ಚುನಾವಣಾ ಅಕ್ರಮ ಪ್ರಕರಣ: ಶಾಸಕ ಗೌರಿಶಂಕರ್ ಶಾಸಕತ್ವ ಅಸಿಂಧು

Date:

Advertisements

ಮತದಾರರಿಗೆ ಆಮಿಷವೊಡ್ಡಿ ಚುನಾವಣಾ ಅಕ್ರಮ ಎಸಗಿದ ಪ್ರಕರಣದಲ್ಲಿ ತುಮಕೂರು ಗ್ರಾಮಾಂತರ ಜೆಡಿಎಸ್ ಶಾಸಕ ಗೌರಿ ಶಂಕರ್ ಅವರ ಶಾಸಕ ಸ್ಥಾನವನ್ನು ಕರ್ನಾಟಕ ಹೈಕೋರ್ಟ್‌ ಅಸಿಂಧುಗೊಳಿಸಿದೆ. ಹೈಕೋರ್ಟ್‌ ತೀರ್ಪಿನ ವಿರುದ್ಧ ಶಾಸಕ ಗೌರಿ ಶಂಕರ್ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲು ನಿರ್ಧರಿಸಿದ್ದು, ಈ ಬಗ್ಗೆ ಹೈಕೋರ್ಟ್‌ನಲ್ಲಿ ಮನವಿ ಮಾಡಿದ್ದಾರೆ. ಅವರ ಮನವಿಯನ್ನು ಪುರಸ್ಕರಿಸಿರುವ ಕೋರ್ಟ್‌, ತನ್ನ ತೀರ್ಪನ್ನು 30 ದಿನಗಳ ಮಟ್ಟಿಗೆ ತಡೆ ಹಿಡಿದಿದೆ.

2018ರ ವಿಧಾನಸಭಾ ಚುನಾವಣೆ ವೇಳೆ, ಗೌರಿ ಶಂಕರ್ ಅವರು ಮತದಾರರಿಗೆ ನಕಲಿ ವಿಮೆ ಬಾಂಡ್ ಆಮಿಷವೊಡ್ಡಿದ್ದರು. ಆ ಮೂಲಕ ಮತದಾರರನ್ನು ತಮ್ಮತ್ತ ಸೆಳೆದಿದ್ದರು ಎಂದು ಆರೋಪಿಸಿ, 2018ರಲ್ಲಿಯೇ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿ ಬಿ ಸುರೇಶ್ ಗೌಡ ಅರ್ಜಿ ಸಲ್ಲಿಸಿದ್ದರು.

ಸುಧೀರ್ಘ ಐದು ವರ್ಷಗಳ ಕಾಲ ಹೈಕೋರ್ಟ್‌ನಲ್ಲಿ ಅವರ ಅರ್ಜಿಯ ವಿಚಾರಣೆ ನಡೆದಿದೆ. ಇದೀಗ, ಗೌರಿ ಶಂಕರ್‌ ಅವರ ಶಾಸಕತ್ವವನ್ನು ಅಸಿಂಧುಗೊಳಿಸಿ ಹೈಕೋರ್ಟ್‌ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಆದೇಶ ಹೊರಡಿಸಿದೆ.

ಚುನಾವಣಾ ಅಕ್ರಮ ಆರೋಪದಲ್ಲಿ ಶಾಸಕ ಸ್ಥಾನ ಕಳೆದು ಕೊಂಡವರು ಆರು ವರ್ಷಗಳ ಕಾಲ ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ ಎಂಬ ನಿಯಮವಿದೆ. ಹೈಕೋರ್ಟ್‌ ತೀರ್ಪು ಜಾರಿಯಾದರೆ, ಗೌರಿ ಶಂಕರ್ ಕೂಡ ಹಾಲಿ ನಡೆಯುತ್ತಿರುವ ವಿಧಾನಸಭಾ ಚುನಾವಣೆಮತ್ತು ಮುಂದಿನ ಆರು ವರ್ಷಗಳ ಕಾಲ ನಡೆಯುವ ಯಾವುದೇ ಚುನಾವಣೆಯಲ್ಲಿ ಸ್ಪರ್ಧಿಸಲು ಸಾಧ್ಯವಾಗುವುದಿಲ್ಲ.

ಈ ಸುದ್ದಿ ಓದಿದ್ದೀರಾ?: ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಸದ್ಯ, ಗೌರಿ ಶಂಕರ್‌ ಅವರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ. ಹೀಗಾಗಿ, ಹೈಕೋರ್ಟ್‌ ತನ್ನ ಆದೇಶವನ್ನು 30 ದಿನಗಳ ಮಟ್ಟಿಗೆ ತಡೆಹಿಡಿದಿದೆ. ಒಂದು ವೇಳೆ, ಹೈಕೋರ್ಟ್‌ ತೀರ್ಪನ್ನು ಸುಪ್ರೀಂ ಕೋರ್ಟ್‌ ಎತ್ತಿಹಿಡಿದರೆ, ಗೌರಿ ಶಂಕರ್‌ ಅವರು ತಮ್ಮ ಶಾಸಕ ಸ್ಥಾನವನ್ನು ಕಳೆದುಕೊಳ್ಳುತ್ತಾರೆ. ಅಲ್ಲದೆ, ಚುನಾವಣೆಯಿಂದಲೂ ದೂರ ಉಳಿಯಬೇಕಾಗುತ್ತದೆ.

ಪ್ರಕರಣ ಹಿನ್ನೆಲೆ

2018ರ ಚುನಾವಣೆ ಸಂದರ್ಭ ಗೌರಿಶಂಕರ್ ಅವರು 32,000 ವಯಸ್ಕರು ಹಾಗೂ 16,000 ಮಕ್ಕಳಿಗೆ ನಕಲಿ ವಿಮಾ ಪಾಲಿಸಿ ಬಾಂಡ್ ವಿತರಿಸಿದ್ದರು. ಅವರು ವಿಮಾ ಪಾಲಿಸಿಯ ಆಮಿಷ ಒಡ್ಡಿ ಅಕ್ರಮವಾಗಿ ಚುನಾವಣೆ ಗೆದ್ದಿದ್ದಾರೆ ಎಂದು ಬಿಜೆಪಿ ಪರಾಜಿತ ಅಭ್ಯರ್ಥಿ ಸುರೇಶ್ ಗೌಡ ಆರೋಪಿಸಿದ್ದರು. ಅಲ್ಲದೆ, ಅವರ ಶಾಸಕ ಸ್ಥಾನವನ್ನು ಅಸಿಂಧುಗೊಳಿಸಬೇಕೆಂದು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಎಸ್ ಐ ಗಳ ವರ್ಗಾವಣೆ ; ಟ್ರಾಫಿಕ್ ನ‌ ತಿರುಮಲೇಶ್ ಸೇರಿ ಇಬ್ಬರು ಐಜಿ ಕಚೇರಿಗೆ

ಶಿವಮೊಗ್ಗ: ಪೂರ್ವ ವಲಯ ವ್ಯಾಪ್ತಿಯ ೩೫ ಸಬ್ ಇನ್ಸ್‌ಪೆಕ್ಟರ್‌ಗಳನ್ನು ವರ್ಗಾವಣೆ ...

ಕಲಬುರಗಿ | ಸಾಲದ ಹೊರೆ : ಭೀಮಾ ನದಿ ಹಿನ್ನೀರಿಗೆ ಹಾರಿ ರೈತ ಆತ್ಮಹತ್ಯೆ

ಸಾಲದ ಹೊರೆ ತಾಳಲಾರದೆ ರೈತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲಬುರಗಿ ತಾಲ್ಲೂಕಿನ...

ಉಡುಪಿ | ಕೊಲೆಗೈದು ಅಸಹಜ ಸಾವು ಎಂದು ಬಿಂಬಿಸಿದ ತಾಯಿ : ಪೊಲೀಸರಿಂದ ಬಂಧನ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಕಾನಂಗಿಯಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು...

ಶಿವಮೊಗ್ಗ | ಟೈಮ್ ಪಾಸ್ ಜಾಬ್ ಆಸೆಗೆ 6.78 ಲಕ್ಷ ರುಪಾಯಿ ಕಳೆದುಕೊಂಡ ಮಹಿಳೆ ; ಪ್ರಕರಣ ದಾಖಲು

ಶಿವಮೊಗ್ಗ ನಗರದ ಮಹಿಳೆಯೊಬ್ಬರು ಹೆಚ್ಚು ಹಣ ಗಳಿಸುವ ಉದ್ದೇಶದಿಂದ ಪಾರ್ಟ್‌ ಟೈಮ್‌...

Download Eedina App Android / iOS

X