ಮಂಡ್ಯದಲ್ಲಿ ನಡೆದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮೀಸಲಿಟ್ಟ ಅನುದಾನದಲ್ಲಿ ಬಳಕೆಯಾಗದೆ ಇರುವ 2 ಕೋಟಿ ರೂ.ಗೂ ಅಧಿಕ ಹಣದಲ್ಲಿ ಕನ್ನಡ ಭವನವನ್ನು ನಿರ್ಮಾಣ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.
ಈ ಸಂಬಂಧ ರಾಜ್ಯ ಸರ್ಕಾರವು ಆದೇಶ ಹೊರಡಿಸಿದ್ದು, 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಿವಿಧ ಮೂಲಗಳಿಂದ ಹಣ ಸಂಗ್ರಹಿಸಲಾಗಿತ್ತು. ಈ ಹಣದಲ್ಲಿ ಬಳಕೆಯಾಗದೆ ಇರುವ 2,18,68,392 ರೂ.ಗಳನ್ನು ಮಂಡ್ಯ ಜಿಲ್ಲೆಯಲ್ಲಿ ಕನ್ನಡ ಭವನ ನಿರ್ಮಿಸಲು ಬಳಕೆ ಮಾಡಿಕೊಳ್ಳಬಹುದು ಎಂದು ಮಂಡ್ಯ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ಅನುಮತಿ ನೀಡಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಪಾದಚಾರಿಗಳನ್ನು ‘ಬೇವರ್ಸಿ’ಗಳಂತೆ ನಡೆಸಿಕೊಳ್ತಿದೆ ಬೆಂಗಳೂರು ನಗರ!
ಕನ್ನಡ ಭವನ ನಿರ್ಮಾಣದ ಅಂದಾಜು ವೆಚ್ಚ ಮತ್ತು ಸಂಬಂಧಪಟ್ಟ ದಾಖಲೆಗಳನ್ನು ಸರಕಾರಕ್ಕೆ ಸಲ್ಲಿಸಬೇಕು. ಕಾಮಗಾರಿಯನ್ನು ಅನುದಾನದ ಮಿತಿಯಲ್ಲಿಯೇ ಅನುಷ್ಠಾನಗೊಳಿಸಬೇಕು. ಈ ಕುರಿತು ಸರಕಾರ ಹೊರಡಿಸಿದ ಸುತ್ತೋಲೆಗಳಲ್ಲಿನ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.