ದಾವಣಗೆರೆ | ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದು ದುರುಪಯೋಗದ ವಿರುದ್ಧ ಕಾನೂನಾತ್ಮಕ ಕ್ರಮ; ಎಸ್ಪಿ ಉಮಾ ಪ್ರಶಾಂತ್

Date:

Advertisements

ನಕಲಿ, ಸುಳ್ಳು ಜಾತಿ ಪ್ರಮಾಣ ಪತ್ರಗಳ ಮೂಲಕ ಮೀಸಲಾತಿ ದುರುಪಯೋಗ ಪಡಿಸಿಕೊಂಡರೆ, ಅಂತಹವರ ವಿರುದ್ಧ ಕಾನೂನಾತ್ಮಕ ಕ್ರಮ ಜರುಗಿಸಲಾಗುವುದು ಎಂದು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯಲ್ಲಿ ದಾವಣಗೆರೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾ ಪ್ರಶಾಂತ್ ಎಚ್ಚರಿಕೆ ನೀಡಿದರು.

ದಾವಣಗೆರೆ ನಗರದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

1002181066

ಸಮಾಜದಲ್ಲಿ ಆರ್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದವರಿಗೆ, ತುಳಿತಕ್ಕೆ ಒಳಗಾದ ಸಮುದಾಯಗಳಿಗೆ ಸಮಾನತೆ ಕಲ್ಪಿಸಲು ಸಂವಿಧಾನದಲ್ಲಿ ಮೀಸಲಾತಿ ಕಲ್ಪಿಸಲಾಗಿದೆ. ಆದರೆ ಕೆಲವೊಂದಿಷ್ಟು ಸಮುದಾಯಗಳು ನಕಲಿ ಜಾತಿ ಪ್ರಮಾಣ ಪತ್ರಗಳನ್ನು ಪಡೆಯುವ ಮೂಲಕ ನೈಜವಾಗಿ ತುಳಿತಕ್ಕೆ ಒಳಗಾದ ಫಲಾನುಭವಿಗಳಿಗೆ ಅನ್ಯಾಯವೆಸಗುತ್ತಿವೆ ಎಂದು ದಲಿತ ಮುಖಂಡರೊಬ್ಬರ ಆರೋಪಕ್ಕೆ ಉತ್ತರಿಸಿದ ಎಸ್ಪಿ ಉಮಾಪ್ರಶಾಂತ್ “ಈ ಕುರಿತು ನಿರ್ದಿಷ್ಟವಾಗಿ ಪ್ರಕರಣಗಳು ಕಂಡು ಬಂದಿದ್ದು, ಮಾಹಿತಿ ಇದ್ದಲ್ಲಿ ದೂರು ನೀಡಿ, ಅಂತಹವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು” ಎಂದರು.

Advertisements
1002181067

ಜಗಳೂರಿನ ದಲಿತ ಮುಖಂಡರೊಬ್ಬರು ಮಾತನಾಡಿ, “ಇಂದಿನ ಆಧುನಿಕತೆಯ ಜಗತ್ತಿನಲ್ಲಿದ್ದರೂ ಸಹ ಇಂದಿಗೂ ಅಸ್ಪೃಶ್ಯತೆ ತಾಂಡವಾಡುತ್ತಿದೆ. ಕೆಲವು ಪುಣ್ಯಸ್ಥಳಗಳ ದೇವಸ್ಥಾನಗಳಿಗೆ ಮುಕ್ತ ಪ್ರವೇಶವಿಲ್ಲವಾಗಿದೆ” ಎಂದು ಬೇಸರ ವ್ಯಕ್ತಪಡಿಸಿದರು. ಹಾಗೆಯೇ ಮತ್ತೊಬ್ಬ ದಲಿತ ಮುಖಂಡ ಮಾತನಾಡಿ “ಪ್ರಸ್ತುತ ಹರಿಜನರನ್ನು ಗುರಿಯಾಗಿಸಿಕೊಂಡು ಮತಾಂತರಿಸುವಂತಹ ಪ್ರಕರಣಗಳು ಕಂಡುಬರುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು” ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಎಸ್ಪಿ “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನಸಂಖ್ಯೆ ಹೆಚ್ಚಿರುವ ಗ್ರಾಮೀಣ ಹಾಗೂ ತಾಲ್ಲೂಕು ಮಟ್ಟದ ಜನನಿಬಿಡ ಪ್ರದೇಶಗಳಲ್ಲಿ ಜಾತೀಯತೆ, ಬಾಲ್ಯವಿವಾಹದಂತಹ ಜಾಗೃತಿ ಕಾರ್ಯಗಾರಗಳನ್ನು ಹಮ್ಮಿಕೊಳ್ಳಲಾಗುವುದು. ಆದಾಗ್ಯೂ ತಮಗೆ ಇಂತಹ ಪ್ರಕರಣಗಳ ಕುರಿತು ನಿಖರ ಮಾಹಿತಿ ಇದ್ದಲ್ಲಿ ಸಂಬಂಧಪಟ್ಟ ಠಾಣೆಯಲ್ಲಿ ದೂರು ದಾಖಲಿಸಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

1002181069

“ಈ ಹಿಂದಿಗಿಂತಲೂ ಹೆಚ್ಚಿನ ಸಂಖ್ಯೆಯಲ್ಲಿ ಗಸ್ತು ಕಾರ್ಯಾಚರಣೆ ನಡೆಸುತ್ತಿದ್ದರೂ ಕೂಡ ಶೇ.80 ಕ್ಕೂ ಅಧಿಕ ಪ್ರಕರಣಗಳು ಬೀಗ ಹಾಕಿದ ಹಾಗೂ ಒಂಟಿ ಮನೆಗಳಲ್ಲಿ ಕಳ್ಳತನ ಪ್ರಕರಣಗಳು ದಾಖಲಾಗುತ್ತಿವೆ. ಆದ್ದರಿಂದ ಅವಶ್ಯಕತೆ ಇರುವಲ್ಲಿ ಸಿಸಿಟಿವಿಗಳನ್ನು ಅಳವಡಿಸಿ. ಅವುಗಳಿಂದ ತನಿಖೆಗೆ ಸಹಾಯವಾಗುತ್ತದೆ. ಅನುಮಾನಾಸ್ಪದ ವ್ಯಕ್ತಿಗಳ ಚಲನವಲನ ಕಂಡುಬಂದಲ್ಲಿ ಮಾಹಿತಿ ನೀಡಿದರೆ. ಇಂತಹ ಪ್ರಕರಣಗಳಿಗೆ ಕಡಿವಾಣ ಹಾಕಲು ಸಹಾಯವಾಗಲಿದೆ” ಎಂದರು.

“ಸಭೆಯಲ್ಲಿ ಪ್ರಸ್ತಾಪಿಸಿದ ದೂರುಗಳ ಪೈಕಿ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಪರಿಶೀಲಿಸಿ ತ್ವರಿತವಾಗಿ ಪರಿಹಾರ ಕಂಡುಕೊಳ್ಳಲಾಗುವುದು. ಹಾಗೆಯೇ ಇನ್ನಿತರೆ ಇಲಾಖೆಗಳ ದೂರುಗಳನ್ನು ಸಂಬಂಧಿಸಿದ ಇಲಾಖೆಗಳ ಗಮನಕ್ಕೆ ಕಳುಹಿಸಿ ವರದಿ ಪಡೆಯಲಾಗುತ್ತದೆ. ಎಲ್ಲಾ ಸಮುದಾಯದವರು ಯಾವುದೇ ಜಾತಿ ವೈಷಮ್ಯಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಬಾಳಬೇಕು. ಹೆಲ್ಮೆಟ್ ಧರಿಸಿ ರಸ್ತೆ ಸುರಕ್ಷತಾ ಕ್ರಮಗಳನ್ನು ಪಾಲಿಸುವುದರೊಂದಿಗೆ ಉತ್ತಮ ನಾಗರೀಕ ಸಮಾಜ ನಿರ್ಮಾಣಕ್ಕೆ ಸಹಕರಿಸಬೇಕು” ಎಂದು ಸೂಚಿಸಿದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪ್ರಮುಖ ವೃತ್ತಕ್ಕೆ ಶರಣ ಮಡಿವಾಳ ಮಾಚಿದೇವರ ಹೆಸರಿಡಲು ಒತ್ತಾಯಿಸಿ ಸಿಎಂಗೆ ಮನವಿ

ಸಭೆಯಲ್ಲಿ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಂಜುನಾಥ್, ಚನ್ನಗಿರಿ ಸಹಾಯಕ ಪೊಲೀಸ್ ಅಧೀಕ್ಷಕ ಸ್ಯಾಮ್ ವರ್ಗೀಸ್, ಗ್ರಾಮಾಂತರ ಪೊಲೀಸ್ ಉಪಾಧೀಕ್ಷಕ ಬಿ.ಎಸ್.ಬಸವರಾಜ್, ನಗರ ಪೊಲೀಸ್ ಉಪಾಧೀಕ್ಷಕ ಬಿ.ಶರಣಬಸವೇಶ್ವರ ಸೇರಿದಂತೆ ವಿವಿಧ ಸಂಘನಟನೆಗಳ ಮುಖಂಡರು, ಸಾರ್ವಜನಿಕರು ಉಪಸ್ಥಿತರಿದ್ದರು.

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

Download Eedina App Android / iOS

X