ಮಂಗಳೂರು | ‘ಆ್ಯಂಟಿ ಕಮ್ಯುನಲ್ ವಿಂಗ್’ ಸ್ಥಾಪನೆ ಬಳಿಕವೂ ಮುಂದುವರಿದ ಅನೈತಿಕ ಪೊಲೀಸ್‌ಗಿರಿ; ಇಬ್ಬರ ಬಂಧನ

Date:

Advertisements
  • ‘ಕೇರಳ ಸ್ಟೋರಿ’ ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವ ಎಂದು ಹೇಳಿ ಹಲ್ಲೆ
  • ಉರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದ ಯುವತಿಯರು

ವಿದ್ಯಾರ್ಥಿನಿಯರ ಮೇಲೆ ಹಲ್ಲೆ ನಡೆಸಿ ಅನೈತಿಕ ಪೊಲೀಸ್‌ಗಿರಿ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೂಡಲೇ ಕಾರ್ಯ ಪ್ರವೃತ್ತರಾದ ಮಂಗಳೂರು ಪೊಲೀಸರು, ಇಬ್ಬರು ಆರೋಪಿಗಳನ್ನು ಶನಿವಾರ ಬಂಧಿಸಿದ್ದಾರೆ.

ಬಂಧಿತರನ್ನು ದೀಕ್ಷಿತ್(32) ಮತ್ತು ಲಾಯ್ಡ್ ಪಿಂಟೋ(32) ಎಂದು ಗುರುತಿಸಲಾಗಿದೆ.

ಮಂಗಳೂರಿನ ಬ್ಯಾಚುಲರ್ ಆಫ್ ಹಾಸ್ಪಿಟಲ್ ಆ್ಯಡ್ಮೀಸ್ಟ್ರೇಷನ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪಣಂಬೂರು ಬೀಚ್‌ಗೆ ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳನ್ನು ವೀಕ್ಷಿಸುತ್ತಿದ್ದ ಈ ಇಬ್ಬರು ಆರೋಪಿಗಳು, ತಮ್ಮ ಮೊಬೈಲ್‌ನಲ್ಲಿ ವಿದ್ಯಾರ್ಥಿಗಳ ಚಲನವಲನಗಳನ್ನು ಚಿತ್ರೀಕರಿಸಿದ್ದರು. ಆದರೆ ಇದನ್ನು ಗಮನಿಸಿದ್ದರೂ ಕೂಡ ವಿದ್ಯಾರ್ಥಿಗಳ ಗುಂಪಿನ ಯುವಕರು, ತಮ್ಮಪಾಡಿಗೆ ಇದ್ದರು. ಬಳಿಕ ಯುವಕರು ಬೈಕ್‌ನಲ್ಲಿ ವಾಪಸ್ ಹೋಗಿದ್ದರೆ, ವಿದ್ಯಾರ್ಥಿನಿಯರು ಬಸ್ ನಲ್ಲಿ ತೆರಳಿದ್ದರು.

Advertisements

ವಿದ್ಯಾರ್ಥಿನಿಯರ ಪೈಕಿ ಕ್ರಿಶ್ಚಿಯನ್ ಸಮುದಾಯದ ಯುವತಿ ನಗರದ ಚಿಲಿಂಬಿಯಲ್ಲಿ ಬಸ್‌ನಿಂದ ಇಳಿದು ತನ್ನ ಪಿಜಿ ಕಡೆ ತೆರಳುತ್ತಿದ್ದ ವೇಳೆ ಹಿಂಬಾಲಿಸಿಕೊಂಡು ಬಂದು, ಯುವತಿಯ ಮೈಮೇಲೆ ಕೈಹಾಕಿ ಬೆದರಿಸಿದ್ದು, ‘ಕೇರಳ ಸ್ಟೋರಿ’ ಸಿನಿಮಾ ನೋಡಿಯೂ ನಿಮಗೆ ಬುದ್ಧಿ ಬರುವುದಿಲ್ವಾ ಎಂದು ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದ್ದರು ಎಂದು ತಿಳಿದುಬಂದಿದೆ.

ನಗರದ ಬಿಜೈ ಕಾಪಿಕಾಡ್ ನ 7ನೇ ಕ್ರಾಸ್‌ನಲ್ಲಿ ತಡೆದು ಅವಾಚ್ಯ ಶಬ್ದಗಳಿಂದ ಬೈದು, ಹಲ್ಲೆ ನಡೆಸಲಾಗಿತ್ತು. ಬಳಿಕ ಈ ಘಟನೆಗೆ ಸಂಬಂಧಿಸಿದಂತೆ ಉರ್ವ ಪೊಲೀಸ್ ಠಾಣೆಯಲ್ಲಿ ಸಂತ್ರಸ್ತ ವಿದ್ಯಾರ್ಥಿನಿಯರು ಪ್ರಕರಣ ದಾಖಲಿಸಿದ್ದರು.

ಆರೋಪಿಗಳನ್ನು ದಸ್ತಗಿರಿ ಮಾಡಿರುವ ಪೊಲೀಸರು, ಕೃತ್ಯಕ್ಕೆ ಬಳಸಿದ ಸ್ಕೂಟರ್ ಮತ್ತು ಮೊಬೈಲ್‌ ಗಳನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪ್ರಕರಣದ ತನಿಖೆ ಮುಂದುವರೆಸಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಕುಲದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

ಆ್ಯಂಟಿ ಕಮ್ಯುನಲ್ ವಿಂಗ್ ಸ್ಥಾಪನೆಯ ಬಳಿಕವೂ ಮುಂದುವರಿದ ಅನೈತಿಕ ಪೊಲೀಸ್‌ಗಿರಿ ಮುಂದುವರಿದಿದ್ದು, ಪೊಲೀಸರ ಕ್ಷಿಪ್ರ ಕಾರ್ಯಾಚರಣೆಯಿಂದ ಆರೋಪಿಗಳ ಬಂಧನವಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X