ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ನಾಗರಿಕ ಸೇವಾ ಸಮಿತಿ ಅಧ್ಯಕ್ಷ ದಿಲೀಪ ಮುಧಾಳೆ ಆಗ್ರಹಿಸಿದ್ದಾರೆ.
ಈ ಸಂಬಂಧ ಜೂನ್ 16ರಂದು ಬೀದರ್ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಗಿರೀಶ ಬದೋಲೆ ಹಾಗೂ ಲೋಕಾಯುಕ್ತ ಅಧಿಕಾರಿಗಳಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ʼಕಮಲನಗರ ಪಂಚಾಯತಿ ಪಿಡಿಒ ಅವರು ಸಾರ್ವಜನಿಕರೊಂದಿಗೆ ಮನಬಂದಂತೆ ವರ್ತಿಸುತ್ತಿದ್ದಾರೆ. ಯಾವುದೇ ಕೆಲಸ ಮಾಡಿಕೊಳ್ಳಲು ಹೋದರೆ ರಾಜಾರೋಷವಾಗಿ ಹಣ ವಸೂಲಿ ಮಾಡುತ್ತಿದ್ದಾರೆ. ಹಣ ನೀಡದಿದ್ದರೆ ಯಾವುದೇ ಕೆಲಸ ಆಗುತ್ತಿಲ್ಲ. ಹಣ ಪಡೆದು ಕಾನೂನು ಬಾಹಿರವಾಗಿ ಆಸ್ತಿಯ ಖಾತಾ ಮಾಡುತ್ತಿದ್ದಾರೆʼ ಎಂದು ಆರೋಪಿಸಿದ್ದಾರೆ.
ʼಕೂಡಲೇ ಪಂಚಾಯಿತಿಯಲ್ಲಿ ನಡೆದ ಭ್ರಷ್ಟಾಚಾರದ ಹಾಗೂ ಅಧಿಕಾರ ದುರುಪಯೋಗದ ಕುರಿತು ಸಮಗ್ರ ತನಿಖೆ ನಡೆಸಿ ಸೇವೆಯಿಂದ ವಜಾಗೊಳಿಸಬೇಕುʼ ಎಂದು ಒತ್ತಾಯಿಸಿದ್ದಾರೆ.
ಇದನ್ನೂ ಓದಿ : ಯಾದಗಿರಿ | ಜಮೀನು ವಿವಾದ : ತಮ್ಮನನ್ನು ಕೊಂದ ಅಣ್ಣ