ಹಾಸನ ಜಿಲ್ಲೆಯ ಹೇಮಾವತಿ ಜಲಾಶಯದ ಜಲಾನಯನ ಪ್ರದೇಶದಲ್ಲಿ ನಿರೀಕ್ಷೆಗಿಂತ ಉತ್ತಮ ಮಳೆಯಾಗುತ್ತಿದ್ದು ನದಿ ಪಾತ್ರ, ದಂಡೆ ಮತ್ತು ಆಸುಪಾಸಿನಲ್ಲಿ ವಾಸಿಸುತ್ತಿರುವ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಹೇಮಾವತಿ ಯೋಜನಾ ವೃತ್ತ ಸೂಪರಿಂಟೆಂಡಿಂಗ್ ಇಂಜಿನಿಯರ್ ಜ್ಯೋತಿ ಬಿ ಕೆ ಆದೇಶ ಹೊರಡಿಸಿದ್ದಾರೆ.
ಹೇಮಾವತಿ ಜಲಾಶಯದಲ್ಲಿ ಇನ್ನೂ 12.75 ಅಡಿಗಳಷ್ಟು ನೀರು ಸಂಗ್ರಹ ಬಾಕಿ ಇದೆ. ಹೆಚ್ಚಿನ ಪ್ರಮಾಣದಲ್ಲಿ ಜಲಾಶಯಕ್ಕೆ ನೀರು ಹರಿದು ಬರುವ ಸಾಧ್ಯತೆ ಹಿನ್ನಲೆ ಜಲಾಶಯದಿಂದ ಯಾವುದೇ ಸಮಯದಲ್ಲಾದರೂ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಸಾಧ್ಯತೆ ಇದೆ ಎಂದು ತಿಳಿಸಿರುವ ಅವರು ನದಿ ಪಾತ್ರದ ಜನರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳಲು ಸೂಚನೆ ನೀಡಿದ್ದಾರೆ.
ಇದನ್ನೂ ಓದಿ: ಹಾಸನ | 3 ದಿನಗಳಿಂದ ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ; ಆತ್ಮಹತ್ಯೆ ಶಂಕೆ