ದಲಿತ ಸಂಘರ್ಷ ಸಮಿತಿ (ಸಂಯೋಜಕ) ಸಂಸ್ಥಾಪಕ ರಾಜ್ಯ ಸಂಯೋಜಕ ವಿ. ನಾಗರಾಜ ಅವರಿಗೆ ವಿಧಾನ ಪರಿಷತ್‌ಗೆ ಅಥವಾ ನಿಗಮ ಮಂಡಳಿಯ ಅಧ್ಯಕ್ಷರನಾಗಿ ಆಯ್ಕೆ ಮಾಡಬೇಕೆಂದು ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಮಿತಿ ಸರಕಾರಕ್ಕೆ ಒತ್ತಾಯಿಸಿದೆ.
ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತ್ರತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬರಲು ದಲಿತ ಸಂಘರ್ಷ ಸಮಿತಿಗಳ ಐಕ್ಯ ಹೋರಾಟ ಚಾಲನಾ ಸಮಿತಿಯ ಪ್ರಮುಖರಲ್ಲಿ ವಿ.ನಾಗರಾಜ ಕೂಡ ಒಬ್ಬರಾಗಿದ್ದು, ಕಾಂಗ್ರೆಸ್ ಸರಕಾರ ಎರಡು ವರ್ಷಗಳ ಪೂರೈಸಿದ ಹಿನ್ನೆಲೆ ದಲಿತ ಸಮುದಾಯದ ನಾಯಕ ವಿ.ನಾಗರಾಜ ಅವರ ಶ್ರಮ ಗೌರವಿಸಿ ಸೂಕ್ತ ಸ್ಥಾನಮಾನ ನೀಡಬೇಕುʼ ಎಂದು ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಲಿತ ಸಂಘರ್ಷ ಸಮಿತಿ ರಾಜ್ಯ ಸಮಿತಿ ಸದಸ್ಯರಾದ ರಾಯಪ್ಪ ಸಾಲಿಮನಿ, ಚಂದ್ರಶೇಖರ ಹತ್ತಿಗೂಡೂರ, ಮಾನಪ್ಪ ಜೇಗ್ರಿ, ಲಕ್ಷ್ಮಣ ಆರ್.ಹಳಿಸಗರ ಅವರು ಮುಖಾಂತರ ಎಐಸಿಸಿ ಅಧ್ಯಕ್ಷ ಡಾ.ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ.ಮಹಾದೇವಪ್ಪ ಅವರಿಗೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಬಳ್ಳಾರಿ | ಮೂವರು ಪುತ್ರಿಯರೊಂದಿಗೆ ಕೃಷಿ ಹೊಂಡಕ್ಕೆ ಹಾರಿ ತಾಯಿ ಆತ್ಮಹತ್ಯೆ