ವಿಧಾನಪರಿಷತ್ ಸದಸ್ಯರ ನೇತೃತ್ವದಲ್ಲಿ ‘ಕೆರೆ ಅಧ್ಯಯನ ಸಮಿತಿ’: ಡಿಸಿಎಂ ಡಿ ಕೆ ಶಿವಕುಮಾರ್

Date:

Advertisements

ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ ಕೆ ಶಿವಕುಮಾರ್ ಸೂಚನೆ ನೀಡಿದರು.

ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಡಿಸಿಎಂ ಮಾತನಾಡಿದರು.

“ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ.‌ ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ” ಎಂದು ಅಧಿಕಾರಿಗಳಿಗೆ ತಿಳಿಸಿದರು.

Advertisements

ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ

“ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ? ನಗರದಲ್ಲಿ ಎಷ್ಟು ಬಾಲ್ಯ ವಿವಾಹಗಳು ನಡೆದಿವೆ ಎನ್ನುವ ಮಾಹಿತಿ ಇದೆಯೇ? ಬೆಂಗಳೂರು ನಗರದಲ್ಲಿ ವಿದ್ಯಾವಂತರು, ಬುದ್ಧಿವಂತರು, ಸುಶಿಕ್ಷಿತರು ಇದ್ದಾರೆ. ಬೆಂಗಳೂರು ದಿನೇ ದಿನೇ ಬೆಳೆಯುತ್ತಿದೆ. ಗ್ರೇಟರ್ ಬೆಂಗಳೂರು ಆಗಿ ಮಾರ್ಪಾಡಾಗಿದೆ. ಹೊರವಲಯದ ಪ್ರದೇಶಗಳನ್ನು ಗ್ರೇಟರ್ ಬೆಂಗಳೂರು ವ್ಯಾಪ್ತಿಗೆ ಸೇರಿಸಿಕೊಳ್ಳುವ ಒತ್ತಡವಿದೆ. ನಗರದ ಸೌಲಭ್ಯಗಳನ್ನು ಪಡೆಯಲು ಜನ ಉತ್ಸುಕರಾಗಿದ್ದಾರೆ” ಎಂದು ಹೇಳಿದರು.

ಆಸಕ್ತಿ ಇದ್ದರೆ ನನ್ನ ಜೊತೆ ಕೆಲಸ ಮಾಡಿ

“ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಯಾರ್ಯಾರು ಏನೇನೂ ಮಾಡುತ್ತಿದ್ದಾರೆ ಅನ್ನೋ ಸಂಪೂರ್ಣ ಮಾಹಿತಿ ಇದೆ. ನನಗೇನೂ ಗೊತ್ತಾಗಲ್ಲ ಅನ್ನುವ ಭ್ರಮೆ ಬೇಡ. ಆತ್ಮ ಸ್ಥೈರ್ಯ ಕುಂದಿಸಬಾರದು ಎಂದು ನಿಮ್ಮ ವಿರುದ್ದ ಕ್ರಮ ತೆಗೆದುಕೊಳ್ಳುತ್ತಿಲ್ಲ. ನನ್ನ ಜೊತೆ ಕೆಲಸ ಮಾಡಲು ಆಸಕ್ತಿ ಇದ್ದರೆ ಇರಬಹುದು, ಇಲ್ಲದಿದ್ದರೆ ಬೇರೆ ಕಡೆಗೆ ನೀವು ಹೊರಡಬಹುದು” ಎಂದು ಖಡಕ್ ಎಚ್ಚರಿಕೆ ನೀಡಿದರು.

“ಶೈಕ್ಷಣಿಕ ಕ್ಷೇತ್ರಗಳಿಗೆ ಸಿಎಸ್ ಆರ್ ನಿಧಿಗಳನ್ನು ತರುವ ಬಗ್ಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯಯಿ ಸಿಇಓಗಳು ಉದ್ಯಮಿಗಳ ಸಭೆ ಕರೆದು ಚರ್ಚೆ ನಡೆಸಬೇಕು. ವಿದ್ಯಾರ್ಥಿ ನಿಲಯಗಳಲ್ಲಿ ಇರುವ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಫಲಿತಾಂಶ ಉತ್ತಮಗೊಳಿಸಲು ನಿಗಾವಹಿಸಬೇಕು ಹಾಗೂ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕು” ಎಂದರು.

“ಬೆಂಗಳೂರಿನ ರಸ್ತೆಗಳನ್ನು ಸುಸ್ಥಿತಿಯಲ್ಲಿಡಿ, ಅಗತ್ಯ ಬಿದ್ದ ಕಡೆ ಹೊಸ ರಸ್ತೆ ನಿರ್ಮಾಣ ಮಾಡಿ. ನಗರದ ಪ್ರತಿಯೊಂದು ಶಾಲಾ,‌ ಕಾಲೇಜುಗಳ ಆಡಳಿತ ಮಂಡಳಿ,‌ ಮುಖ್ಯೋಪಾಧ್ಯಾಯರು, ಕುಲಪತಿಗಳ ಸಭೆ ಕರೆದು ಮಾದಕವಸ್ತು ನಿಯಂತ್ರಣದ ಬಗ್ಗೆ ತಿಳಿಸಬೇಕು. ಜೊತೆಗೆ ಶಾಲಾ, ಕಾಲೇಜುಗಳ ಹತ್ತಿರ ಅಂಗಡಿಗಳಲ್ಲಿ ಅಥವಾ ಇತರೇ ರೀತಿಯಲ್ಲಿ ಮಾದಕವಸ್ತುಗಳ ರವಾನೆ ಬಗ್ಗೆ ಅನುಮಾನ ಬಂದರೆ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು” ಎಂದು ಚರ್ಚೆ ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಳಂಕಿತ ನೈಸ್ ಕಂಪನಿಗೆ ಯಾವುದೇ ಕಾಮಗಾರಿ ನೀಡದಂತೆ ಸರ್ಕಾರಕ್ಕೆ ನೈಸ್ ಭೂ ಸಂತ್ರಸ್ತ ರೈತರ ಆಗ್ರಹ

ಬಿಎಂಐಸಿ-ನೈಸ್ ಕಂಪನಿ ಕುರಿತು ಮುಂದಿನ ನಿರ್ಧಾರ ಕೈಗೊಳ್ಳಲು ರಾಜ್ಯ ಸರ್ಕಾರ ಸಲಹಾ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಪರಿಸರ ಸ್ನೇಹಿ ಗಣೇಶ ಹಬ್ಬಕ್ಕೆ ಮಾರ್ಗಸೂಚಿ ಪ್ರಕಟ, ನಿಯಮ ಉಲ್ಲಂಘಿಸಿದರೆ ಕ್ರಿಮಿನಲ್‌ ಕೇಸ್‌ ದಾಖಲು

ಬೆಂಗಳೂರು ನಗರದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಮಾತ್ರ ಪೂಜಿಸಬೇಕಾಗಿ ಮತ್ತು...

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

Download Eedina App Android / iOS

X