ನೈಸ್‌ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟ ಡಿಸಿಎಂ ಡಿ ಕೆ ಶಿವಕುಮಾರ್:‌ ಎಚ್‌ ಡಿ ಕುಮಾರಸ್ವಾಮಿ ಆರೋಪ

Date:

Advertisements
  • ಇಡೀ ಯೋಜನೆ ಸರ್ಕಾರ ವಶಕ್ಕೆ ಪಡೆಯಲಿ: ಆಗ್ರಹ
  • ‘ಸಿದ್ದನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ: ಟೀಕೆ

ನೈಸ್ ಯೋಜನೆಗೆ ಎಚ್‌ ಡಿ ದೇವೇಗೌಡ ಅವರೇ ಸಹಿ ಹಾಕಿದ್ದು ಎಂದು ಹೇಳುವ ಮೂಲಕ ತಾವು ಎಸಗಿದ ಅಕ್ರಮಕ್ಕೆ ತೇಪೆ ಹಚ್ಚಲು ಹೊರಟಿದ್ದಾರೆ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, “ದೇವೇಗೌಡರ ಕಾಲದಲ್ಲಿ ಆಗಿದ್ದ ಮೂಲ ಒಪ್ಪಂದದ ಬಗ್ಗೆ ಡಿ ಕೆ ಶಿವಕುಮಾರ್‌ ಅವರದ್ದು ಧ್ಯಾನಸ್ಥ ಮೌನ ಯಾಕೆ” ಎಂದು ಪ್ರಶ್ನಿಸಿದ್ದಾರೆ.

“ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ಸ್ವತಃ ನೀವೇ ನೇಮಿಸಿದ್ದ ಸದನ ಸಮಿತಿ (2014-2016) ವರದಿಯ ಮೇಲೆ ಖಡಕ್ ಕ್ರಮ ಜರುಗಿಸಿ. ವರದಿಯಲ್ಲಿ ನೈಸ್ ಅಕ್ರಮಗಳ ಭಾಗವತವೇ ತೆರೆದುಕೊಂಡಿದೆ. ಇಡೀ ಯೋಜನೆಯನ್ನು ಸರ್ಕಾರ ವಶಕ್ಕೆ ಪಡೆಯಲು ದಿಟ್ಟ ಹೆಜ್ಜೆ ಇಡಿ. ‘ಸಿದ್ದ ನೆಪ’ ಹೇಳಿ ಸಮಯವನ್ನು ಕೊಲ್ಲಬೇಡಿ. ಬಹುಮತ ಇದ್ದರೆ ಸಾಲದು, ಬದ್ಧತೆಯೂ ಇರಬೇಕು” ಎಂದು ಕಿಡಿ ಕಾರಿದ್ದಾರೆ.

Advertisements

“ಸಿದ್ದರಾಮಯ್ಯ ಅವರೇ ನೀವು ಈಗ ಕರ್ನಾಟಕದ ಮುಖ್ಯಮಂತ್ರಿ. ನನಗೂ ಮುಖ್ಯಮಂತ್ರಿ, ಮಹಾದೇವಪ್ಪ ಅವರಿಗೂ ಮುಖ್ಯಮಂತ್ರಿ! ಕಾಕಾ ಪಾಟೀಲರಿಗೂ ಮುಖ್ಯಮಂತ್ರಿ!! ನಿಮ್ಮನ್ನು ‘ಸುಳ್ಳುರಾಮಯ್ಶ’ ಎಂದು ಕರೆಯುವುದು ನನಗೆ ಸುತಾರಾಂ ಇಷ್ಟವಿಲ್ಲ. ಏಕೆಂದರೆ, ನಿಮ್ಮ ಹೆಸರಿನಲ್ಲೇ ‘ರಾಮ’ರಿದ್ದಾರೆ” ಎಂದು ಲೇವಡಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ಮಣಿಪುರ ಗಲಭೆ; ಸರ್ಕಾರಗಳು ಮತ್ತು ಕೋರ್ಟುಗಳು ವಿವೇಚನೆ ಕಳೆದುಕೊಂಡವೇ?

“ನಾನು ರೈತರ ಸಾಲ ಮನ್ನಾ ಮಾಡಿದೆ ಎನ್ನುವುದು ಎಷ್ಟು ಸತ್ಯವೋ, ಅದಕ್ಕೆ ನೀವು ಹೆಜ್ಜೆಹೆಜ್ಜೆಗೂ ಅಡ್ಡಿ ಮಾಡಿದ್ದೂ ಅಷ್ಟೇ ಸತ್ಯ. ಭಾಗ್ಯಗಳಿಗೆ ನಯಾಪೈಸೆ ಕಡಿಮೆ ಆಗಬಾರದು ಎಂದು ನನಗೆ ಕೊಟ್ಟ ಚಿತ್ರಹಿಂಸೆ ಅಸತ್ಯವೇ? ಗಟ್ಟಿ ದನಿಯಲ್ಲಿ ಅಬ್ಬರಿಸಿ ಹೇಳಿದರೆ ಸುಳ್ಳು ಸತ್ಯವಾಗುವುದಿಲ್ಲ. ಸತ್ಯರಾಮಯ್ಯರಾಗಿ ಇತಿಹಾಸದಲ್ಲಿ ದಾಖಲಾಗಿ” ಎಂದು ಕುಟುಕಿದ್ದಾರೆ.

“ತಾವು ಈಗ ಫುಲ್ ಬ್ಯುಸಿ, ನಾನು ಬಲ್ಲೆ. ಆದರೂ ಕೊಂಚ ಬಿಡುವು ಮಾಡಿಕೊಳ್ಳಿ, ಸದನ ಸಮಿತಿ ವರದಿಯ ಮೇಲೆ ಕಣ್ಣಾಡಿಸಿ. ದೇವೇಗೌಡರು ಸಿಎಂ ಆಗಿದ್ದ 1995ರ ಅಕ್ಟೋಬರ್, ನವೆಂಬರಿನಲ್ಲಿ ಈ ಯೋಜನೆಗೆ ಸಹಿ ಹಾಕುವ ವೇಳೆ ಇಂದಿನ ಮುಖ್ಯಮಂತ್ರಿಗಳೂ ಅಂದು ಹಣಕಾಸು ಸಚಿವರಾಗಿದ್ದರು. ಅವರಿಗೂ ಸತ್ಯ ಗೊತ್ತಿರುತ್ತದೆ. ಒಮ್ಮೆ ವಿಚಾರಿಸಲು ನಿಮಗೇನು ಸಮಸ್ಯೆ” ಎಂದು ಪ್ರಶ್ನಿಸಿದ್ದಾರೆ.

ನುಡಿದಂತೆ ನಡೆಯಿರಿ: ಸವಾಲು

“ಸದನ ಸಮಿತಿಯ ಕೊನೆ ಪ್ಯಾರಾ ಓದಿಕೊಳ್ಳಿ. ಸಮಿತಿ ಸಿಬಿಐ ತನಿಖೆಗೆ ಶಿಫಾರಸು ಮಾಡಿದೆ. ನಿಮಗೆ ಧೈರ್ಯವಿದ್ದರೆ ಸಿಬಿಐ ತನಿಖೆ ನಡೆಸಿ, ತಪ್ಪಿತಸ್ಥರ ಮೇಲೆ ಕ್ರಮ ಜರುಗಿಸಿ. ನೂರಾ ಮೂವತ್ತೈದು ಸೀಟುಗಳ ಬಹುಮತ ಸರಕಾರ ನಿಮ್ಮದಲ್ಲವೇ? ನುಡಿದಂತೆ ನಡೆಯುವ ಸರ್ಕಾರವಲ್ಲವೇ? ನೀವು ನುಡಿದಂತೆ ನಡೆಯುವ ಸಮಯ ಬಂದಿದೆ. ನಡೆದು ತೋರಿಸಿ” ಎಂದು ಸವಾಲು ಹಾಕಿದ್ದಾರೆ.

“ಆಲ್ಕೋಹಾಲಿನ ಬೆಲೆ ಏರಿಸಿದ ನಂತರ ಕಾಂಗ್ರೆಸ್‌ ಸರ್ಕಾರ ಹಾಲಿನ ಬೆಲೆಯನ್ನೂ ಲೀಟರಿಗೆ ₹3 ಹೆಚ್ಚಿಸಿ ಶ್ರಮಜೀವಿಗಳ ಕಿಸೆಗೆ ಕನ್ನ ಕೊರೆದಿದೆ. ಒಂದು ಕೈಯ್ಯಲ್ಲಿ ಕೊಟ್ಟು, ಇನ್ನೊಂದು ಕೈಯ್ಯಲ್ಲಿ ಕಸಿದುಕೊಳ್ಳುತ್ತಿದೆ! ಸ್ವತಃ ತಾವೇ ಕಿವಿಯಲ್ಲಿ ಹೂವಿಟ್ಟುಕೊಂಡಿದ್ದ ಕಾಂಗ್ರೆಸ್ಸಿಗರು, ಜನರ ತಲೆಯ ಮೇಲೆ ಫ್ಲವರ್ ಪಾಟ್ ಇಡುತ್ತಿದ್ದಾರೆ” ಎಂದು ಟೀಕಿಸಿದೆ.

“ಆರಂಭದಲ್ಲಿಯೇ ವಿದ್ಯುತ್ ಶಾಕ್ ಕೊಟ್ಟಿದ್ದ ಸರ್ಕಾರ ಗೃಹಜ್ಯೋತಿಯನ್ನು ಜನರ ಪಾಲಿಗೆ ಸುಡುಜ್ಯೋತಿ ಮಾಡಿತ್ತು. ಏರಿದ ಬೆಲೆಗಳನ್ನು ಕೆಳಗಿಳಿಸಲು ಕೈಲಾಗದ ಈ ಸರ್ಕಾರ ವಿಧಾನ ಕಲಾಪ ಮುಗಿಯುತ್ತಿದ್ದಂತೆಯೇ ಜನತೆಗೆ ಹೊಸದಾಗಿ ಬೆಲೆ ಏರಿಕೆ ಗ್ಯಾರಂಟಿ, ಬೆಲೆಭಾಗ್ಯವನ್ನು ಕರುಣಿಸಿ ಕೈತೊಳೆದುಕೊಂಡಿದೆ” ಎಂದು ಕುಟುಕಿದ್ದಾರೆ.

ಬೆಲೆ ಏರಿಕೆ ಗ್ಯಾರಂಟಿ

“ಚುನಾವಣೆ ಪ್ರಣಾಳಿಕೆಯಲ್ಲಿ ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನದ ಭರವಸೆ ಕೊಟ್ಟಿದ್ದವರು ಎರಡೇ ತಿಂಗಳಲ್ಲಿ ಅದನ್ನು ಮರೆತೇ ಹೋಗಿದ್ದಾರೆ!! ಹಸುಗಳ ಹಿಂಡಿ, ಬೂಸಾ ಬೆಲೆ ಇಳಿಕೆಗೂ ಯಾವ ಗ್ಯಾರಂಟಿಯೂ ಇಲ್ಲ. ಇವರಿಗೆ ಆಲ್ಕೋಹಾಲಾದರೇನು? ಹಾಲಾದರೇನು? ಖಜಾನೆ ತುಂಬಬೇಕಷ್ಟೇ. ಈಗ ಜನರ ಬದುಕೇ ಹಾಲಾಹಲವಾಗಿದೆ” ಎಂದು ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X