ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ಮಾಡಲಾಗಿದ್ದು, 56 ಪೊಲೀಸ್ ಸಿಬ್ಬಂದಿಗಳ ವರ್ಗಾವಣೆ ಮಾಡಿ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಆದೇಶ ಹೊರಡಿಸಿದ್ದಾರೆ.
ಕೆಲ ದಿನಗಳ ಹಿಂದೆ ಕರಾವಳಿಯ ಐಪಿಎಸ್ – ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆಡಳಿತ ಮತ್ತು ಕಾನೂನು ಸುವ್ಯವಸ್ಥೆ ಬಲಪಡಿಸುವ ಯತ್ನವನ್ನು ರಾಜ್ಯ ಸರ್ಕಾರ ಮಾಡಿತ್ತು.
ಕರಾವಳಿಯಲ್ಲಿ ಕೋಮು ಸೌಹಾರ್ಧತೆಗೆ ಧಕ್ಕೆ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವ ಗೃಹ ಇಲಾಖೆ ಈಗಾಗಲೇ ಹಲವು ಕ್ರಮಗಳನ್ನು ಕೈಗೊಂಡಿದೆ. ಕೋಮು ಸೌಹಾರ್ದತೆ ಕಾಪಾಡುವ ನಿಟ್ಟಿನಲ್ಲಿ ವಿಶೇಷ ಟಾಸ್ಕ್ಫೋರ್ಸ್ ಕೂಡ ರಚನೆ ಮಾಡಲಾಗಿದೆ. ಇದೀಗ ಪೊಲೀಸ್ ಇಲಾಖೆಯ ತಳಮಟ್ಟದಲ್ಲೂ ಭಾರೀ ಸರ್ಜರಿ ನಡೆದಿದೆ.
ಹಲವು ವರ್ಷಗಳಿಂದ ಒಂದೇ ಕಡೆ ಇದ್ದ ಸಿಬ್ಬಂದಿಯನ್ನು ವರ್ಗಾವಣೆ ಮಾಡಲಾಗಿದೆ. ಬಜ್ಪೆ ಠಾಣೆ ಹೆಡ್ ಕಾನ್ಸ್‌ಟೇಬಲ್ ರಶೀದ್ರನ್ನು ಮಂಗಳೂರು ಮಹಿಳಾ ಠಾಣೆಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಹೆಡ್ ಕಾನ್ಸ್‌ಟೇಬಲ್ ರಶೀದ್ ಸುಹಾಸ್ ಹಂತಕರ ಜತೆ ಕೈಜೋಡಿಸಿದ್ದರು ಎಂದು ಬಿಜೆಪಿ ನಾಯಕರು ಆರೋಪಿಸಿದ್ದರು.



