ದೇಶದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅತ್ಯಂತ ಸಮರ್ಥ/ಜವಾಬ್ದಾರಿಯುತವಾಗಿ ಎದುರಿಸಬಲ್ಲ ನಾಯಕ ರಾಹುಲ್ ಗಾಂಧಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್ ಮನೋಹರ್ ಹೇಳಿದರು.
ಇಂದು ಬೆಂಗಳೂರಿನ ಶೇಷಾದ್ರಿಪುರದ ಕರ್ನಾಟಕ ಅಂಧ ಮಕ್ಕಳ ಶಾಲೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರ 55ನೇ ಜನ್ಮ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, “ರಾಹುಲ್ ಗಾಂಧಿ ಅವರ ಹೇಳಿಕೆಗಳನ್ನು ಬಿಜೆಪಿ ನಾಯಕರು ಹಾಗೂ ಕೇಂದ್ರದ ಅನೇಕ ಸಚಿವರು ಅಪಹಾಸ್ಯ ಮಾಡುತ್ತಿದ್ದರು. ಆದರೆ, ಇಂದು ದೇಶದ ಜನ ರಾಹುಲ್ ಅವರ ಹೇಳಿಕೆಗಳನ್ನು ಸ್ವಾಗತಿಸಿ ಅವರ ಬೆಂಬಲಕ್ಕೆ ನಿಂತು ಕೇಂದ್ರ ಸರ್ಕಾರದ ಇಬ್ಭಗೆ ನೀತಿಯ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಜಾತಿಗಣತಿ ಪ್ರಸ್ತಾವನೆಯನ್ನು ಇಂದು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ. ರಾಹುಲ್ ಗಾಂಧಿ ಅವರ ದೂರದೃಷ್ಟಿ ಯೋಜನೆಗಳನ್ನ ಕಾರ್ಯಗತಗೊಳಿಸುವಲ್ಲಿ ಕೇಂದ್ರ ಬಿಜೆಪಿ ಸರ್ಕಾರ ವಿಫಲವಾಗಿದೆ. ಅವರ ಸಲಹೆಯನ್ನು ತಿರಸ್ಕರಿಸುವ ಕೇಂದ್ರ ಸರ್ಕಾರಕ್ಕೆ ದೇಶವನ್ನು ಅಭಿವೃದ್ಧಿಯತ್ತ ಕೊಂಡೊಯ್ಯುವ ಹಾದಿಯಲ್ಲಿ ಹಿನ್ನಡೆಯಾಗಿರುವುದು ಸಾಬೀತಾಗಿದೆ.
ದೇಶದ ರಕ್ಷಣೆ ವಿಷಯದಲ್ಲಿ ಯುವ ಪೀಳಿಗೆಗೆ ಹಾಗೂ ಬಡವರ ಬಗ್ಗೆ ಹೆಚ್ಚು ಕಾಳಜಿ ಹೊಂದಿರುವ ನಾಯಕ ರಾಹುಲ್ ಗಾಂಧಿ. ಅವರ ಬಡವರ ಪರ ಕಾಳಜಿ ಕಾರ್ಯಗಳು ಮತ್ತಷ್ಟು ಮುಂದುವರೆಯಲಿ” ಎಂದು ಶುಭಾಷಯ ತಿಳಿಸಿದರು.

ಕಾರ್ಯಕ್ರಮದಲ್ಲಿ ಕುಶಾಲ್ ಹರುವೇಗೌಡ, ಪುಟ್ಟರಾಜು, ಓಬಳೇಶ್, ಉಮೇಶ್, ನವೀನ್ ಸಾಯಿ, ಆನಂದ್ ಕುಮಾರ್, ಪ್ರವೀಣ್, ಸಂಜಯ್ ಸಶಿಮಠ ಸೇರಿದಂತೆ ಹಲವಾರು ಕಾರ್ಯಕರ್ತರು, ಅಂಧ ಮಕ್ಕಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬೆಂಗಳೂರು | ಅಲೆಮಾರಿ ಸಮುದಾಯ, ಲೈಂಗಿಕ ಕಾರ್ಯಕರ್ತೆಯರ ಕುಟುಂಬಕ್ಕೆ ಮನೆ ಹಕ್ಕುಪತ್ರ ವಿತರಣೆ