ಸಾಲದ ಹೊರೆ ತಾಳಲಾರದೆ ರೈತರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುರಪುರ ತಾಲ್ಲೂಕಿನ ಜಾಲಿಬೆಂಚಿ ಗ್ರಾಮದಲ್ಲಿ ನಡೆದಿದೆ.
ಅಂಬ್ರೇಶ (44) ಆತ್ಮಹತ್ಯೆಗೆ ಶರಣಾದ ರೈತ. ಬ್ಯಾಂಕ್ ಸಾಲ, ಖಾಸಗಿಯವರ ಬಳಿ ಕೈಸಾಲ ಸೇರಿ ಸುಮಾರು 10 ಲಕ್ಷದಷ್ಟು ಸಾಲ ಮಾಡಿದ್ದರು ಎಂದು ತಿಳಿದು ಬಂದಿದೆ.
ಮೃತರಿಗೆ ಒಂದು ಎಕರೆ ಜಮೀನು ಇದ್ದು, ನಿರೀಕ್ಷೆಯಂತೆ ಫಸಲು ಬಾರದಕ್ಕೆ ಸಾಲ ತೀರಿಸಲು ಸಾಧ್ಯವಾಗಲಿಲ್ಲ. ಇದರಿಂದ ಸಾಲ ತೀರಿಸುವುದು ಹೇಗೆ ಎಂದು ಚಿಂತೆಗೀಡಾಗಿ ವಿಷ ಸೇವಿಸಿದ್ದರು. ಕೂಡಲೇ ಅವರನ್ನು ಸುರಪುರ ತಾಲೂಕು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಈ ಸಂಬಂಧ ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಬೀದರ್ | ಜೀ ಕನ್ನಡ ಮಹಾನಟಿ ಸ್ಪರ್ಧೆಗೆ ದಿವ್ಯಾಂಜಲಿ ಆಯ್ಕೆ : ಗುರುಬಸವ ಪಟ್ಟದ್ದೇವರು ಶುಭ ಹಾರೈಕೆ