ಅಫಜಲಪುರ ತಾಲ್ಲೂಕಿನ ದೇವಲಗಾಣಗಾಪುರದ ದತ್ತಾತ್ರೇಯ ದರ್ಶನಕ್ಕೆ ಕುಟುಂಬದೊಂದಿಗೆ ತೆರಳಿದ್ದ ಬಾಲಕ ಭೀಮಾನದಿಯಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಆಳಂದ ತಾಲ್ಲೂಕಿನ ಖಜೂರಿ ಲಕ್ಷ್ಮಿಕಾಂತ್ ಪರಶುರಾಮ (17) ಪರಶುರಾಮ ಎಂದು ಗುರುತಿಸಲಾಗಿದೆ.
ಗಾಣಗಾಪುರದ ದೇವರ ದರ್ಶನಕ್ಕೆ ಕುಟುಂಬದೊಂದಿಗೆ ತೆರಳಿದ್ದ, ಪುಣ್ಯ ಸ್ನಾನ ಮಾಡಲು ಭೀಮಾ ನದಿಗೆ ಇಳಿದ ವೇಳೆ ಬಾಲಕ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದ. ಸ್ಥಳೀಯ ಮೀನುಗಾರರು, ಅಗ್ನಿಶಾಮಕ ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ.
ಈ ಸಂಬಂಧ ಮೃತನ ಬಾಲಕನ ತಂದೆ ರಾಜು ಪರಶುರಾಮ ನೀಡಿದ ದೂರಿನ ಮೇರೆಗೆ ದೇವಲಗಾಣಗಾಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಯಾದಗಿರಿ | ಸಾಲದ ಹೊರೆ : ವಿಷ ಸೇವಿಸಿ ರೈತ ಆತ್ಮಹತ್ಯೆ