ಲೋಕಸಭಾ ಚುನಾವಣೆಯಲ್ಲಿ ನಾವು ಸ್ಪರ್ಧೆ ಮಾಡಲಿದ್ದೇವೆ. ಪಕ್ಷದ ಕಾರ್ಯಕರ್ತರುಗಳು ಹಾಗೂ ನಾಯಕರುಗಳು ಹಗಲಿರುಳು ದುಡಿಯಬೇಕು” ಎಂದು ಮುಖ್ಯಮಂತ್ರಿ ಚಂದ್ರು ಕರೆ ನೀಡಿದರು.

ಪದಗ್ರಹಣ ಸಮಾರಂಭದಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪಂಕಜ್ ಗುಪ್ತ, ರಾಷ್ಟ್ರೀಯ ಜಂಟಿ ಕಾರ್ಯದರ್ಶಿ ಪೃಥ್ವಿ ರೆಡ್ಡಿ, ನೂತನವಾಗಿ ರಾಜ್ಯ ಸಂಘಟನಾ ಕಾರ್ಯದರ್ಶಿಗಳಾಗಿ ನೇಮಕಗೊಂಡಿರುವ ಬಿ.ಟಿ. ನಾಗಣ್ಣ, ಅರ್ಜುನ ಪರಪ್ಪ ಹಲಗಿ ಗೌಡರ ಸೇರಿದಂತೆ ನೂತನವಾಗಿ ಆಯ್ಕೆಗೊಂಡಿರುವ ಉಪಾಧ್ಯಕ್ಷರುಗಳು ಸಹ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X