ಗದಗ | ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು: ಚಂದ್ರು ರಾಠೋಡ

Date:

Advertisements

“ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು ಖಾಸಗಿ ಶಾಲಾ ಕಾಲೇಜುಗಳು ವಿಪರಿತವಾದ ಡೊನೇಷನ್ ತೆಗೆದುಕೊಳ್ಳುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕಲು ತಾಲೂಕು ಮಟ್ಟದಲ್ಲಿ ತಹಸಿಲ್ದಾರರ ಅಧ್ಯಕ್ಷತೆಯಲ್ಲಿ ಡೊನೇಷನ್ ನಿಯಂತ್ರಣ ಸಮಿತಿ ರಚಿಸಬೇಕು” ಎಂದು ಎಸ್ಎಫ್ಐ ಜಿಲ್ಲಾಧ್ಯಕ್ಷ  ಚಂದ್ರು ರಾಠೋಡ ಒತ್ತಾಯಿಸುದರು.

ಗದಗ ಜಿಲ್ಲೆಯ ಗಜೇಂದ್ರಗಡ ಪಟ್ಟಣದಲ್ಲಿ ಕಾನೂನು ಬಾಹಿರವಾಗಿ ಶಾಲಾ ಕಾಲೇಜುಗಳಲ್ಲಿ ಶುಲ್ಕ ವಸೂಲಾತಿ ನಿಯಂತ್ರಿಸಲು ಮತ್ತು ವಸತಿ ನಿಲಯಗಳಲ್ಲಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಂತೆ ಎಸ್ಎಫ್ಐ  ಪ್ರತಿಭಟನೆ ನಡೆಸಿ ತಹಸೀಲ್ದಾರ ಕೀರಣಕುಮಾರ ಕುಲಕರ್ಣಿ ಅವರಿಗೆ ಮನವಿ ಸಲ್ಲಿಸಿ ಮಾತನಾಡಿದರು.

“ಶಿಕ್ಷಣ ಪ್ರೇಮಿಗಳು, ವಿದ್ಯಾರ್ಥಿ ಸಂಘಟನೆಯ ಮುಖಂಡರು, ಪೋಷಕರ ಸಂಘಟನೆಯ ಮುಖಂಡರು, ಶಿಕ್ಷಣ ಇಲಾಖೆ ಮತ್ತು ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರನ್ನು ಒಳಗೊಂಡ ಸಮಿತಿಯನ್ನು ರಚಿಸಿ ಡೊನೇಷನ್ ನಿಯಂತ್ರಣ ಮಾಡಲು ಮಾನ್ಯ ತಹಶೀಲ್ದಾರರು ಮುಂದಾಗಬೇಕು.  ಹಾಗೆಯೇ ಜಿಲ್ಲೆಯಲ್ಲೂ ಕೂಡ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಡೊನೇಷನ್ ನಿಯಂತ್ರಣ ಸಮಿತಿಯನ್ನು ರಚಿಸಬೇಕು” ಎಂದು ಒತ್ತಾಯಿಸಿದರು.

Advertisements

“ಗಜೇಂದ್ರಗಡ ತಾಲೂಕಿನಲ್ಲಿ ಬರುವ ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ಎಲ್ಲಾ ವಸತಿ ಶಾಲೆಗಳ ಅಡಿಯಲ್ಲಿ  ಬರುವ ವಸತಿ ನಿಲಯಗಳಲ್ಲಿ ಸರಿಯಾದ ಮೂಲಭೂತ ಸೌಕರ್ಯ ಇಲ್ಲದೆ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ” ಎಂದರು.

“ಸುಮಾರು ವರ್ಷಗಳಿಂದ ಹಾಸ್ಟೆಲ್ ಗಳಿಗೆ ಪೇಂಟಿಂಗ್, ಆಟದ ಸಾಮಗ್ರಿಗಳು, ಕರೇಂಟ್, ಫ್ಲೆಮಿಂಗ್ ಹಾಗೂ ಊಟದ ವೇಳಾಪಟ್ಟಿ ಬದಲಾವಣೆಯಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ತಾಲೂಕಿನಾದ್ಯಂತ ಎಲ್ಲಾ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿಯಾದ BioMetric (ಬಯೋಮೆಟ್ರಿಕ್) ನಲ್ಲೂ ಅವ್ಯವಹಾರಗಳು ನಡೆಯುತ್ತಿದೆ. ಸೊಪ್ ಕೀಟ್, ಶುಚಿ ಕೀಟ್ ಗಳನ್ನು ನೀಡಿರುವುದಿಲ್ಲಾ. ವಸತಿ ನಿಲಯ ಮೇಲ್ವಿಚಾರಕರು ಸುಮಾರು ವರ್ಷಗಳಿಂದ ಒಂದೇ ಹಾಸ್ಟೆಲ್ ನಲ್ಲಿ ಇರುವುದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆಯಾಗುತ್ತಿದೆ. ಆದ ಕಾರಣ ತಾವುಗಳು ಆದಷ್ಟು ಬೇಗ ಎಲ್ಲಾ ಸಮಸ್ಯೆಗಳನ್ನೂ ಸರಿಪಡಿಸಲು ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಕಾಳಸಂತೆಯಲ್ಲಿ ಪಡಿತರ ಅಕ್ಕಿ ಸಾಗಣೆ ;ವಾಹನ ಜಪ್ತಿ ಮೂವರ ಬಂಧನ

“ಸಮಸ್ಯೆಗಳನ್ನು ಬಗೆಹರಿಸಿದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಮನವಿ ಸಂದರ್ಭದಲ್ಲಿ ಎಸ್ ಎಫ್ ಐ ನ ಮುಖಂಡರು ಶರಣು ಎಮ್, ಉಮೇಶ್ ಮಾದರ, ಕೃಷ್ಣ ತಳವಾರ, ಕಳಕಯ್ಯ ಹೀರೇಮಠ, ರಾಜಾಬಕ್ಷಿ ಶಿರಗುಂಪಿ, ನಾಗರಾಜ ಗುರಿಕಾರ, ಕೀರಣ ಕುಕಂಬಳ್ಳಿ, ಶಿವು ಕರಡಿ, ಮಾಳಿಂಗರಾಯ ನರಗುಂದ, ಸಿದ್ಧಲಿಂಗಪ್ಪ, ಚಂದ್ರು ಆರ್ರೇರ್, ಸಚೀನ, ಮೇಲ್ಲೇಶ, ಬಸವರಾಜ, ಮಾರುತಿ, ಯಲ್ಲಾಲಿಂಗ, ಆಕಾಶ ಇನ್ನೂ ಅನೇಕರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X